ಒಮಿಕ್ರಾನ್‌ ಬಗ್ಗೆ ನಿರ್ಲಕ್ಷ್ಯ ಬೇಡ: ಕೇಂದ್ರದಿಂದ ಎಚ್ಚರಿಕೆ

ಕೊರೊನಾ ಪಾಸಿಟಿವಿಟಿ ದರ ಶೇ.1.1 ರಷ್ಟಿತ್ತು. ಬುಧವಾರದ ವೇಳೆಗೆ ಅದು ಶೇ.11.05 ಕ್ಕೇರಿಕೆಯಾಗಿದೆ.

Team Udayavani, Jan 13, 2022, 6:15 AM IST

thumb 4

ಹೊಸದಿಲ್ಲಿ: “ದೇಶದ ಸುಮಾರು 300 ಜಿಲ್ಲೆಗಳಲ್ಲಿ ವಾರದ ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಿದ್ದು, ಕೊರೊನಾದ ಒಮಿಕ್ರಾನ್‌ ರೂಪಾಂತರಿಯನ್ನು ಸಾಮಾನ್ಯ ನೆಗಡಿ-ಜ್ವರ ಎಂದು ಹಗುರವಾಗಿ ಪರಿಗಣಿಸಬೇಡಿ. ಕೂಡಲೇ ಲಸಿಕೆ ಪಡೆಯಿರಿ.’

ಹೀಗೆಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ದೇಶವಾಸಿಗಳಿಗೆ ಕರೆ ನೀಡಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರ, ಪಶ್ಚಿಮ ಬಂಗಾಲ, ದಿಲ್ಲಿ, ತಮಿಳುನಾಡು, ಕರ್ನಾಟಕ, ಉತ್ತರಪ್ರದೇಶ, ಕೇರಳ ಮತ್ತು ಗುಜರಾತ್‌ “ಕಳವಳಕಾರಿ ರಾಜ್ಯ’ಗಳಾಗಿ ಬದಲಾಗಿವೆ ಎಂದೂ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌ ಹೇಳಿದ್ದಾರೆ.

ಡಿ. 30ರಂದು ದೇಶದ ಕೊರೊನಾ ಪಾಸಿಟಿವಿಟಿ ದರ ಶೇ.1.1 ರಷ್ಟಿತ್ತು. ಬುಧವಾರದ ವೇಳೆಗೆ ಅದು ಶೇ.11.05 ಕ್ಕೇರಿಕೆಯಾಗಿದೆ. ಒಮಿಕ್ರಾನ್‌ ಸಾಮಾನ್ಯ ಶೀತ-ಜ್ವರ ಅಲ್ಲ, ಅದನ್ನು ಹಗುರವಾಗಿ ಪರಿಗಣಿಸದಿರಿ. ನಾವೆಲ್ಲರೂ ಆದಷ್ಟು ಎಚ್ಚರಿಕೆಯಿಂದಿರಬೇಕು, ಲಸಿಕೆ ಪಡೆಯಬೇಕು ಮತ್ತು ಕೊರೊನಾ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್‌ ಹೇಳಿದ್ದಾರೆ. ಜತೆಗೆ  ಎಲ್ಲೆಡೆಯೂ ಸಾಕಷ್ಟು ವೈದ್ಯಕೀಯ ಆಮ್ಲಜನಕ ದಾಸ್ತಾನು ಇರುವಂತೆ ನೋಡಿಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸೂಚಿಸಿದೆ.

ಇದನ್ನೂ ಓದಿ:ಕೋವಿಡ್ ಭಾರಿ ಏರಿಕೆ : ರಾಜ್ಯದಲ್ಲಿ ಇಂದು 21 ಸಾವಿರ ಕೇಸ್; 10 ಸಾವು

ಮತ್ತಷ್ಟು ಮಂದಿಗೆ ಸೋಂಕು: ಪಂಜಾಬ್‌ ಮಾಜಿ ಸಿಎಂ ಕ್ಯಾ| ಅಮರೀಂದರ್‌ ಸಿಂಗ್‌ ಹಾಗೂ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದಿಲ್ಲಿಯಲ್ಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿನ ಸುಮಾರು 50 ಸಿಬಂದಿಗೂ ಪಾಸಿಟಿವ್‌ ಆಗಿದೆ.

2 ಲಕ್ಷದ ಸನಿಹಕ್ಕೆ ದೈನಂದಿನ ಸೋಂಕು
ಮಂಗಳವಾರದಿಂದ ಬುಧವಾರಕ್ಕೆ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 1,94,720 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 442 ಮಂದಿ ಸಾವಿಗೀಡಾಗಿದ್ದಾರೆ. ಒಮಿಕ್ರಾನ್‌ ಕೇಸುಗಳ ಸಂಖ್ಯೆ 4,868ಕ್ಕೇರಿಕೆಯಾಗಿದೆ ಎಂದೂ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ದಿಲ್ಲಿಯಲ್ಲಿ ರವಿವಾರ 27,561 ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.26.22ಕ್ಕೇರಿಕೆಯಾಗಿದೆ. ಅದೇ ರೀತಿ ಮುಂಬಯಿಯಲ್ಲೂ ದಿಢೀರ್‌ ಹೆಚ್ಚಳವಾಗಿದ್ದು, 16,420 ಮಂದಿಗೆ ಒಂದೇ ದಿನ ಸೋಂಕು ದೃಢಪಟ್ಟಿದೆ.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.