ಖರ್ಗೆಯವರಿಂದ ಗೌಪ್ಯ ಮತದಾನ ನಿಯಮ ಉಲ್ಲಂಘನೆ: ಬಿಜೆಪಿ ದೂರು

Team Udayavani, Apr 24, 2019, 3:36 AM IST

ಬೆಂಗಳೂರು: ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಕಲಬುರಗಿಯಲ್ಲಿ ತಮ್ಮ ಪತ್ನಿಯೊಂದಿಗೆ ಹೋಗಿ ಒಟ್ಟಿಗೆ ಮತದಾನ ಮಾಡುವ ಮೂಲಕ ಗೌಪ್ಯ ಮತದಾನ ನಿಯಮ ಉಲ್ಲಂ ಸಿದ್ದು, ಈ ಸಂಬಂಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಹ ವಕ್ತಾರ ಎ.ಎಚ್‌.ಆನಂದ್‌, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಮುಖಂಡರಾದ ವಿನೋದ್‌ ಕುಮಾರ್‌, ದತ್ತಗುರು ಹೆಗಡೆ ಇತರರ ನಿಯೋಗ ಮಂಗಳವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಈ ಸಂಬಂಧ ದೂರು ಸಲ್ಲಿಸಿತು.

ಬಳಿಕ ಪ್ರತಿಕ್ರಿಯಿಸಿದ ರವಿಕುಮಾರ್‌, ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಪತ್ನಿಯೊಂದಿಗೆ ಮತಗಟ್ಟೆಗೆ ತೆರಳಿ ಒಟ್ಟಿಗೆ ಮತದಾನ ಮಾಡಿದ್ದಾರೆ. ಆ ಮೂಲಕ ಪ್ರಜಾಪ್ರತಿನಿಧಿ ಕಾಯ್ದೆಯ ನಿಯಮ 128ರಡಿ ಗೌಪ್ಯ ಮತದಾನ ನಿಯಮ ಉಲ್ಲಂಘಿಸಿದ್ದಾರೆ.

ನಿಯಮಾನುಸಾರ ಒಬ್ಬರೇ ಹೋಗಿ ಗೌಪ್ಯ ಮತದಾನ ಮಾಡಬೇಕಿತ್ತು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೋರಲಾಗಿದೆ. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಕೂಡಲೇ ಪ್ರಾಥಮಿಕ ವರದಿ ಪಡೆದು ಕ್ರಮ ಕೈಗೊಳ್ಳಲು ಶಿಫಾರಸು ಮಾಡಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ