ಸಿದ್ದು ಸೇಡು ತೀರಿಸಿಕೊಳ್ಳಲಿದ್ದಾರೆ

ಮೈತ್ರಿ ಪಕ್ಷಗಳ ಹೊಂದಾಣಿಕೆ ಕೊರತೆಯೇ ಬಿಜೆಪಿಗೆ ವರ: ಯಡಿಯೂರಪ್ಪ

Team Udayavani, Apr 12, 2019, 6:05 AM IST

190411kpn70

ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದಲ್ಲಿ ಶೋಭಾ ಕರಂದ್ಲಾಜೆ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ರೋಡ್‌ ಶೋ ನಡೆಸಿದರು.

ಚಿಕ್ಕಮಗಳೂರು: “ವಿಧಾನಸಭಾ ಚುನಾವಣೆಯಲ್ಲಿನ ಚಾಮುಂಡೇಶ್ವರಿ ಕ್ಷೇತ್ರದ ಸೋಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆ.

ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಪಕ್ಷಗಳ ಹೊಂದಾಣಿಕೆ ಕೊರತೆಯೇ ರಾಜ್ಯದಲ್ಲಿ ಬಿಜೆಪಿ ಕನಿಷ್ಠ 22 ಸ್ಥಾನಗಳನ್ನು ಗೆಲ್ಲಲು ಕಾರಣವಾಗುತ್ತದೆ’ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಗುರುವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ಎಚ್‌ .ಡಿ.ದೇವೇಗೌಡ-ಸಿದ್ದರಾಮಯ್ಯ ಒಟ್ಟಿಗೆ ಚುನಾವಣಾ ಪ್ರಚಾರ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿ, ಹೆಲಿಕಾಪ್ಟರ್‌ನಲ್ಲಿ ಒಟ್ಟಿಗೆ ಕುಳಿತು ಹೋದಾಕ್ಷಣ ಎಲ್ಲವೂ ಸರಿಯಾಗಿದೆ ಎಂದರ್ಥವಲ್ಲ. ಹೆಲಿಕಾಪ್ಟರ್‌ನಿಂದ ಇಳಿದ ಕೂಡಲೇ ಇಬ್ಬರೂ ಬೇರೆಯಾಗುತ್ತಾರೆ ಎಂದು ಟೀಕಿಸಿದರು.

ಮಂಡ್ಯ, ಮೈಸೂರಿನಲ್ಲಿ ಎರಡೂ ಪಕ್ಷಗಳ ಮುಖಂಡರ ಹೇಳಿಕೆ ಗಮನಿಸಿದರೆ ಅವರಲ್ಲಿ ಎಲ್ಲವೂ ಸರಿಯಿಲ್ಲಎಂಬುದು ತಿಳಿಯುತ್ತದೆ. ಪಕ್ಷಗಳ ಮುಖಂಡರು ಒಂದಾದರೂ ಎರಡೂ ಪಕ್ಷಗಳ ಕಾರ್ಯಕರ್ತರು ಒಂದಾಗಿಲ್ಲ. ಅವರ ಹೊಂದಾಣಿಕೆಯ ಕೊರತೆಯೇ ಬಿಜೆಪಿ ಗೆಲುವಿಗೆ ಸಹಕಾರಿಯಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಸೋಲುವ ಮುನ್ಸೂಚನೆ ಕುಮಾರಸ್ವಾಮಿ ಅವರಿಗೆ ಸಿಕ್ಕಿರುವುದರಿಂದ ಹತಾಶರಾಗಿ ಏನೇನೊ ಹೇಳಿಕೆ ನೀಡಲಾರಂಭಿಸಿದ್ದಾರೆ. ಅದಕ್ಕಾಗಿಯೇ ಮಂಡ್ಯ ಕ್ಷೇತ್ರದಲ್ಲಿ ಮಾಧ್ಯಮದವರ ಮೇಲೂ ದಬ್ಟಾಳಿಕೆ ನಡೆಸಿದ್ದಾರೆ. ನಮ್ಮ ಬಗ್ಗೆ ಪ್ರಚಾರ ಮಾಡದಿದ್ದರೆ ನಿಮ್ಮ ಮೇಲೆ ಜನತೆ ಹಲ್ಲೆ ನಡೆಸಬಹುದು.ಆಗ ನನ್ನನ್ನು ದೂರಬೇಡಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿಗಳೇ ಜನರನ್ನು ಮಾಧ್ಯಮದವರ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ,ಸುಮಲತಾ ಬಗ್ಗೆ ಹಗುರವಾಗಿ ಮಾತನಾಡಲಾರಂಭಿಸಿದ್ದಾರೆ. ಮಂಡ್ಯಕ್ಕೆ ಅಂಬರೀಶ್‌ ಕೊಡುಗೆ ಏನೆಂದು ಕೇಳಲಾರಂಭಿಸಿದ್ದಾರೆ. ಮಂಡ್ಯದಲ್ಲಿ ಸುಮಲತಾ ಗೆಲುವು ನಿಶ್ಚಿತ. ಈ ಕಾರಣಕ್ಕೆ ಸಿಎಂ ಹತಾಶರಾಗಿದ್ದಾರೆ.
– ಬಿ.ಎಸ್‌. ಯಡಿಯೂರಪ್ಪ,ಮಾಜಿ ಸಿಎಂ

ಟಾಪ್ ನ್ಯೂಸ್

ದ್ವಿಚಕ್ರ ಪ್ರಯಾಣಿಕರೇ ಗಮನಿಸಿ! ಹೆಲ್ಮೆಟ್‌ ಸಡಿಲವಾಗಿ ಧರಿಸಿದ್ದರೂ ದಂಡ!

ದ್ವಿಚಕ್ರ ಪ್ರಯಾಣಿಕರೇ ಗಮನಿಸಿ! ಹೆಲ್ಮೆಟ್‌ ಸಡಿಲವಾಗಿ ಧರಿಸಿದ್ದರೂ ದಂಡ!

thumb 1

ಹೈದರಾಬಾದ್‌-ಪಂಜಾಬ್‌ ಲಾಸ್ಟ್‌ ಶೋ; ಇಂದು ಕೊನೆಯ ಲೀಗ್‌ ಪಂದ್ಯ ; ಕೇವಲ ಔಪಚಾರಿಕ ಮುಖಾಮುಖಿ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ: ಇಂದು ಭಾರತ ತಂಡ ಪ್ರಕಟ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ: ಇಂದು ಭಾರತ ತಂಡ ಪ್ರಕಟ

ಸಮುದಾಯ ಮತಬ್ಯಾಂಕ್‌ನತ್ತ ಕಾಂಗ್ರೆಸ್‌ ದೃಷ್ಟಿ

ಸಮುದಾಯ ಮತಬ್ಯಾಂಕ್‌ನತ್ತ ಕಾಂಗ್ರೆಸ್‌ ದೃಷ್ಟಿ

ಬೆಳೆ ಹಾನಿ ಸಮೀಕ್ಷಾ ವರದಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಳೆ ಹಾನಿ ಸಮೀಕ್ಷಾ ವರದಿಗೆ ಸಿಎಂ ಬೊಮ್ಮಾಯಿ ಸೂಚನೆ

astrology

ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮಂಗಳೂರಿನಲ್ಲಿ ವಿಮಾನ ಮಹಾದುರಂತಕ್ಕೆ 12 ವರ್ಷ

ಮಂಗಳೂರಿನಲ್ಲಿ ವಿಮಾನ ಮಹಾದುರಂತಕ್ಕೆ 12 ವರ್ಷಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ದ್ವಿಚಕ್ರ ಪ್ರಯಾಣಿಕರೇ ಗಮನಿಸಿ! ಹೆಲ್ಮೆಟ್‌ ಸಡಿಲವಾಗಿ ಧರಿಸಿದ್ದರೂ ದಂಡ!

ದ್ವಿಚಕ್ರ ಪ್ರಯಾಣಿಕರೇ ಗಮನಿಸಿ! ಹೆಲ್ಮೆಟ್‌ ಸಡಿಲವಾಗಿ ಧರಿಸಿದ್ದರೂ ದಂಡ!

thumb 1

ಹೈದರಾಬಾದ್‌-ಪಂಜಾಬ್‌ ಲಾಸ್ಟ್‌ ಶೋ; ಇಂದು ಕೊನೆಯ ಲೀಗ್‌ ಪಂದ್ಯ ; ಕೇವಲ ಔಪಚಾರಿಕ ಮುಖಾಮುಖಿ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ: ಇಂದು ಭಾರತ ತಂಡ ಪ್ರಕಟ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ: ಇಂದು ಭಾರತ ತಂಡ ಪ್ರಕಟ

ಸಮುದಾಯ ಮತಬ್ಯಾಂಕ್‌ನತ್ತ ಕಾಂಗ್ರೆಸ್‌ ದೃಷ್ಟಿ

ಸಮುದಾಯ ಮತಬ್ಯಾಂಕ್‌ನತ್ತ ಕಾಂಗ್ರೆಸ್‌ ದೃಷ್ಟಿ

ಬೆಳೆ ಹಾನಿ ಸಮೀಕ್ಷಾ ವರದಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಳೆ ಹಾನಿ ಸಮೀಕ್ಷಾ ವರದಿಗೆ ಸಿಎಂ ಬೊಮ್ಮಾಯಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.