ಚುನಾವಣಾಧಿಕಾರಿಗಳ ವರ್ಗಾವಣೆಗೆ ಬಿಜೆಪಿ ಸ್ವಾಗತ

Team Udayavani, Apr 10, 2019, 3:00 AM IST

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯನ್ನು ವರ್ಗಾವಣೆ ಮಾಡಿರುವ ರಾಜ್ಯ ಚುನಾವಣಾ ಆಯೋಗದ ಕ್ರಮವನ್ನು ಬಿಜೆಪಿ ಸ್ವಾಗತಿಸಿದೆ.

ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ನಿಷ್ಪಕ್ಷಪಾತವಾಗಿ ವರ್ತಿಸದಿರುವುದನ್ನು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌, ಶಾಸಕ ಎಸ್‌. ಸುರೇಶ್‌ ಕುಮಾರ್‌ ನೇತೃತ್ವದ ನಿಯೋಗವು ಆಯೋಗದ ಗಮನಕ್ಕೆ ತಂದಿತ್ತು.

ಎರಡೂ ಕ್ಷೇತ್ರಗಳ ಚುನಾವಣಾಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ದೂರು ಸಹ ನೀಡಿತ್ತು. ಅದರಂತೆ ಆಯೋಗ ಕ್ರಮ ಕೈಗೊಂಡಿರುವುದನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳು ಪ್ರತಿಷ್ಠಿತ ಕ್ಷೇತ್ರಗಳಾಗಿದ್ದು, ರಾಜ್ಯ ಸರ್ಕಾರವು ಚುನಾವಣಾಧಿಕಾರಿಗಳ ಮೂಲಕ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ನಿಯೋಜಿಸಬೇಕು. ಎರಡೂ ಕ್ಷೇತ್ರಗಳನ್ನು ಅತಿ ಸೂಕ್ಷ್ಮ ಕ್ಷೇತ್ರಗಳೆಂದು ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ