ಫೇಸ್‌ಬುಕ್‌,ಟ್ವಿಟರ್‌ ಖಾತೆಗಳ ಮೇಲೆ ಆಯೋಗ ತೀವ್ರ ನಿಗಾ

Team Udayavani, Mar 21, 2019, 1:59 AM IST

socialicons6onmobilesmartphone.jpg

ಬೆಂಗಳೂರು: ಲೋಕಸಭಾ ಚುನಾವಣಾ ಕಣ ರಂಗೇರುತ್ತಿರುವಂತೆ ರಾಜಕೀಯ ಪಕ್ಷಗಳು ಮತ್ತು ಕೆಲವು ರಾಜಕೀಯ ಪ್ರಮುಖರ ಫೇಸ್‌ಬುಕ್‌, ಟ್ವಿಟರ್‌ ಮತ್ತಿತರರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಭರಾಟೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಆರಂಭಿಸಿರುವ ಫೇಸ್‌ಬುಕ್‌ ಹಾಗೂ ಟ್ವಿಟರ್‌ ಖಾತೆಗಳು ಸೇರಿದಂತೆ ಇತರ ಖಾಸಗಿ ಹಾಗೂ ಪ್ರಾಯೋಜಿತ ಸಾಮಾಜಿಕ ಜಾಲತಾಣಗಳ ಖಾತೆಗಳ ಮೇಲೆ ಚುನಾವಣಾ ಆಯೋಗ ನಿಗಾ ಇಟ್ಟಿದೆ.

ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಇಲ್ಲಿವರೆಗೆ 60ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣ ಖಾತೆಗಳ ಪರಿಶೀಲನೆ ನಡೆಸಿ, ಅವುಗಳಲ್ಲಿನ ಸುಮಾರು 100ಕ್ಕೂ ಹೆಚ್ಚು ಸ್ಟೇಟಸ್‌ ಗಳನ್ನು ತನಿಖೆಗೆ ಒಳಪಡಿಸುತ್ತಿದೆ ಎಂದು ತಿಳಿದು ಬಂದಿದೆ.

ರಾಜಕೀಯ ಪಕ್ಷಗಳು, ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ರಾಜ್ಯದ, ರಾಷ್ಟ್ರದ ಪ್ರಮುಖ ರಾಜಕೀಯ ಮುಖಂಡರು ಹಾಗೂ ರಾಜಕೀಯವಾಗಿ ಪ್ರಭಾವ ಹೊಂದಿರುವ ವ್ಯಕ್ತಿಗಳು ಮತ್ತು ಅವರ ಅಭಿಮಾನಿ ಬಳಗ ಎಂಬ ಹೆಸರಲ್ಲಿ ತೆರೆದಿರುವ ಸಾಮಾಜಿಕ ಜಾಲತಾಣ ಖಾತೆಗಳ ಮೇಲೂ ಆಯೋಗ ಕಣ್ಣಿಟ್ಟಿದೆ. ಚುನಾವಣಾ ಪ್ರಚಾರದ ವೇಳೆ ಸಮಾಜದಲ್ಲಿ ದ್ವೇಷ ಹರಡುವ ಹೇಳಿಕೆಗಳನ್ನು ನೀಡುವ, ವೈಯುಕ್ತಿಕ ನಿಂದನೆ, ಬರವಣಿಗೆ, ಚಿತ್ರಗಳು ಇತ್ಯಾದಿ ವಿಷಯಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ.

ಾಮಪತ್ರ ಸಲ್ಲಿಕೆ ಆರಂಭಗೊಂಡ ನಂತರ ಫೇಸ್‌ಬುಕ್‌, ಟ್ವಿಟರ್‌ ಅಕೌಂಟ್‌ ಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ರಾಜ್ಯದ ಬೇರೆ ಕಡೆಗಳಿಂದ ಪ್ರತಿದಿನ 15ರಿಂದ 20 ವರದಿಗಳು ಆಯೋಗಕ್ಕೆ ಬರುತ್ತಿವೆ ಎಂದು ಸಾಮಾಜಿಕ ಜಾಲತಾಣ ವಿಚಕ್ಷಣಾ ವಿಭಾಗದ ಸಿಬ್ಬಂದಿ ತಿಳಿಸಿದ್ದಾರೆ.

ಭಾಷಣದಲ್ಲಿ ಪ್ರಧಾನಿ ಮೋದಿ ವಿರುದ್ಧ  ಆಕ್ಷೇಪಾರ್ಹವಾಗಿ ಮಾತನಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವಕಲ್ಯಾಣ ಕಾಂಗ್ರೆಸ್‌ ಶಾಸಕ ನಾರಾಯಣರಾವ್‌ ವಿರುದ್ಧ  ಆಯೋಗ ತನಿಖೆ ನಡೆಸುತ್ತಿದ್ದು, ಶಾಸಕರ ಹೇಳಿಕೆ ಕುರಿತ ವಿವರಗಳನ್ನು ಸಾಮಾಜಿಕ ಜಾಲತಾಣ ವಿಚಕ್ಷಣಾ ವಿಭಾಗ ಈಗಾಗಲೇ ಆಯೋಗಕ್ಕೆ ರವಾನಿಸಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.