ಚಾ.ಬೆಟ್ಟದಲ್ಲಿ ದೇವಿ ಬ್ರಹ್ಮರಥೋತ್ಸವ ಸಂಭ್ರಮ

ಸರಳ-ಸಂಪ್ರದಾಯದಂತೆ ಆಚರಣೆ „ ಕೋವಿಡ್‌ ಹಿನ್ನೆಲೆ ಭಕ್ತರು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

Team Udayavani, Oct 20, 2021, 3:38 PM IST

Devi Brahmarathotsava celebration

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಂತರ ನಡೆಯುವ ಚಾಮುಂಡೇಶ್ವರಿ ರಥೋತ್ಸವ ಮಂಗಳವಾರ ಬೆಳಗ್ಗೆ ಸರಳ ಮತ್ತು ಸಂಪ್ರದಾಯದಂತೆ ನೆರವೇರಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗುತ್ತಿದ್ದ ಬೆಟ್ಟದ ತಾಯಿ ಚಾಮುಂಡೇಶ್ವರಿ ರಥೋತ್ಸವ ಕೋವಿಡ್‌-19 ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರ ಅನುಪಸ್ಥಿತಿಯಲ್ಲಿ ಮೈಸೂರು ರಾಜವಂಶಸ್ಥರು ಹಾಗೂ ಚಾಮುಂಡಿ ಬೆಟ್ಟದ ಗ್ರಾಮಸ್ಥರ ಸಮ್ಮುಖದಲ್ಲಿ ಸರಳವಾಗಿ ಮಂಗಳವಾರ ನೆರವೇರಿತು.

ನಾಡಹಬ್ಬ ದಸರಾ ಮಹೋತ್ಸವ ಬಳಿಕ ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವವನ್ನು ವಿಜೃಂಭಣೆಯಿಂದ ನಡೆಸುವುದು ಪದ್ಧತಿ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆ ಈ ಬಾರಿಯೂ ಭಕ್ತರ ಅನುಪಸ್ಥಿತಿಯಲ್ಲಿ ಸರಳವಾಗಿ ರಥೋತ್ಸವ ನಡೆಯಿತು. ಚಿಕ್ಕ ರಥದಲ್ಲಿ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಕೂರಿಸಿ ದೇವಾಲಯದ ಸುತ್ತಲು ಸಂಭ್ರಮದಿಂದ ಮೆರವಣಿಗೆ ನಡೆಸಲಾಯಿತು.

ಬೆಳಗ್ಗೆ 7.18ರಿಂದ 7.40ರೊಳಗೆ ಸಂದ ಶುಭ ಲಗ್ನದಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ರಥೋತ್ಸವಕ್ಕೆ ಚಾಲನೆ ನೀಡಿದರು. ಯದುವೀರ್‌ ಪತ್ನಿ ತ್ರಿಷಿಕಾ ದೇವಿ ಒಡೆಯರ್‌ ಮತ್ತು ತಾಯಿ ಪ್ರಮೋದಾ ದೇವಿ ಒಡೆಯರ್‌ ಜೊತೆಗಿದ್ದರು. ಬಳಿಕ ಮಂಗಳವಾದ್ಯ, ಪೊಲೀಸ್‌ ಬ್ಯಾಂಡ್‌ ವಾದನದೊಂದಿಗೆ ಉತ್ಸವ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು. ಈ ವೇಳೆ ಬೆಟ್ಟದ ಗ್ರಾಮಸ್ಥರು ಚಾಮುಂಡೇಶ್ವರಿಗೆ ಜೈಕಾರ ಕೂಗಿ ಭಕ್ತ ಭಾವ ಮೆರೆದರೆ, ಸಂಪ್ರಾದಾಯದಂತೆ ಫಿರಂಗಿ ದಳದ ಸಿಬ್ಬಂದಿ 21 ಬಾರಿ ಕುಶಲ ತೋಪು ಸಿಡಿಸಿ, ಗೌರವ ಸಮರ್ಪಿಸಿದರು.

ವಿಶೇಷ ಅಲಂಕಾರ: ರಥೋತ್ಸವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಮುಂಜಾನೆ 4 ಗಂಟೆಯಿಂದಲೇ ಪ್ರಧಾನ ಆಗಮಿಕ ಶಶಿಶೇಖರ್‌ ದೀಕ್ಷಿತ್‌ ನೇತೃತ್ವದಲ್ಲಿ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ರುದ್ರಾಭಿಷೇಕ, ಅರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆಸಲಾಯಿತು. ಬಳಿಕ ದೇವಿಗೆ ವಿಶೇಷ ಅಲಂಕಾರ ಮಾಡಿ, ದೇವಾಲಯದಿಂದ ಹೊರತಂದು ಚಿಕ್ಕರಥದಲ್ಲಿ ಪ್ರತಿಷ್ಠಾಪಿಸಿ, ಮೆರವಣಿಗೆ ನಡೆಸಲಾಯಿತು.

ಚಿಕ್ಕರಥದಲ್ಲಿ ದೇವಿಯ ಮೆರವಣಿಗೆ: ಪ್ರತಿವರ್ಷ ಜಂಬೂ ಸವಾರಿ ಮುಗಿದ ಬಳಿಕ 50 ಅಡಿ ಎತ್ತರದ ರಥದಲ್ಲಿ ಮೂರ್ತಿಯನ್ನು ಮೆರವಣಿಗೆ ಮಾಡುವ ಸಂಪ್ರಾದಯವಿದೆ. ಕೊರೊನಾ ಹಿನ್ನೆಲೆಯಲ್ಲಿ ಚಿಕ್ಕರಥದಲ್ಲಿ ಮೆರವಣಿಗೆ ನಡೆಸಲಾಯಿತು. ರಥೋತ್ಸವದ ವೇಳೆ ಶಾಸಕ ಎಲ್.ನಾಗೇಂದ್ರ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಯತಿರಾಜ್‌ ಸಂಪತ್‌ ಕುಮಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ‌

ಇದನ್ನೂ ಓದಿ;- ಭೋವಿ ಸಮುದಾಯದ ಅಭಿವೃದಿಗೆ ಬದ್ಧ

ರಥೋತ್ಸವ ಬಳಿಕ ಭಕ್ತರ ಪ್ರವೇಶ ಕೋವಿಡ್‌ 19 ಹಿನ್ನೆಲೆಯಲ್ಲಿ ದೇವಿಯ ರಥೋತ್ಸವಕ್ಕೆ ಭಕ್ತರು ಮತ್ತು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿದಿಸಲಾಗಿತ್ತು. ರಥೋತ್ಸವ ನಂತರ ಬೆಳಗ್ಗೆ 10ರಿಂದ ರಸ್ತೆ ಮತ್ತು ಮೆಟ್ಟಿಲು ಮಾರ್ಗದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಯಿತು. ಬೆಳಗ್ಗೆ 10ರ ಬಳಿಕ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ರಥೋತ್ಸವ ದಿನದಂದು ದೇವಿಯ ದರ್ಶನ ಪಡೆದು ಪುನೀತರಾಗಬೇಕೆಂದು ಸಾವಿರಾರು ಸಂಖ್ಯೆಯಲ್ಲಿ ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ತಮ್ಮ ಇಷ್ಟರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಕೆಲವರು ಪೂಜೆ, ಹರಕೆ ತೀರಿಸಿ ಭಕ್ತಭಾವ ಮೆರೆದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.