ದಕ್ಷಿಣ ಕನ್ನಡ: ಸಂಸದರಿಗೆ ಎದುರಾಗಿದೆ ರಾಷ್ಟ್ರೀಯ ಹೆದ್ದಾರಿ ಕಿರಿಕಿರಿ


Team Udayavani, Mar 10, 2019, 1:34 AM IST

nalin-kumar-kateel.jpg

ಮಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿಯೂ ಚುನಾವಣ ಕಣ ಕಾವೇರತೊಡಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಅದರಲ್ಲಿಯೂ ವಿಶೇಷವಾಗಿ ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ, ರಾಜಕೀಯ ಪಕ್ಷಗಳ ಪಾಲಿಗೆ ಜಿದ್ದಾಜಿದ್ದಿನ ಮತ್ತು ಪ್ರತಿಷ್ಠೆಯ ಕಣ.

ಕ್ಷೇತ್ರದಲ್ಲಿನ ಪ್ರಮುಖ ಪ್ರತಿಸ್ಪರ್ಧಿಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನ ಪ್ರಮುಖ ನಾಯಕರು ಜಿಲ್ಲೆಗೆ  ಆಗಮಿಸಿ, ಚುನಾವಣ ಪ್ರಚಾರ ಸಭೆಗಳಿಗೆ ಈಗಾಗಲೇ ಮುಹೂರ್ತ ಇಟ್ಟಿದ್ದಾರೆ. ಪ್ರತಿಪಾದನೆ-ಆಪಾದನೆ, ಸಾಧನೆ-ವೈಫಲ್ಯಗಳನ್ನು ಎರಡೂ ಪಕ್ಷಗಳು ಪಟ್ಟಿ ಮಾಡಿಕೊಂಡು, ಮತದಾರರ ಮುಂದಿಡುವ ಕಾರ್ಯ ಆರಂಭಿಸಿವೆ. ಬಿಜೆಪಿ ಪಾಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳು ಚುನಾವಣೆಯ ಪ್ರಮುಖ ಅಸ್ತ್ರ. ಅತ್ತ ಕಾಂಗ್ರೆಸ್‌ಗೆ ಹಾಲಿ ಸಂಸದರ ಆಡಳಿತ ವೈಫಲ್ಯಗಳೇ ಪ್ರಚಾರದ ಸರಕು.

ಭಾವನಾತ್ಮಕ ವಿಚಾರಗಳು ಮತ್ತು ಆಯಾಯ ಕಾಲದ ರಾಜ್ಯ ಮತ್ತು ರಾಷ್ಟ್ರಮಟ್ಟದ ರಾಜಕೀಯ ವಿದ್ಯಮಾನಗಳು ಚುನಾವಣ ಫಲಿತಾಂಶದಲ್ಲಿ ನಿರ್ಣಾಯಕವಾಗುತ್ತಿರುವುದು ಕ್ಷೇತ್ರದ ವಿಶೇಷತೆ. 1951ರಿಂದ 1989ರವರೆಗೆ ಸುಮಾರು 4 ದಶಕಗಳ ಕಾಲ ಕಾಂಗ್ರೆಸ್‌ ವಶದಲ್ಲಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ(ಹಿಂದಿನ ಮಂಗಳೂರು)ವನ್ನು  1991ರಿಂದ 2019ರವರೆಗೆ ಸುಮಾರು 28 ವರ್ಷಗಳಿಂದ ಸತತ 7 ಅವಧಿಗಳಿಗೆ ಬಿಜೆಪಿ ಪ್ರತಿನಿಧಿಸುತ್ತಿದೆ. ಬಿಜೆಪಿ ತನ್ನ ವಿಜಯಯಾತ್ರೆಯನ್ನು ಮುಂದುವರಿಸುವ ಲೆಕ್ಕಾಚಾರದಲ್ಲಿದ್ದರೆ, ಕಾಂಗ್ರೆಸ್‌ನವರು, ಬಿಜೆಪಿಯ  “ಅಷ್ಟ ವಿಜಯ’ದ ಕನಸನ್ನು ಭಂಗಗೊಳಿಸಿ, ಕ್ಷೇತ್ರದಲ್ಲಿ ಮರಳಿ ತಮ್ಮ ಪ್ರಾಬಲ್ಯ ಸ್ಥಾಪಿಸುವತ್ತ ಗಮನ ಕೇಂದ್ರೀಕರಿಸಿದ್ದಾರೆ.

ಬಿಜೆಪಿಗೆ ನರೇಂದ್ರ ಮೋದಿ ಅಸ್ತ್ರ
ಅಭ್ಯರ್ಥಿ ಮುಖ್ಯವಲ್ಲ, ಬದಲಿಗೆ ಪಕ್ಷ ಮುಖ್ಯ ಎಂದು ಪ್ರತಿಪಾದಿಸಿಕೊಂಡು ಬಂದಿರುವ ಬಿಜೆಪಿ, ಪ್ರಧಾನಿ ಮೋದಿ ಅವರ ಸಾಧನೆಗಳನ್ನು ಚುನಾವಣೆಯಲ್ಲಿ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಹಾಲಿ ಸಂಸದ ನಳಿನ್‌ ಅವರು ಮೋದಿಯವರ ಸಾಧನೆಗಳ ಜತೆಗೆ, ಕಳೆದ 5 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ತಂದಿರುವ ಅನುದಾನಗಳ ಪಟ್ಟಿಯನ್ನು ಜನರ ಮುಂದೆ ಇಡುತ್ತಿದ್ದಾರೆ. ಇದರ ಜತೆಗೆ ಸಮಾರಂಭಗಳನ್ನು ಆಯೋಜಿಸಿ ಕೇಂದ್ರ ಸರಕಾರದ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ವಿತರಿಸುವ, ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಹಾದು ಹೋಗುತ್ತಿರುವ ಮೂರು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಲ್ಲಿ ಆಗಿರುವ ಹಿನ್ನಡೆ, ಬಿಜೆಪಿ ಪಾಲಿಗೆ ಈ ಬಾರಿಯ ಚುನಾವಣೆಯಲ್ಲಿ ಒಂದಷ್ಟು ಕಿರಿಕಿರಿ ಸೃಷ್ಟಿಸುವ ಸಾಧ್ಯತೆಯಿದೆ. ಸಂಸದರ ವಿರುದ್ಧ ಇದನ್ನೇ ಪ್ರಮುಖ ಚುನಾವಣ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದೆ.

ಕಾಂಗ್ರೆಸ್‌ಗೆ ಸಂಸದರೇ ಟಾರ್ಗೆಟ್‌
ಕಳೆದ 28 ವರ್ಷಗಳಿಂದ ಕೈತಪ್ಪಿ ಹೋಗಿರುವ ಕ್ಷೇತ್ರದಲ್ಲಿ ಈ ಬಾರಿಯಾದರೂ ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್‌, ಆ ನಿಟ್ಟಿನಲ್ಲಿ ಈಗಾಗಲೇ ತನ್ನ ಚುನಾವಣ ಲೆಕ್ಕಾಚಾರ ಮತ್ತು ತಂತ್ರಗಾರಿಕೆಯನ್ನು ಆರಂಭಿಸಿದೆ. ಮೋದಿ ಸರಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದಕ್ಕಿಂತಲೂ ಹೆಚ್ಚಾಗಿ, ಕಟೀಲು ಅವರ ವೈಫಲ್ಯಗಳನ್ನು ಪಟ್ಟಿ ಮಾಡಿ, ಚುನಾವಣೆಯಲ್ಲಿ ಅವುಗಳನ್ನೇ ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್‌ ನಾಯಕರ ಪತ್ರಿಕಾಗೋಷ್ಠಿ, ಪಕ್ಷದ ಸಭೆಗಳಲ್ಲಿ ಇದೇ ಪ್ರಮುಖ ವಿಚಾರಗಳಾಗಿ ಪ್ರಸ್ತಾವನೆಯಾಗುತ್ತಿವೆ. ನಾನಾ ಕಾರಣಗಳಿಂದಾಗಿ ಬಿ.ಸಿ.ರೋಡ್‌-ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿರುವುದು, ಪಂಪ್‌ವೆಲ್‌ ಮತ್ತು ತೊಕ್ಕೊಟ್ಟು ಪ್ಲೆ„ಓವರ್‌ಗಳ ಕಾಮಗಾರಿ ಆರಂಭಗೊಂಡು 8 ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದಿರುವುದು, ಕುಲಶೇಖರ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಆರಂಭ ವಿಳಂಬ, ಸುರತ್ಕಲ್‌ ಟೋಲ್‌ಗೇಟ್‌ ಶುಲ್ಕ…ಮುಂತಾದ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ನಾಯಕರು ಈಗಾಗಲೇ ಸಂಸದರ ವಿರುದ್ಧ ಟೀಕಾಸ್ತ್ರಗಳನ್ನು ಪ್ರಯೋಗಿಸುತ್ತಿದ್ದಾರೆ. 

ನಳಿನ್‌ಗೆ ಟಿಕೆಟ್‌ ಗ್ಯಾರಂಟಿ
ಸತತವಾಗಿ ಎರಡು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ, ಇದೀಗ ಹ್ಯಾಟ್ರಿಕ್‌ ಸಾಧನೆಯ ನಿರೀಕ್ಷೆಯಲ್ಲಿರುವ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು  ಈ ಬಾರಿಯೂ ಪಕ್ಷದ ಟಿಕೆಟ್‌ ಪಡೆಯುವುದು ಬಹುತೇಕ ಖಚಿತ. ಇನ್ನು ಮೈತ್ರಿ ಪಕ್ಷಗಳ ನಡುವಿನ ಸೀಟು ಹಂಚಿಕೆ ಗೊಂದಲ ಇಲ್ಲಿಲ್ಲ. ಏಕೆಂದರೆ ಇಲ್ಲಿ ಜೆಡಿಎಸ್‌ ಹೆಚ್ಚು ಪ್ರಾಬಲ್ಯ ಹೊಂದಿಲ್ಲ. ಹೀಗಾಗಿ ಜೆಡಿಎಸ್‌ ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸುವುದು ಬಹುತೇಕ ಖಚಿತ. ಆದರೆ ಕಾಂಗ್ರೆಸ್‌ ಪಾಳಯದಲ್ಲಿ ಇನ್ನೂ ಅಭ್ಯರ್ಥಿ ಯಾರು ಎಂಬ ಬಗ್ಗೆ ಸ್ಪಷ್ಟ ಚಿತ್ರಣ ದೊರಕಿಲ್ಲ. ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್‌, ಐವನ್‌ ಡಿ’ಸೋಜ, ವಿನಯ ಕುಮಾರ್‌ ಸೊರಕೆ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ, ಪಕ್ಕದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಕುರಿತು ತಳುಕು ಹಾಕಿಕೊಂಡಿರುತ್ತದೆ. ಜತೆಗೆ ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮುಸ್ಲಿಮ್‌ ಸಮುದಾಯಕ್ಕೆ ಟಿಕೆಟ್‌ ನೀಡಬೇಕು ಎಂಬ ಬಲವಾದ ಬೇಡಿಕೆಯೂ ಸಮುದಾಯದ ನಾಯಕರಿಂದ ಕೇಳಿ ಬಂದಿದೆ.

ಕಳೆದ 5 ವರ್ಷಗಳಲ್ಲಿ ಕ್ಷೇತ್ರಕ್ಕೆ ಒಟ್ಟು 16,000 ಕೋ. ರೂ.ಗಳ ಅನುದಾನ ತಂದಿದ್ದೇನೆ. ಇತ್ತೀಚೆಗೆ ಸುಮಾರು 4,000 ಕೋ. ರೂ. ವೆಚ್ಚದ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ ಎಂಬುದು ಸಂಸದರ ಪ್ರತಿಪಾದನೆ. ಆದರೆ ಸಂಸದರ ಸಾಧನೆಗಳನ್ನು  ಪ್ರಶ್ನಿಸುತ್ತಿರುವ ಕಾಂಗ್ರೆಸ್‌ ನಾಯಕರು, ಇದರಲ್ಲಿ ಬಹುತೇಕ ಯೋಜನೆಗಳು ಹಿಂದಿನ ಯುಪಿಎ ಸರಕಾರದ ಅವಧಿಯಲ್ಲಿ ಮಂಜೂರು ಆಗಿರುವಂತದ್ದು ಎನ್ನುತ್ತಿದ್ದಾರೆ. ಅಲ್ಲದೆ ಕಳೆದ 10 ವರ್ಷಗಳಲ್ಲಿ ಸಂಸದರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ದಾಖಲೆ ಬಿಡುಗಡೆ ಮಾಡುವಂತೆ ಆಗ್ರಹಿಸುತ್ತಿದ್ದಾರೆ.

 ಕೇಶವ ಕುಂದರ್‌

ಟಾಪ್ ನ್ಯೂಸ್

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.