ದ.ಕ. ಕಾಂಗ್ರೆಸ್‌ ಟಿಕೆಟ್‌ ಫೈಟ್‌ :ನಾಯಕರಿಗೆ ದಿಲ್ಲಿಗೆ ಬುಲಾವ್


Team Udayavani, Mar 21, 2019, 1:00 AM IST

congress1.jpg

ಮಂಗಳೂರು: ಲೋಕಸಭಾ ಚುನಾವಣೆಯ ಕಾವು ಜೋರಾಗುತ್ತಿದ್ದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಟಿಕೆಟ್‌ ಪಡೆಯುವುದಕ್ಕೆ ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದ್ದು, ಹೈಕಮಾಂಡ್‌ಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಈ ಹಿನ್ನೆಲೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸುವ ವಿಚಾರ ಕಗ್ಗಂಟಾಗಿ ಪರಿಣಮಿಸಿರುವುದರಿಂದ ಎಲ್ಲ ಆಕಾಂಕ್ಷಿಗಳ ಜತೆಗೆ ಜಿಲ್ಲೆಯ ಪ್ರಮುಖ ಹಾಲಿ-ಮಾಜಿ ನಾಯಕರಿಗೆ ತುರ್ತಾಗಿ ಹೊಸದಿಲ್ಲಿಗೆ ಬರುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಬುಲಾವ್‌ ನೀಡಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ಪ್ರಮುಖರು ಹಾಗೂ ಎಲ್ಲ ಟಿಕೆಟ್‌ ಆಕಾಂಕ್ಷಿಗಳು ತುರ್ತಾಗಿ ಗುರುವಾರ ಹೊಸದಿಲ್ಲಿಗೆ ತೆರಳುತ್ತಿದ್ದಾರೆ ಎಂದು ಪಕ್ಷದ ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಗುರುವಾರ ಸಭೆ
ಗುರುವಾರ ಸಂಜೆ 6 ಗಂಟೆಗೆ ಹೊಸದಿಲ್ಲಿಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂ ರಾವ್‌ ಹಾಗೂ ಪ್ರಮುಖರಾದ ವಿಷ್ಣುನಾಥನ್‌ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವ ಯು.ಟಿ. ಖಾದರ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಸೇರಿದಂತೆ ಮಾಜಿ ಶಾಸಕರು ಹಾಗೂ ಜಿಲ್ಲಾ ಕಾಂಗ್ರೆಸ್‌ನ ಪ್ರಮುಖರ ಅಭಿಪ್ರಾಯ ಪಡೆದ ಬಳಿಕ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಹೈಕಮಾಂಡ್‌ ತೀರ್ಮಾನಿಸಿದೆ. ಆ ಮೂಲಕ ಅಭ್ಯರ್ಥಿ ಆಯ್ಕೆ ಅಂತಿಮವಾದ ಬಳಿಕ ಉದ್ಭವಿಸಬಹುದಾದ ಬಂಡಾಯವನ್ನು ಮೊದಲೇ ಶಮಗೊಳಿಸುವ ಪ್ರಯತ್ನಕ್ಕೆ ಹೈಕಮಾಂಡ್‌ ಮುಂದಾಗಿರುವುದು ಗಮನಾರ್ಹ.

ಬಿಜೆಪಿಯಲ್ಲಿ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಅವರನ್ನು ಮೂರನೇ ಬಾರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವುದು ಬಹುತೇಕ ಖಚಿತಗೊಂಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಕಾಂಗ್ರೆಸ್‌ನಲ್ಲಿ ಮಾತ್ರ ಅಭ್ಯರ್ಥಿ ಆಯ್ಕೆ ಕಸರತ್ತು ಇನ್ನೂ ಮುಂದುವರಿದಿದ್ದು, ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿದೆ. ಈ ಮಧ್ಯೆ ಮಾಜಿ ಸಚಿವ ಜನಾರ್ದನ ಪೂಜಾರಿ ಕೂಡ ಒಲವು ವ್ಯಕ್ತಪಡಿಸಿರುವುದರಿಂದ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ.

ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್‌ ಪಾಲಾಗಿರುವುದರಿಂದಾಗಿ ದ.ಕ. ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ನಡುವೆ ಪೈಪೋಟಿ ಜೋರಾಗಿದ್ದು, ಕೊನೆಯ ಗಳಿಗೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರ ಯಾರ ಪಾಲಾಗುತ್ತದೆ ಎನ್ನುವುದು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿರುವುದು ವಿಶೇಷ.

ಯಾರೆಲ್ಲ  ಆಕಾಂಕ್ಷಿಗಳು?
ದ.ಕ. ಕಾಂಗ್ರೆಸ್‌ನ ಟಿಕೆಟ್‌ ಪಡೆಯುವುದಕ್ಕೆ ಪ್ರಬಲ ಆಕಾಂಕ್ಷಿಗಳಾಗಿ ಸಹಕಾರಿ ಧುರೀಣ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ಮಾಜಿ ಸಚಿವ ಬಿ. ರಮಾನಾಥ ರೈ, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಯುವ ನಾಯಕ ಮಿಥುನ್‌ ರೈ, ಉದ್ಯಮಿ ಯು.ಕೆ. ಮೋನು ಸಹಿತ ಇನ್ನೂ ಹಲವರು ರೇಸ್‌ನಲ್ಲಿ ಇದ್ದಾರೆ. ರಾಜೇಂದ್ರ ಕುಮಾರ್‌, ರೈ, ಐವನ್‌, ಸೊರಕೆ, ಮಿಥುನ್‌ ಹಾಗೂ ಮೋನು ಅವರಿಗೂ ಹೊಸದಿಲ್ಲಿಗೆ ಬರುವಂತೆ ಸೂಚಿಸಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.