ಶಿವಮೊಗ್ಗ ಕ್ಷೇತ್ರದ ಬಗ್ಗೆ ತಲೆಕೆಡಿಸಿಕೊಳ್ಳದ ಜೆಡಿಎಸ್ ವರಿಷ್ಠರು
Team Udayavani, Mar 14, 2019, 12:30 AM IST
ಬೆಂಗಳೂರು: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಪಕ್ಷದ ನಾಯಕರ ವರ್ತನೆಯಿಂದ ಬೇಸರಗೊಂಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು, ಮಧು ಬಂಗಾರಪ್ಪ ನಿವಾಸಕ್ಕೆ ಭೇಟಿ ನೀಡಿ ಮನವೊಲಿಸಿ ಸ್ಪರ್ಧೆಗೆ ಒಪ್ಪಿಸಿದರಾದರೂ ಆ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಸಹಿತ ಯಾವುದೇ ನಾಯಕರು ಶಿವಮೊಗ್ಗ ಕ್ಷೇತ್ರದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಇದು ಮಧು ಬಂಗಾರಪ್ಪ ಅವರಿಗೆ ಅಸಮಾಧಾನ ತರಿಸಿದೆ ಎಂದು ಹೇಳಲಾಗಿದೆ.
ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿ ಹಳೇ ಮೈಸೂರು ಭಾಗದ ಕ್ಷೇತ್ರಗಳ ಬಗ್ಗೆ ಮಾತ್ರ ತಲೆಕೆಡಿಸಿಕೊಂಡಿದ್ದಾರೆ. ಮಂಡ್ಯ, ಹಾಸನ, ತುಮಕೂರು, ಮೈಸೂರಿನಲ್ಲಿ ಜೆಡಿಎಸ್ ಶಾಸಕರು, ತಳಮಟ್ಟದ ಸಂಘಟನೆಯೂ ಬಲವಾಗಿದೆ. ಆದರೆ, ಶಿವಮೊಗ್ಗದಲ್ಲಿ ಯಡಿಯೂರಪ್ಪ ಕುಟುಂಬದ ವಿರುದ್ಧ ಹೋರಾಟ ಮಾಡಬೇಕು. ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಬಿಟ್ಟರೆ ಬೇರೆಲ್ಲಾ ಬಿಜೆಪಿ ಶಾಸಕರೇ ಇದ್ದಾರೆ. ಅಲ್ಲಿ ಪಕ್ಷಸಂಘಟನೆ ಮಾಡಬೇಕು. ರಾಜ್ಯ ನಾಯಕರು ತಮಗೆ ಸಹಕಾರ ನೀಡುತ್ತಿಲ್ಲ ಎಂಬುದು ಅವರ ಅಳಲು ಎನ್ನಲಾಗಿದೆ. ಉಪ ಚುನಾವಣೆ ಸೋಲಿನ ನಂತರ ಕೆಲವು ನಾಯಕರ ವರ್ತನೆಯಿಂದ ಬೇಸರಗೊಂಡು ಮಧು ಪಕ್ಷದ ಚಟುವಟಿಕೆಗಳಿಂದ ದೂರವೇ ಉಳಿದಿದ್ದರು.
ರಾಜ್ಯದಲ್ಲಿ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಇದ್ದರೂ ಪಕ್ಷ ಸಂಘಟನೆ ಮಾಡುತ್ತಿಲ್ಲ. ಚುನಾವಣೆ ಸಮಯದಲ್ಲಿ ಮಾತ್ರ ಪಕ್ಷ ಸಂಘಟನೆ ಮಾಡುವುದರಿಂದ ತಳಮಟ್ಟದಲ್ಲಿ ಕೆಲಸ ಮಾಡುವುದು ಕಷ್ಟ. ಸರ್ಕಾರ ನಮ್ಮದೇ ಇದ್ದರೂ ಪಕ್ಷಕ್ಕೆ ದುಡಿದವರನ್ನು ಪರಿಗಣಿಸಿಲ್ಲ ಎಂದು ನೇರವಾಗಿ ದೇವೇಗೌಡರಿಗೆ ತಿಳಿಸಿದ್ದರು. ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಗೌಡರು ಭರವಸೆ ನೀಡಿ ಮತ್ತೆ ಪಕ್ಷದಲ್ಲಿ ಸಕ್ರಿಯರಾಗುವಂತೆ ಮನವಿ ಮಾಡಿ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದರೆ, ಆ ನಂತರ ಶಿವಮೊಗ್ಗದತ್ತ ನಾಯಕರು ಯೋಚನೆ ಮಾಡುತ್ತಿಲ್ಲ. ಕುಮಾರಸ್ವಾಮಿಯವರನ್ನು ಭೇಟಿ ಮಾಡಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದಕ್ಕೆ ಯಾಕೆ ಸ್ಪರ್ಧೆಮಾಡಬೇಕು ಎಂಬುದು ಆ ಭಾಗದ ಜೆಡಿಎಸ್ ಮುಖಂಡರ ಅಸಮಾಧಾನ ಎಂದು ಹೇಳಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ದೇಹದ ಅಂಗಾಂಗಗಳಿಗೆ ಶಕ್ತಿ ತುಂಬುವ ವೀರಭದ್ರಾಸನ
ಮಹಾರಾಷ್ಟ್ರದಲ್ಲಿರುವ ಸಾಂಗ್ಲಿ, ಸೊಲ್ಲಾಪುರವನ್ನು ರಾಜ್ಯಕ್ಕೆ ಸೇರಿಸುತ್ತೇವೆ: ಬೊಮ್ಮಾಯಿ
ಗ್ರಾ.ಪಂ ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ಆಯ್ಕೆ: ಬ್ರಹ್ಮಾವರ ತಾಲೂಕಿನ ವಿವರ
ಹುತಾತ್ಮ ದಿನಾಚರಣೆಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಸಚಿವನ ವಾಪಸ್ ಕಳಿಸಿದ ಪೊಲೀಸರು
ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ