“ಬಿಜೆಪಿ ಎರಡು ಡಿಜಿಟ್‌ ಏರಲೂ ಬಿಡಲ್ಲ ‘


Team Udayavani, Mar 20, 2019, 1:15 AM IST

1-aa.jpg

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ -ಜೆಡಿಎಸ್‌ ಜತೆಗೂಡಿದ್ದು, ಬಿಜೆಪಿ ಸಂಸದರ ಸಂಖ್ಯಾಬಲ ಎರಡು ಡಿಜಿಟ್‌ ತಲುಪದಂತೆ ನೋಡಿಕೊಳ್ಳುತ್ತೇವೆ ಎಂದು ದೇವೇಗೌಡರು ಗುಡುಗಿದ್ದಾರೆ. ನಾನು, ಸಿದ್ದರಾಮಯ್ಯ ಜತೆಗೂಡಿದ್ದೇವೆ ಎಂದ ಮೇಲೆ ಸಂಶಯ ಬೇಡ. ನಾವು ಹೇಳುತ್ತಿರು ವುದನ್ನು ಮಾಡಿ ತೋರಿಸುತ್ತೇವೆ ಎಂದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾ ಘಟಬಂಧನ್‌ ಬಗ್ಗೆ ಪ್ರಧಾನಿ ಮೋದಿ ಲಘುವಾಗಿ ಮಾತನಾಡುತ್ತಿದ್ದಾರೆ. ಆದರೆ ಬಿಜೆಪಿ 15 ರಾಜ್ಯಗಳಲ್ಲಿ ಘಟಬಂಧನ್‌ ಸರಕಾರವನ್ನೇ ನಡೆಸುತ್ತಿದೆ ಎಂಬುದನ್ನು ಮರೆತಿದ್ದಾರೆ ಎಂದು ಟಾಂಗ್‌ ನೀಡಿದರು.

ಗೌಡರು ತುಮಕೂರಿನಿಂದ: ಅನಿತಾ
ಮದ್ದೂರು: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ತುಮಕೂರಿನಿಂದ ಸ್ಪರ್ಧಿಸುತ್ತಾರೆ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ. ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದರು. 
“ನನ್ನ ಬಗ್ಗೆ ತೀರ್ಮಾನಿಸುವ 

ಸ್ವಾತಂತ್ರ್ಯ ನನಗಿಲ್ಲವೇನ್ರಿ?’
ಬೆಂಗಳೂರು: ನಾನು ಎಲ್ಲಿ ಸ್ಪರ್ಧೆ ಮಾಡಲಿದ್ದೇನೆ, ಸ್ಪರ್ಧಿಸ ಬೇಕೇ- ಬೇಡವೇ ಎಂಬುದರ ಬಗ್ಗೆ ತೀರ್ಮಾನಿಸುವ ಕನಿಷ್ಠ ಸ್ವಾತಂತ್ರ್ಯ ನನಗೆ ಇದೆ. ದಿಲ್ಲಿಯಲ್ಲಿ ನನ್ನ ಅಗತ್ಯ ಎಷ್ಟಿದೆ ಎಂಬುದರ ಬಗ್ಗೆಯೂ ಯೋಚಿಸುತ್ತಿದ್ದೇನೆ ಎಂದು ದೇವೇಗೌಡ ಪ್ರತಿಪಾದಿಸಿದರು.

 ನನ್ನ ಸ್ಪರ್ಧೆ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಣಯ ತಿಳಿಸಲಿದ್ದೇನೆ. ಅಲ್ಲಿಯ ವರೆಗೂ ನಿಮ್ಮೆಲ್ಲ ಊಹಾಪೋಹಗಳಿಗೆ ವಿರಾಮ ಹಾಕಿ. ರಾಹುಲ್‌ ನಾಯಕತ್ವಕ್ಕೆ ಜತೆಗೂಡಿ ರಾಷ್ಟ್ರ ಮಟ್ಟದಲ್ಲಿ ನನ್ನಿಂದ ಏನಾದರೂ ಕಿಂಚಿತ್‌ ಸಹಾಯ ಮಾಡುತ್ತೇನೆ. ಲೋಕಸಭಾ ಚುನಾವಣೆ ಅನಂತರವೂ ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಸುಸೂತ್ರವಾಗಿ ನಡೆಯಲಿದೆ ಎಂದರು. ಹಾಸನದಿಂದ ಸ್ಪರ್ಧೆ ಕುರಿತ ಪ್ರಶ್ನೆಗೆ, 3 ವರ್ಷದ ಹಿಂದೆಯೇ ನಾನು ಸ್ಪಷ್ಟಪಡಿಸಿದ್ದೆ. ನಾನು ಸಂಸತ್‌ಗೆ ಹೋಗುವುದಿಲ್ಲ. ಪ್ರಜ್ವಲ್‌ ರೇವಣ್ಣ ಅವರೇ ಅಭ್ಯರ್ಥಿ ಎಂದು ಹೇಳಿದ್ದೆ ಎಂದರು.

ಜಯಪ್ರಕಾಶ್‌ ಹೆಗ್ಡೆ ಹೆಸರೂ ಇದೆ
ಸೀಟು ಹಂಚಿಕೆಯಲ್ಲಿ ಬದಲಾವಣೆ ಇದೆಯೇ ಎಂಬ ಪ್ರಶ್ನೆಗೆ, ಅಂತಹ ದೊಡ್ಡ ಬದಲಾವಣೆ ಏನೂ ಇಲ್ಲ ಎಂದರು. ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಲಾಗುವುದು ಎಂಬ ಮಾತುಗಳು ಇರುವ ಬಗ್ಗೆ, ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು. ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಪ್ರಮೋದ್‌ ಮಧ್ವರಾಜ್‌ ಅವರು ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡ್ತಾರಾ ಎಂದಾಗ, ನಾವು ಅದನ್ನು ಅನೌನ್ಸ್‌ ಮಾಡಿದ್ದೀವಾ, ಅವರ ಹೆಸರು ಇದೆ, ಜಯಪ್ರಕಾಶ್‌ ಹೆಗ್ಡೆ ಹೆಸರೂ ಇದೆ, ಆರತಿ ಕೃಷ್ಣ ಅವರ ಹೆಸರೂ ಕೇಳಿ ಬರುತ್ತಿದೆಯಲ್ಲವೇ, ನೋಡೋಣ ಎಂದರು.

“ಕುಟುಂಬ ರಾಜಕಾರಣ ಎಲ್ಲಿಲ್ಲ  ಹೇಳಿ?’
ಹಾಸನ: ದೇವೇಗೌಡರು ಮಾತ್ರ ಕುಟುಂಬ ರಾಜ ಕಾರಣ ಮಾಡುತ್ತಿದ್ದಾರಾ? ಬೇರೆ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲವೇ? ಮಾಧ್ಯಮಗಳು ಬೇರೆಯವರ ಕುಟುಂಬ ರಾಜಕಾರಣವನ್ನು ಏಕೆ ಪ್ರಸ್ತಾಪಿಸುವುದಿಲ್ಲ ಎಂದು ಸಚಿವ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿ, ದೇವೇಗೌಡರು ಕಣ್ಣೀರು ಹಾಕಿದರೆ ಅದನ್ನೇ ದೊಡ್ಡ ಸುದ್ದಿ ಮಾಡುತ್ತೀರಿ. ಬೇರೆ ರಾಜಕಾರಣಿಗಳು ಕಣ್ಣೀರು ಹಾಕಿಲ್ಲವೇ ಎಂದು ಹರಿಹಾಯ್ದರು. ಹಾಸನದಿಂದ ಪ್ರಜ್ವಲ್‌ ಸ್ಪರ್ಧೆ ಖಚಿತ. ಮಾ.22ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.