ಪಕ್ಷ ಬಯಸಿದರೆ ವಾರಾಣಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸುತ್ತೇನೆ : ಪ್ರಿಯಾಂಕಾ
Team Udayavani, Apr 21, 2019, 5:19 PM IST
ವಯನಾಡು: ಕಾಂಗ್ರೆಸ್ ಅಧ್ಯಕ್ಷರು ಬಯಸಿದರೆ ನಾನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಸಿದ್ದನಿದ್ದೇನೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರು ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿಯುತ್ತೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ, ಪಕ್ಷದ ಅಧ್ಯಕ್ಷರು ಸೂಚಿಸಿದರೆ ಸ್ಪರ್ಧಿಸಲು ನಾನು ಸಂತಸಪಡುತ್ತೇನೆ ಎಂದಿದ್ದಾರೆ.
ವಯನಾಡು ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರ ಪರ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಮರಳುವ ವೇಳೆ ಪ್ರಿಯಾಂಕಾ ಈ ಹೇಳಿಕೆ ನೀಡಿದ್ದಾರೆ.
ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ವಿರುದ್ದ ಸ್ಪರ್ಧಿಸಲು ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳೇ ಇಲ್ಲ ಎಂದು ಬಿಜೆಪಿ ಟೀಕಿಸಿತ್ತು. ಆ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ವಾದ್ರಾ,ಮಲ್ಲಿಕಾರ್ಜುನ ಖರ್ಗೆ ಅವರು ಕಣಕ್ಕಿಳಿಯಲು ಸಿದ್ದ ಎಂದು ಹೇಳಿಕೆ ನೀಡಿದ್ದಾರೆ.