ಕೊಪ್ಪಳದಿಂದ ನೀವೇ ಸ್ಪರ್ಧಿಸಿ: ಸಿದ್ದರಾಮಯ್ಯಗೆ  ಒಕ್ಕೊರಲ ಆಗ್ರಹ

Team Udayavani, Mar 9, 2019, 2:01 AM IST

siddu-3.jpg

ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸು ವಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಮುಖಂಡರು ಒಕ್ಕೊರಲಿನಿಂದ ಒತ್ತಾಯ ಮಾಡಿದ್ದಾರೆ. ಶುಕ್ರವಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಸಿದ್ದರಾಮಯ್ಯ ಕರೆದಿದ್ದ ಕೊಪ್ಪಳ ಜಿಲ್ಲಾ ಮುಖಂಡರ ಸಭೆಯಲ್ಲಿ ಅವರನ್ನೇ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಜಿಲ್ಲಾ ಮುಖಂಡರ ಮನವಿಯನ್ನು ಸಿದ್ದರಾಮಯ್ಯ ನಯವಾಗಿ ತಿರಸ್ಕರಿಸಿದ್ದು, ನನ್ನ ಹೆಸರನ್ನು ಬಿಟ್ಟು ಬೇರೆ ಯಾರನ್ನಾದರೂ ಸೂಚಿಸಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಕಾಂಗ್ರೆಸ್‌ ಮೂಲಗಳ ಪ್ರಕಾರ ಹೈಕಮಾಂಡ್‌ ಸಿದ್ದರಾಮಯ್ಯ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸೂಚಿಸಿದರೆ, ಕಣಕ್ಕಿಳಿಯಲು ಕೊಪ್ಪಳ ಲೋಕಸಭಾ ಕ್ಷೇತ್ರವನ್ನು ಮುಕ್ತವಾಗಿ ಇಟ್ಟುಕೊಂಡಿದ್ದಾರೆ. ಅದೇ ಕಾರಣಕ್ಕೆ ಕೊಪ್ಪಳ ಜಿಲ್ಲಾ ಮುಖಂಡರ ಸಭೆಯನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಲಿಂಗಾಯತ-ಕುರುಬ ಪೈಪೋಟಿ: ಕೊಪ್ಪಳ ಕ್ಷೇತ್ರಕ್ಕೆ ಲಿಂಗಾಯತ ಮತ್ತು ಕುರುಬ ಸಮುದಾಯದವರಿಂದ ಟಿಕೆಟ್‌ಗೆ ಬೇಡಿಕೆ ಇದ್ದು, ಲಿಂಗಾಯತ ಸಮುದಾಯದಿಂದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಯುವ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ, ಅಮರೇಗೌಡ ಬಯ್ನಾಪುರ ಅವರ ಅಣ್ಣನ ಮಗ ಶರಣಗೌಡ ಬಯ್ನಾಪುರ, ಕುರುಬ ಸಮುದಾಯದಿಂದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹಾಗೂ ರಾಜಶೇಖರ್‌ ಹಿಟ್ನಾಳ್‌ ಅವರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ. ಹೈ-ಕ ಭಾಗದಲ್ಲಿ ಐದು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳು ಮೀಸಲಾಗಿದ್ದು, ಬೀದರ್‌ ಹಾಗೂ ಕೊಪ್ಪಳ ಕ್ಷೇತ್ರಗಳನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ.ಒಂದು ವೇಳೆ, ಬೀದರ್‌ ಕ್ಷೇತ್ರವನ್ನು ಲಿಂಗಾಯತ ಸಮುದಾ ಯದವರಿಗೆ ನೀಡಿದರೆ, ಕೊಪ್ಪಳದಲ್ಲಿ ಹಿಂದುಳಿದ ವರ್ಗದ ಕುರುಬ ಸಮುದಾಯಕ್ಕೆ ಟಿಕೆಟ್‌ ನೀಡುವ ಸಾಧ್ಯತೆ ಇದೆ.

ಬಾಗಲಕೋಟೆಯಲ್ಲಿ ಡಜನ್‌ ಆಕಾಂಕ್ಷಿಗಳು
ಬಾಗಲಕೋಟೆ ಕ್ಷೇತ್ರದ ಕುರಿತಂತೆಯೂ ಸಿದ್ದರಾಮಯ್ಯನವರು ಶುಕ್ರವಾರ ಜಿಲ್ಲಾ ಮುಖಂಡರ ಸಭೆ ನಡೆಸಿದ್ದು, 12 ಜನ ಟಿಕೆಟ್‌ ಆಕಾಂಕ್ಷಿಗಳು ವೈಯಕ್ತಿಕವಾಗಿ ತಮ್ಮ ಅಹವಾಲು ಸಲ್ಲಿಸಿದ್ದಾರೆ. ಆದರೆ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ತಮ್ಮ ಪತ್ನಿಗೆ ಟಿಕೆಟ್‌ ನೀಡುವಂತೆ ಎಲ್ಲರೆದುರೇ ಬೇಡಿಕೆ ಇಟ್ಟಿದ್ದಾರೆ. ಅವರ ಹೊರತಾಗಿ ಮಾಜಿ ಶಾಸಕ ಎಸ್‌.ಜಿ.ನಂಜಯ್ಯನಮಠ, ರಕ್ಷಿತಾ ಈಟಿ ಹಾಗೂ ಸತೀಶ್‌ ಉದಪುಡಿ ಅವರ ಹೆಸರುಗಳು ಪ್ರಬಲವಾಗಿ ಕೇಳಿ ಬಂದಿದ್ದು, ಮೂವರ ಹೆಸರನ್ನು ಸಿದ್ದರಾಮಯ್ಯನವರು ಸ್ಕ್ರೀನಿಂಗ್‌ ಕಮಿಟಿಗೆ
ಕಳುಹಿಸಿಕೊಡುತ್ತಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.