ಕಾಂಗ್ರೆಸ್‌-ಜೆಡಿಎಸ್‌ ಜಂಟಿ ಪ್ರಣಾಳಿಕೆಗೆ ತೀರ್ಮಾನ

ಸಮಿಶ್ರ ಸರ್ಕಾರದ ಸಾಧನೆ ಮತದಾರರ ಮುಂದಿಡಲು ನಿರ್ಧಾರ | ಬಿಜೆಪಿ ವಿರುದ್ಧ ಜಂಟಿ ಹೋರಾಟ

Team Udayavani, Mar 28, 2019, 7:36 AM IST

Congress-JDS

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಂಡು ಬಿಜೆಪಿ ವಿರುದ್ಧ ಜಂಟಿಯಾಗಿ ಹೋರಾಟಕ್ಕೆ ಇಳಿದಿರುವ ಜೆಡಿಎಸ್‌- ಕಾಂಗ್ರೆಸ್‌, ಮೈತ್ರಿ ಪ್ರಣಾಳಿಕೆಯೊಂದಿಗೆ ಮತದಾರರ ಬಳಿ ಹೋಗಲು ಮುಂದಾಗಿದೆ.

ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆ ಜತೆಗೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಸಾಧನೆ ಹಾಗೂ ಮುಂದಿನ ಯೋಜನೆಗಳನ್ನೂ ತಿಳಿಸುವ ಕಾಂಗ್ರೆಸ್‌- ಜೆಡಿಎಸ್‌ ಜಂಟಿ
ಪ್ರಣಾಳಿಕೆ ಸಿದ್ಧಪಡಿಸಲು ತೀರ್ಮಾನಿಸಿದೆ.

ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ.ಪಾಟೀಲ್‌ ಹಾಗೂ ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್‌.ವಿ.ದತ್ತಾ ಅವರಿಗೆ ಜಂಟಿ ಪ್ರಣಾಳಿಕೆ ಸಿದ್ಧಪಡಿಸುವ ಹೊಣೆಗಾರಿಕೆ ನೀಡಲಾಗಿದೆ. ರಾಷ್ಟ್ರೀಯ ವಿಚಾರಗಳ ಜತೆಗೆ ರಾಜ್ಯದ ಮಟ್ಟಿಗೆ
ಪ್ರಮುಖವಾದ ವಿಚಾರಗಳು, ರಾಜ್ಯ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳನ್ನು ಸೇರಿಸಿ ಪ್ರಣಾಳಿಕೆ ರೂಪಿಸಲು
ನಿರ್ಧರಿಸಲಾಗಿದೆ.

ಜೆಡಿಎಸ್‌ನ, ಸಹಕಾರ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿನ ಸಾಲ ಮನ್ನಾ, ಬೀದಿ ಬದಿ ವ್ಯಾಪಾರಿಗಳಿಗಾಗಿ ಜಾರಿಗೆ ತಂದಿರುವ ಬಡವರ ಬಂಧು, ಮಹಿಳಾ ಸ್ವ ಸಹಾಯ
ಸಂಘಗಗಳಿಗೆ ಸಬ್ಸಿಡಿ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸ್ವಯಂ ಉದ್ಯೋಗಕ್ಕೆ ಸಾಲ ನೀಡುವ ಯೋಜನೆಗಳು. ಕಾಂಗ್ರೆಸ್‌ ಸರ್ಕಾರದಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಪ್ರಮುಖ ಯೋಜನೆಗಳನ್ನು
ಪ್ರಸ್ತಾಪಿಸಿ ಮುಂದೆ ರಾಜ್ಯದಲ್ಲಿ ಕೈಗೊಳ್ಳಲಿರುವ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜತೆಗೆ ಬೆಂಗಳೂರಿನ ನಾಲ್ಕು ಲೋಕಸಭೆ ಕ್ಷೇತ್ರಗಳಿಗೆ ಅದರಲ್ಲೇ ಪ್ರತ್ಯೇಕ ಪ್ರಣಾಳಿಕೆಯೂ ಇರಲಿದೆ ಎನ್ನಲಾಗಿದೆ.

ಪ್ರಣಾಳಿಕೆ ಸಿದ್ಧವಾದ ಬಳಿಕ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಉಪ
ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂ ರಾವ್‌, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರು ಅಂತಿಮಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಶೀಘ್ರವೇ ವೀಕ್ಷ ಕರ ನೇಮಕ
ನಾಮಪತ್ರ ಪರಿಶೀಲನೆ ಹಾಗೂ ವಾಪಸಾತಿ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಎರಡೂ ಪಕ್ಷಗಳಿಂದ ಪ್ರತಿ ಲೋಕಸಭೆ ಕ್ಷೇತ್ರಕ್ಕೆ ವೀಕ್ಷಕರ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಒಂದೊಂದು ಕ್ಷೇತ್ರಕ್ಕೆ ತಲಾ ಒಬ್ಬೊಬ್ಬರು ಎರಡೂ ಪಕ್ಷಗಳಿಂದ ಇರಲಿದ್ದು, ಸ್ಥಳೀಯವಾಗಿ ಏನೇ ಸಮಸ್ಯೆ ಎದುರಾ ರೂ ಸಮನ್ವಯತೆ ಸಾಧಿಸಲಿದ್ದಾರೆ. ವೀಕ್ಷಕರು ಸರಿಪಡಿಸಲು ಸಾಧ್ಯವಾಗದ ಕ್ಲಿಷ್ಟ ಸಮಸ್ಯೆ ಇದ್ದರೆ ರಾಜ್ಯ ಮಟ್ಟದಲ್ಲಿ ಪರಿಹರಿಸಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.