ಜಾಧವ್ ನಾಳೆ ಬಿಜೆಪಿ ಸೇರ್ಪಡೆ?
Team Udayavani, Mar 5, 2019, 12:30 AM IST
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ನ ಡಾ.ಉಮೇಶ್ ಜಾಧವ್ ಬುಧವಾರ ಪ್ರಧಾನಿ ಮೋದಿಯವರು ಕಲಬುರಗಿಯಲ್ಲಿ ಪಾಲ್ಗೊಳ್ಳಲಿರುವ ಚುನಾವಣಾ ರ್ಯಾಲಿಯಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಉಮೇಶ್ ಜಾಧವ್ ಅವರನ್ನು ಪ್ರಧಾನಿ
ಸಮ್ಮುಖದಲ್ಲೇ ಪಕ್ಷ ಸೇರ್ಪಡೆ ಮಾಡಿಕೊಳ್ಳಲು ಬಿಜೆಪಿ ರಾಜ್ಯ ನಾಯಕರು ಚಿಂತಿಸಿದ್ದಾರೆ. ಆದರೆ ಉಮೇಶ್ ಜಾಧವ್ ಅವರು ಸಲ್ಲಿಸಿರುವ ರಾಜೀನಾಮೆ ಅಂಗೀಕಾರ ವಿಳಂಬವಾದರೆ ಇಲ್ಲವೇ ಇತರೆ ಸ್ವರೂಪ ಪಡೆದುಕೊಳ್ಳುವ ಆತಂಕವೂ ಕೆಲ ನಾಯಕರಿಗಿದೆ. ಹಾಗಾಗಿ ಪ್ರಧಾನಿಯವರು ಪಾಲ್ಗೊಳ್ಳುವ ಚುನಾವಣಾ ರ್ಯಾಲಿ ಸಂದರ್ಭದಲ್ಲೇ ಪಕ್ಷ ಸೇರ್ಪಡೆಯಾಗುವ ಬಗ್ಗೆ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ. ಮಂಗಳವಾರದ ಬೆಳವಣಿಗೆಯನ್ನು ಗಮನಿಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ