ಮುಂದುವರಿದ ಐಟಿ ದಾಳಿ:ಬಿಜೆಪಿ,ಕಾಂಗ್ರೆಸ್‌ ನಾಯಕರ ಆಪ್ತರು ಟಾರ್ಗೆಟ್‌

Team Udayavani, Apr 21, 2019, 9:58 AM IST

ಬೆಂಗಳೂರು: ರಾಜ್ಯದಲ್ಲಿ ಐಟಿ ದಾಳಿ ಮುಂದುವರಿದಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ಆಪ್ತರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ.

ಭಾನುವಾರ ಬೆಳ್ಳಂಬೆಳಗ್ಗೆ ಬಳ್ಳಾರಿಯಲ್ಲಿ ಬಿಜೆಪಿ ನಾಯಕ ಸೋಮಶೇಖರ ರೆಡ್ಡಿ ಆಪ್ತರ ನಿವಾಸ, ಶಾಸಕ ಶ್ರೀರಾಮುಲು ಆಪ್ತ ರಾಜು ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ಮಾಜಿ ಶಾಸಕ ಕೆಪಿಸಿಸಿ ಉಪಾಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ.

ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಅವರ ಸಂಬಂಧಿಕರೊಬ್ಬರ ನಿವಾಸದ ಮೇಲೆ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ.

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ವೇಳೆಯಲ್ಲೇ ಅಧಿಕಾರಿಗಳು ಮುಖಂಡರಿಗೆ ಶಾಕ್‌ ನೀಡಿದ್ದಾರೆ.

ಐಟಿ ಅಧಿಕಾರಿಗಳೊಂದಿಗೆ ಚುನಾವಣಾಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದರು.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ