ಎ.ಮಂಜು -ಯಡಿಯೂರಪ್ಪ ಭೇಟಿ

Team Udayavani, Mar 16, 2019, 12:30 AM IST

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಮಾಜಿ ಸಚಿವ ಕಾಂಗ್ರೆಸ್‌ನ ಎ.ಮಂಜು ಅವರು ಶುಕ್ರವಾರ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಯಡಿಯೂರಪ್ಪ ಅವರ ಡಾಲರ್ ಕಾಲೋನಿ ನಿವಾಸಕ್ಕೆ ಭೇಟಿ ನೀಡಿದ ಮಂಜು, ಸುಮಾರು 15 ನಿಮಿಷ ಮಾತುಕತೆ ನಡೆಸಿ ತೆರಳಿದರು. ಹಾಸನ ಶಾಸಕ ಪ್ರೀತಂ ಗೌಡ, ಕಡೂರು ಶಾಸಕ ಬೆಳ್ಳಿ ಪ್ರಕಾಶ್‌ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಬಳಿಕ ಪ್ರತಿಕ್ರಿಯಿಸಿದ ಪ್ರೀತಂ ಗೌಡ, “ಹಾಸನದಲ್ಲಿ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ. ಮಾಜಿ ಸಚಿವರಾದ ಎ.ಮಂಜು ಅವರು ಪಕ್ಷ ಸೇರ್ಪಡೆಯಾಗಿ ಯಡಿಯೂರಪ್ಪ ಅವರ ನಾಯಕತ್ವವನ್ನು ಬಲಪಡಿಸಬೇಕಿದೆ. ಮಂಜು ಅವರೂ ಪಕ್ಷ ಸೇರಲು ಉತ್ಸುಕರಾಗಿದ್ದಾರೆ. ಬಿಜೆಪಿ ಕೋರ್‌ ಕಮಿಟಿ ಹಾಗೂ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಅಂತಿಮವಾಗಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ. ಎ.ಮಂಜು ಅವರ ಪಕ್ಷ ಸೇರ್ಪಡೆಯನ್ನು ನಾನು ಹಾಗೂ ಶಾಸಕ ಬೆಳ್ಳಿ ಪ್ರಕಾಶ್‌ ಅವರು ಸ್ವಾಗತಿಸುತ್ತೇವೆ. ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಬದಟಛಿವಾಗಿ ಕಾರ್ಯ ನಿರ್ವಹಿಸುತ್ತೇವೆ’ ಎಂದು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, “ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ ಇನ್ನೂ ಅಂತಿಮವಾಗಿಲ್ಲ. ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಎ.ಮಂಜು ವಿಚಾರವೂ ಅಂತಿಮವಾಗಿಲ್ಲ’ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ