ಇಂದು ವಿಶ್ವ ಗುಲಾಬಿ ದಿನ; ಕ್ಯಾನ್ಸರ್‌ ರೋಗಿಗಳಿಗಿರಲಿ  ನಮ್ಮೆಲ್ಲರ ಪ್ರೀತಿಯ ಹಾರೈಕೆ

ಕ್ಯಾನ್ಸರ್‌ ಕಾಯಿಲೆ ಬಗ್ಗೆ ಜನರಿಗೆ ಇನ್ನೂ ಸೂಕ್ತ ಅರಿವು ಮೂಡಿಲ್ಲ.

Team Udayavani, Sep 22, 2021, 1:40 PM IST

Untitled-1

ಮನುಕುಲ ವನ್ನು ಕಾಡುವ ಮಾರಣಾಂತಿಕ ಕಾಯಿಲೆಯಾಗಿರುವ ಕ್ಯಾನ್ಸರ್‌ಗೆ ತುತ್ತಾಗಿರುವವರು ಪಡುವ ಬವಣೆ ಅಷ್ಟಿಷ್ಟಲ್ಲ. ಅವರನ್ನು ಅತೀವವಾಗಿ ಕಾಡುವ ನೋವು, ಅವರಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅನುಸರಿಸಲಾಗುವ ಬಲು ಕಠಿನ ವಿಧಾನಗಳು, ನೀಡಲಾಗುವ ಔಷಧಗಳು..ಇವೆಲ್ಲವೂ ಕ್ಯಾನ್ಸರ್‌ ಪೀಡಿತರ ಬದುಕನ್ನು ಜರ್ಝರಿತಗೊಳಿಸುತ್ತವೆ. ಇಂಥವರ ಜೀವನದಲ್ಲಿ ಉಲ್ಲಾಸ, ಭರವಸೆಯನ್ನು ಮೂಡಿಸಲು ಪ್ರತೀ ವರ್ಷ ಸೆ. 22ರಂದು ವಿಶ್ವ ಗುಲಾಬಿ ದಿನವನ್ನು ಆಚರಿಸಲಾಗುತ್ತದೆ.

ಗುಲಾಬಿ ಬಳಕೆ ಸಾಂಕೇತಿಕ :

ಗುಲಾಬಿ ಅರಳಿದಾಗ ಅದು ಎಷ್ಟೊಂದು ಸುಮಧರ, ಸುಂದರವಾಗಿ ಕಾಣಿಸುತ್ತದೆ. ಆದರೆ ಇಂಥ ಹೂವು ಅರಳುವುದು ಮುಳ್ಳುಗಳಿಂದ ಕೂಡಿದ ಗಿಡದಲ್ಲಿ. ಗುಲಾಬಿ ಹೂವನ್ನು ಕಂಡಾಗ ಯಾರ ಮನಸ್ಸು ಅರಳದೇ ಇರಲಾರದು. ಈ ಕಾರಣದಿಂದಾಗಿಯೇ ಗುಲಾಬಿ ಪ್ರೀತಿಯ ಸಂಕೇತ. ನಮ್ಮ ಪ್ರೀತಿಪಾತ್ರರಿಗೆ ನಮ್ಮ ಪ್ರೀತಿ, ಕಾಳಜಿಯನ್ನು ತೋರಿಸಲು ನಾವು ಕಂಡುಕೊಂಡಿರುವ ಅತ್ಯಂತ ಸುಲಭ ಆದರೆ ಅಷ್ಟೇ ಶಕ್ತಿಯುತ ಮಾರ್ಗವೆಂದರೆ ಅವರಿಗೊಂದು ಗುಲಾಬಿ ಹೂ ನೀಡುವುದು. ಇದು ತೀರಾ ಸರಳ ಎಂದೆನಿಸಿದರೂ ಈ ಕೊಡುಗೆಯ ಹಿಂದೆ ಅಪಾರ ಪ್ರೀತಿ, ಕಾಳಜಿ ಅಡಗಿರುತ್ತದೆ ಎಂಬುದನ್ನು ಯಾರೂ ಅಲ್ಲಗಳೆಯಲಾರರು. ಈ ಕಾರಣಕ್ಕಾಗಿಯೇ ಕ್ಯಾನ್ಸರ್‌ ರೋಗಿಗಳ ಬಾಳಲ್ಲಿ ನವೋಲ್ಲಾಸ ಮೂಡಿಸುವ ಮತ್ತು ಕ್ಯಾನ್ಸರ್‌ ಕಾಯಿಲೆಯ ಬಗೆಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನವಾಗಿ “ವಿಶ್ವ ಗುಲಾಬಿ ದಿನ’ವನ್ನು ಆಚರಿಸಲಾಗುತ್ತದೆ.

ಆಚರಣೆ ಹೇಗೆ? :

ಈ ದಿನದಂದು ಕ್ಯಾನ್ಸರ್‌ ರೋಗಿಗಳಿಗೆ ಗುಲಾಬಿ ಹೂವನ್ನಿತ್ತು ಅವರ ಬಗೆಗೆ ಕಾಳಜಿ, ಪ್ರೀತಿ ತೋರಿಸುವ ಮೂಲಕ ಅವರಲ್ಲಿ ಜೀವನೋಲ್ಲಾಸ ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಇದರ ಜತೆಯಲ್ಲಿ ಮಾರಕ ಕ್ಯಾನ್ಸರ್‌ ಕಾಯಿಲೆಯ ಬಗೆಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಅಷ್ಟು ಮಾತ್ರವಲ್ಲದೆ ಈ ದಿನದಂದು ಕ್ಯಾನ್ಸರ್‌ ರೋಗಿಗಳೊಂದಿಗೆ ಒಂದಿಷ್ಟು ಹೊತ್ತು ಬೆರೆಯುವ ಮೂಲಕ  ರೋಗದ ವಿರುದ್ಧ ಹೋರಾಡಲು ಅವರಲ್ಲಿ ಭಾವನಾತ್ಮಕವಾಗಿ ಮತ್ತು ಮಾನಸಿಕವಾಗಿ ಧೈರ್ಯ, ಸ್ಥೈರ್ಯ ತುಂಬಲಾಗುತ್ತದೆ. ಈ ಎಲ್ಲ ಚಟುವಟಿಕೆಗಳು ಸಹಜವಾಗಿ ರೋಗದಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಕ್ಯಾನ್ಸರ್‌ ಪೀಡಿತರ ಮನಸ್ಸಿನಲ್ಲಿ ಶಾಂತಿ, ನೆಮ್ಮದಿಯನ್ನು ಮೂಡಿಸುತ್ತದೆ. ಸಹಜವಾಗಿಯೇ ಇದು ಅವರ ಜೀವಿತಾವಧಿಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ.

ಹಿನ್ನೋಟ :

ಕೆನಡಾದ 12 ವರ್ಷದ ಬಾಲಕಿ ಮೆಲಿಂಡಾ ರೋಸ್‌ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಳು. ಕಾಯಿಲೆಯ ಅಂತಿಮ ಹಂತದಲ್ಲಿದ್ದ ಆಕೆ ಇನ್ನು ಹೆಚ್ಚು ದಿನ ಬದುಕುಳಿಯಲಾರಳು ಎಂದು ಆಕೆಯನ್ನು ಪರೀಕ್ಷಿಸಿದ ವೈದ್ಯರು ಕೈಚೆಲ್ಲಿದ್ದರು. ಇದರ ಹೊರತಾಗಿಯೂ ಎದೆಗುಂದದ ಮೆಲಿಂಡಾ ಆರು ತಿಂಗಳುಗಳ ಕಾಲ ಅತ್ಯಂತ  ಸಂತಸದಿಂದ ತನ್ನ ಜೀವನವನ್ನು ಕಳೆದಳು. ಈ ಅವಧಿಯಲ್ಲಿ ಆಕೆ ಸಾವಿರಾರು ಕ್ಯಾನ್ಸರ್‌ ರೋಗಿಗಳನ್ನು ಭೇಟಿಯಾಗಿ ಅವರಲ್ಲಿ ಹೊಸ ಆಶಾವಾದ ಮತ್ತು ಸಂತಸವನ್ನು ಮೂಡಿಸುವಲ್ಲಿ ಯಶಸ್ವಿಯಾದಳು. ಇಂಥ ದಿಟ್ಟ ಬಾಲಕಿ ಮೆಲಿಂಡಾ ರೋಸ್‌ಳ ಸ್ಮರಣಾರ್ಥ ಪ್ರತೀ ವರ್ಷ ಸೆ. 22ರಂದು ವಿಶ್ವ ಗುಲಾಬಿ ದಿನವನ್ನು ಆಚರಿಸಲಾಗುತ್ತದೆ.

ಜನಜಾಗೃತಿ ಅವಶ್ಯ :

ಕ್ಯಾನ್ಸರ್‌ ಕಾಯಿಲೆ ಬಗ್ಗೆ ಜನರಿಗೆ ಇನ್ನೂ ಸೂಕ್ತ ಅರಿವು ಮೂಡಿಲ್ಲ. ಪ್ರಾಥಮಿಕ ಹಂತದಲ್ಲಿಯೇ ಕ್ಯಾನ್ಸರ್‌ ಅನ್ನು ಪತ್ತೆ ಹಚ್ಚಿ ಸಮರ್ಪಕ ಚಿಕಿತ್ಸೆ ಪಡೆದುಕೊಂಡದ್ದೇ ಆದಲ್ಲಿ ಪ್ರಾಣಹಾನಿಯನ್ನು ತಪ್ಪಿಸಬಹುದಾಗಿದೆ. ಸೂಕ್ತ ಔಷಧ ಮತ್ತು ಚಿಕಿತ್ಸಾ ವಿಧಾನದಿಂದ ಕ್ಯಾನ್ಸರ್‌ ಪೀಡಿತರಿಗೆ ಚಿಕಿತ್ಸೆ ನೀಡಲು ಸಾಧ್ಯವಿದೆ. ಇದನ್ನು ಜನರಿಗೆ ತಿಳಿಹೇಳುವ ಕೆಲಸವಾಗಬೇಕಿದೆ. ಕ್ಯಾನ್ಸರ್‌ ಎಂದಾಕ್ಷಣ ಭಯಭೀತರಾಗದೇ ಲಭ್ಯವಿರುವ ಸೂಕ್ತ ಚಿಕಿತ್ಸೆಗಳನ್ನು ಪಡೆದುಕೊಂಡು ಅದರ ವಿರುದ್ಧ ಹೋರಾಡುವ ಛಲವನ್ನು ಬೆಳೆಸಿಕೊಳ್ಳುವಂತೆ ಕ್ಯಾನ್ಸರ್‌ ಪೀಡಿತರಿಗೆ ಮನವರಿಕೆ ಮಾಡಿಕೊಡಬೇಕಿದೆ. ಅಷ್ಟು ಮಾತ್ರವಲ್ಲದೆ ಕ್ಯಾನ್ಸರ್‌ ಪೀಡಿತರ ಕುಟುಂಬಗಳಲ್ಲಿಯೂ ಧೈರ್ಯ ಮತ್ತು ಅವರಿಗೆ ಬೆಂಬಲವಾಗಿ ನಿಲ್ಲುವ ಕೆಲಸ ಸಮಾಜದಿಂದಾಗಬೇಕಿದೆ. ಇವೆಲ್ಲವೂ ಸಾಧ್ಯವಾದಲ್ಲಿ ಕ್ಯಾನ್ಸರ್‌ ರೋಗಿಗಳು ಮತ್ತವರ ಕುಟುಂಬ ಮಾನಸಿಕ ಮತ್ತು ಭಾವನಾತ್ಮಕ ತುಮುಲದಿಂದ ಹೊರಬಂದು ಸಹಜ ಜೀವನ ನಡೆಸಲು ಸಾಧ್ಯ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.