ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಉಳಿಯಲ್ಲ


Team Udayavani, Apr 12, 2019, 10:58 AM IST

1

ಹಾಸನ: ದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನ ಉಳಿಯಲ್ಲ. ರೈತರು, ದಲಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರಿಗೂ ಉಳಿಗಾಲವಿಲ್ಲ. ಆದ್ದರಿಂದ ಬಿಜೆಪಿಗೆ ಮತ ಹಾಕಬೇಡಿ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಂಡಸಿಯಲ್ಲಿ ಗುರುವಾರ ನಡೆದ ಜೆಡಿಎಸ್‌ – ಕಾಂಗ್ರೆಸ್‌ ಜಂಟಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದ ನಂತರ ದೇಶದಲ್ಲಿ ದಲಿತರನ್ನು ಬೆತ್ತಲೆ ಮಾಡಿ ದೌರ್ಜನ್ಯ ಎಸಗಿದ ಪ್ರಕರಣಗಳು ನಡೆದಿವೆ. ಗೋ ಸಂರಕ್ಷಣೆಯ ಹೆಸರಿನಲ್ಲಿ ಅಲ್ಪಸಂಖ್ಯಾತರ ಹತ್ಯೆ ಮಾಡಿದ್ದಾರೆ. ಈಗ ದೇಶದಲ್ಲಿ ದಲಿತರು, ಅಲ್ಪ ಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಇಂದು ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಅಪಾಯ ದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಅನಂತ್‌ ಕುಮಾರ್‌ ಬಿಜೆಪಿ ಅಧಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾವಣೆ ಮಾಡಲು ಎಂದು ಹೇಳುತ್ತಾರೆ. ಆರ್‌ಎಸ್‌ಎಸ್‌ ಸರಸಂಚಾಲಕ ಮೋಹನ್‌ ಭಾಗವತತ್‌ ಅವರು ಮೀಸಲಾತಿ ರದ್ದುಪಡಿಸಬೇಕು ಎಂದು ಒತ್ತಾಯಿಸುತ್ತಾರೆ. ಸಂವಿಧಾನದಲ್ಲಿ ಕಂದಾಚಾರ, ಜಾತಿ ವ್ಯವಸ್ಥೆಗೆ ಅವಕಾಶವಿಲ್ಲ. ಹಾಗಾಗಿ ಸಂವಿಧಾನವನ್ನು ಬದಲಾವಣೆಮಾಡಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಯೊಬ್ಬರು ಹೇಳುತ್ತಾರೆ ಎಂದರು.

ಬಿಜೆಪಿ ರೈತ ವಿರೋಧಿ: ಬಿಜೆಪಿ ಎಂದೂ ರೈತರು, ಸಾಮಾಜಿಕ ನ್ಯಾಯದ ಪರ ಇಲ್ಲ. ಪ್ರಧಾನಿ ನರೇಂದ್ರಮೋದಿ ಎಂದೂ ರೈತರ ಪರ ನಿಲುವು ತೋರಿಸಲೇ ಇಲ್ಲ. ದೇಶದ ಮೂಲೆ ಮೂಲೆಯಿಂದ ರೈತರು ದೆಹಲಿಗೆ ಹೋಗಿ ಪ್ರತಿಭಟನೆ ನಡೆಸಿದರೆ ರೈತರ ಮೇಲೆ ಲಾಠಿ ಪ್ರಹಾರ ಮಾಡಿಸುತ್ತಾರೆ. ಪ್ರಧಾನಿ ಮೋದಿ ರೈತ ವಿರೋಧಿ ಎಂದು ಆರೋಪಿಸಿದರು.

ಬಿಜೆಪಿ ದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ಅಚ್ಛೇ ದಿನ್‌ ಬರುತ್ತದೆ ಎಂದರು. ಆದರೆ ಇಂದು ರಸಗೊಬ್ಬರ ಬೆಲೆ ದುಪ್ಪಟ್ಟಾಗಿದೆ. ಪೆಟ್ರೋಲ್‌, ಡೀಸೆಲ್‌ ದರ ಏರಿದೆ. ಅಡುಗೆ ಅನಿಲದ ದರ 380 ರೂ. ನಿಂದ 900 ರೂ. ಗೆ ಏರಿದೆ. ದಲಿತರು, ರೈತರು, ಹಿಂದುಳಿದವರಿಗೆ ಅಚ್ಚೇದಿನ್‌ ಬರಲಿಲ್ಲ. ಹಾಗಾದರೆ ಯಾರಿಗೆ ಬಂತು ಅಚ್ಛೇದಿನ್‌? ಅಂಬಾನಿ, ಅದಾನಿ, ವಿಜಯಮಲ್ಯ, ನೀರವ್‌ ಮೋದಿ, ಲಲಿತ್‌ ಮೋದಿ ಅವರಿಗೆ ಅಚ್ಛೇದಿನ್‌ ಬಂದಿದೆ ಎಂದು ವ್ಯಂಗ್ಯವಾಡಿದರು.

ನಿಜಬಣ್ಣ ಬಯಲಾಗುವ ದಿನ ಬರುತ್ತಿದೆ: ರಫೇಲ್‌ ಹಗರಣದ ಪುನರ್‌ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ಕೈಗೆತ್ತಿಕೊಂಡು ಕೇಂದ್ರ ಸರ್ಕಾರದ ಮನವಿಯನ್ನು ತಿರಸ್ಕರಿಸಿದೆ. 30 ಸಾವಿರ ಕೋಟಿ ರೂ. ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದಲ್ಲಿ ಬಿಜೆಪಿ ನೇತ್‌ತ್ವದ ಕೇಂದ್ರ ಸರ್ಕಾರದ ನಿಜಬಣ್ಣ ಬಯಲಾಗುವ ಕಾಲ ಸನ್ನಿಹಿತ ವಾಗಿದೆ ಂದರು. ಪ್ರಧಾನಿ ಮೋದಿ ಐಟಿ, ಇಡಿ, ಸಿಬಿಐ, ಆರ್‌ಬಿಐ
ನಂತಹ ಸ್ವಾಯತ್ತ ಸಂಸ್ಥೆಗಳನ್ನೂ ದುರ್ಬಳಕೆ ಮಾಡಿಕೊಂಡು ದೇಶವನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದ್ದಾರೆ ಎಂದು ದೂರಿದರು.

ತೇಜಸ್ವಿ ಸೂರ್ಯ ಅಮಾವಾಸ್ಯೆ -ಸಿದ್ದು ವ್ಯಂಗ್ಯ:
ಹಾಸನ: ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಮೇಲೆ ವಾಗ್ಧಾಳಿ ನಡೆಸಿದ ಮಾಜಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು, ಆತ ಸೂರ್ಯ ಅಲ್ಲ ಅಮವಾಸ್ಯೆ ಎಂದು ಟೀಕಿಸಿದರು. ಗಂಡಸಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ತೇಜಸ್ವಿ ಸೂರ್ಯ ಇನ್ನೂ ಹುಡುಗ. ಆತ ಈಗಲೇ ಡಾ.ಅಂಬೇಡ್ಕರ್‌ ಪ್ರತಿಮೆಗಳನ್ನು ಧ್ವಂಸ ಮಾಡಬೇಕು, ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಸುಟ್ಟು ಹಾಕಬೇಕು ಎಂದು ಎಂದು ಹೇಳುತ್ತಾನೆ ಎಂದು ಏಕ ವಚನದಲ್ಲಿ ಹರಿಹಾಯ್ದರು. ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಸ್ವಾಗತಿಸಿದರು. ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಮಾತನಾಡಿದರು. ಹಿರಿಯ ಕಾಂಗ್ರೆಸ್‌ ಮುಖಂಡ ಬಿ ಶಿವರಾಮು, ಶಾಸಕ ಸಿ.ಎನ್‌.ಬಾಲಕೃಷ್ಣ, ವಿಧಾನ ಪರಿಷತ್‌ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ, ರಮೇಶ್‌ ಗೌಡ, ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಾವಗಲ್‌ ಮಂಜುನಾಥ್‌ ಮತ್ತಿತರರು ಉಪಸ್ಥಿತರಿದ್ದರು

ಬಿಜೆಪಿ ಮುಗಿಸಲೆಂದೇ ಒಂದಾಗಿದ್ದೇವೆ
ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮಾತನಾಡಿ, ದೇಶ ದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬಾರದು. ಮೋದಿ ಪ್ರಧಾನಿ ಆಗಬಾರದು ಎಂದೇ ಕಾಂಗ್ರೆಸ್‌ – ಜೆಡಿಎಸ್‌ ಒಂದಾಗಿವೆ. ದೇಶದಲ್ಲಿ ಜಾತ್ಯತೀತ ತತ್ವದ ತಳಹದಿಯನ್ನು ಭದ್ರಗೊಳಿಸಿ ರೈತರ ಪರ ಸರ್ಕಾರ ರಚನೆ ಮಾಡಬೇಕೆಂದು ಕಾಂಗ್ರೆಸ್‌ ಮುಂದಾಗಿ ಎಚ್‌. ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಹಿಂದಿನ ಸಿದ್ದರಾಮ್ಯ ಸರ್ಕಾರದ ಎಲ್ಲಾ ಜನಪ್ರಿಯ
ಕಾರ್ಯಕ್ರಮಗಳನ್ನು ಮುಂದುವರಿಸಿ ರೈತರ ಸಾಲ ಮನ್ನಾ ಮಾಡಿದ ಕುಮಾರಸ್ವಾಮಿ ಸರ್ಕಾರ ಇರುವುದೇ ರೈತರಿಗಾಗಿ ಎಂದು ಹೇಳಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.