ಲೋಕ ಚುನಾವಣೆ ಬಳಿಕ ಸ್ತ್ರೀಶಕ್ತಿ ಸಾಲಮನ್ನಾ: ನಿಖಿಲ್‌

Team Udayavani, Apr 10, 2019, 3:00 AM IST

ಮಳವಳ್ಳಿ: “ಲೋಕಸಭೆ ಚುನಾವಣೆ ಮುಗಿದ ಬಳಿಕ ಸ್ತ್ರೀಶಕ್ತಿ ಸಾಲ ಮನ್ನಾ ಮಾಡಲಾಗುವುದು’ ಎಂದು ಮೈತ್ರಿಕೂಟದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. ತಾಲೂಕಿನ ಕಸಬಾ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ವೇಳೆ ಅವರು ಮಾತನಾಡಿದರು.

ರಾಜ್ಯಾದ್ಯಂತ ಎಲ್ಲಾ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಲಾಗುವುದು. ಜೊತೆಗೆ ಬಡ್ಡಿರಹಿತ ಸಾಲ ನೀಡಲಾಗುವುದು. ಸ್ತ್ರೀಶಕ್ತಿ ಮಹಿಳೆಯರ ಮಗನಾಗಿ ನಿಂತು ನಾನು ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ಹೇಳಿದರು.

ಮಳವಳ್ಳಿ ತಾಲೂಕಿನ ಅಭಿವೃದ್ಧಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಾವಿರ ಕೋಟಿ ರೂ.ಗೂ ಹೆಚ್ಚಿನ ಹಣ ನೀಡಿದ್ದಾರೆ. ಕೆರೆಗಳನ್ನು ತುಂಬಿಸಲು ಹಾಗೂ ನೀರಾವರಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ. ಚುನಾವಣೆ ಬಳಿಕ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರಕಿಸುವ ಭರವಸೆ ನೀಡಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ