ಖರ್ಗೆ ವಿರುದ್ಧ ಪ್ರಧಾನಿ ಮೋದಿಯೇ ಸ್ಪರ್ಧಿಸಲಿ
Team Udayavani, Mar 3, 2019, 1:40 AM IST
ಮದ್ದೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಉಮೇಶ್ ಜಾದವ್ ಬದಲು ಪ್ರಧಾನಿ ನರೇಂದ್ರ ಮೋದಿಯೇ ಬಂದು ಸ್ಪರ್ಧೆ ಮಾಡಿದರೆ ಸ್ವಾಗತಿಸುವುದಾಗಿ ಸಮಾಜ ಕಲ್ಯಾಣಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.
ನಗರದಲ್ಲಿ ಸುದ್ಧಿಗಾರರೊಂ ದಿಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದಾಗಿದ್ದು, ಖರ್ಗೆ ವಿರುದ್ಧ ಮೋದಿಯೇ ಬಂದು ಸ್ಪರ್ಧೆ ಮಾಡಿದರೆ ಸ್ವಾಗತಿಸುವುದಾಗಿ ತಿಳಿಸಿದರು. “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಮ್ಮ ತಂದೆಯವರಾದ ಮಲ್ಲಿಕಾರ್ಜುನ ಖರ್ಗೆ ನಡುವೆ ಯಾವುದೇ ಮನಸ್ತಾಪವಿಲ್ಲ. ಕೆಲವರು ಗೊಂದಲ ಸೃಷ್ಟಿಸಲು ವಿನಾಕಾರಣ ಅಪಪ್ರಚಾರ
ಮಾಡುತ್ತಾರೆ. ಇದಕ್ಕೆ ಕಿವಿಗೊಡಬೇಡಿ’ ಎಂದು ಹೇಳಿದರು.