Udayavni Special

ಲೋಕಸಭೆ ಸಮರದ “ರಂಗಪ್ರವೇಶ’ 


Team Udayavani, Mar 19, 2019, 12:30 AM IST

vote-s.jpg

ಬೆಂಗಳೂರು:ಲೋಕಸಣೆ ಚುನಾವಣೆ ಸಮರಕ್ಕೆ ಮಂಗಳವಾರ(ಮಾ.19) ಅಧಿಸೂಚನೆ ಹೊರಬೀಳಲಿದ್ದು ನಾಮಪತ್ರ ಸಲ್ಲಿಕೆಯೂ ಪ್ರಾರಂಭವಾಗಲಿದೆ.

ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ  ಆರಂಭವಾಗಲಿದ್ದು, ಸಮರದ ಕಲಿಗಳಾÂರು ಎಂಬುದು ಗೊತ್ತಾಗಲಿದೆ.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿರುವುದು  ಈ ಚುನಾವಣೆಯ ವಿಶೇಷ. ಹಾಸನ, ಮಂಡ್ಯ ಹೊರತುಪಡಿಸಿದರೆ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳಲ್ಲಿ ಇನ್ನೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಬಿಜೆಪಿ ಕೋರ್‌ ಕಮಿಟಿಯಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಕೇಂದ್ರಕ್ಕೆ ರವಾನಿಸಲಾಗಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಹದಿನಾಲ್ಕು ಕ್ಷೇತ್ರಗಳ ಪೈಕಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಮುನ್ನವೇ ಮಂಡ್ಯ, ಹಾಸನ, ಮೈಸೂರು ಕ್ಷೇತ್ರಗಳು ಹೈ ವೋಲ್ಟೆàಜ್‌ ಕಣಗಳಾಗಿ ಮಾರ್ಪಟ್ಟಿದ್ದು, ಮಂಡ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖೀಲ್‌ ಹಾಗೂ ಸುಮಲತಾ ಅಂಬರೀಷ್‌ ನಡುವೆ ಹಣಾಹಣಿ ಏರ್ಪಡುವುದು ನಿಶ್ಚಿತವಾಗಿದೆ.

ಅದೇ ರೀತಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸ್ವ ಕ್ಷೇತ್ರ ಹಾಸನದಲ್ಲೂ ಮಾಜಿ ಸಚಿವ ಎ.ಮಂಜು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಅಭ್ಯರ್ಥಿಯಾಗುವುದು ಖಚಿತವಾಗಿರುವುದರಿಂದ ಅಲ್ಲಿ ಕಾಂಗ್ರೆಸ್‌-ಜೆಡಿಎಸ್‌ನ ಅಭ್ಯರ್ಥಿ ಎಂದು ಘೋಷಣೆಯಾಗಿರುವ ಪ್ರಜ್ವಲ್‌ರೇವಣ್ಣ  ಹಾಗೂ ಮಂಜು ನಡುವೆ ಕದನ ಏರ್ಪಡುವ ಸಾಧ್ಯತೆಯಿದೆ.

ಇನ್ನು ಮೈಸೂರಿನಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಯಾರು ಎಂಬುದು ಇನ್ನೂ ಘೋಷಣೆಯಾಗಿದ್ದರೂ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿವರೇ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ಜತೆಗೆ ಆ ಕ್ಷೇತ್ರವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ಸಹ ಆಗಿದೆ.

ಅಧಿಸೂಚನೆ ಹೊರಡಿಸಿದ ಮಾ.19ರ ದಿನದಿಂದಲೇ ನಾಮಪತ್ರ ಸಲ್ಲಿಕೆ ಸಹ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಮಾ.26 ಕೊನೆ ದಿನಾಂಕವಾಗಿದ್ದು, ಮಾ.27ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಮಾ.29 ಕೊನೆ ದಿನವಾಗಿದ್ದು, ಎಪ್ರಿಲ್‌ 18ರಂದು ಮತದಾನ ನಡೆಯಲಿದೆ. ಮೇ 23ಕ್ಕೆ ಮತ ಎಣಿಕೆ ನಡೆಯಲಿದ್ದು, ಮೇ 27ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಟಾಪ್ ನ್ಯೂಸ್

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.