ಲೀಡ್‌ ಕೊಟ್ಟವರಿಗೆ ಮಾತ್ರ ಎಂಎಲ್‌ಎ ಟಿಕೆಟ್‌!

Team Udayavani, Apr 3, 2019, 6:00 AM IST

b-5

ಕಲಬುರಗಿ: ರಾಜ್ಯದಲ್ಲಿ 22 ಸೀಟುಗಳನ್ನು ಬಿಜೆಪಿ ಗೆಲ್ಲಲೇಬೇಕು ಹಾಗೂ ತೀವ್ರ ಹಣಾಹಣಿ ಎದುರಿಸುತ್ತಿರುವ, ಪ್ರತಿಷ್ಠಿತ ಕ್ಷೇತ್ರಗಳಲ್ಲೂ ಹೇಗಾದರೂ ಮಾಡಿ ಜಯಶಾಲಿ ಆಗಲೇಬೇಕೆಂಬ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್‌ ಹಲವಾರು ತಂತ್ರಗಾರಿಕೆ ರೂಪಿಸಿದ್ದು, ಅದರಲ್ಲಿ ಮುಂದಿನ ವಿಧಾನಸಭೆ
ಚುನಾವಣೆಯಲ್ಲಿ ಟಿಕೆಟ್‌ ನೀಡಿಕೆ ವಿಷಯದ ಎಚ್ಚರಿಕೆ ಬಾಣ ಬಿಟ್ಟಿದೆ.

ರಾಜ್ಯದಲ್ಲಿ 104 ಸೀಟುಗಳನ್ನು ಬಿಜೆಪಿ ಗೆದ್ದಿದೆ. ಇದರಲ್ಲಿ ಹಲವು ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹೆಚ್ಚಿನ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿಯೇ ಹೆಚ್ಚಿನ ಸ್ಥಾನಗಳನ್ನು ಪಡೆದಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ಇರುವುದರಿಂದ 2018ರ ವಿಧಾನಸಭೆ ಕ್ಷೇತ್ರದಲ್ಲಿ ತಾವು ಗಳಿಸಿದ್ದಕ್ಕಿಂತ ಹೆಚ್ಚಿನ (ಲೀಡ್‌) ಮತಗಳನ್ನು ಈ ಲೋಕಸಭೆ ಚುನಾವಣೆಯಲ್ಲಿ ತರಬೇಕು. ಒಂದು ವೇಳೆ ತರದೇ ಇದ್ದರೆ ಯಾವುದೇ ಸಂದರ್ಭದಲ್ಲಿ ಎದುರಾಗಬಹುದಾದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡುವುದಕ್ಕೆ ಹಿಂದೆ-ಮುಂದೆ ನೋಡಬೇಕಾ ಗುತ್ತದೆ
ಎಂದು ಸ್ಪಷ್ಟ ಸಂದೇಶ ರವಾನಿಸಲಾಗಿದೆ.

ಕಳೆದ ಸಲ ಲೋಕಸಭೆ ಚುನಾವಣೆ ನಡೆದಾಗ ಬಿಜೆಪಿ ಶಾಸಕರಿರುವ ಕ್ಷೇತ್ರದಲ್ಲೇ ಪಕ್ಷಕ್ಕೆ ಕಡಿಮೆ ಮತಗಳು ಲಭಿಸಿದ್ದವು. ಅಲ್ಲದೇ ಮಾಜಿ ಶಾಸಕರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿದ್ದ ಮತಗಳಿಗಿಂತ ಕಡಿಮೆ ಮತಗಳು ಅವರ ಕ್ಷೇತ್ರದಿಂದ ಲಭಿಸಿದ್ದವು. ಆದ್ದರಿಂದ ಕಲಬುರಗಿ
ಜಿಲ್ಲೆಯಲ್ಲಿ ಹಾಲಿ ಬಿಜೆಪಿ ಸದಸ್ಯರಿಗೆ ಈ ಸಂದೇಶ ರವಾನಿಸಲಾಗಿದೆ. ಅದೇ ರೀತಿ ಕ್ಷೇತ್ರದಲ್ಲಿ ಪರಾಭವ ಗೊಂಡಿರುವ ಮಾಜಿ ಶಾಸಕರು ಇಲ್ಲವೇ ಪಕ್ಷದ ಅಭ್ಯರ್ಥಿ ಗಳಿಗೂ ಪಕ್ಷಕ್ಕೆ ಲೀಡ್‌ ತಂದು ಕೊಟ್ಟಲ್ಲಿ ಮಾತ್ರ ಮುಂದಿನ ಬಾರಿ ಟಿಕೆಟ್‌ ಎಂದು ಹೇಳಿದ್ದರಿಂದ, ಮಾಜಿ ಶಾಸಕರೆಲ್ಲ ತಾವೇ
ಚುನಾವಣೆಯಲ್ಲಿ ನಿಂತಂತೆ ಓಡಾಡಲಾರಂಭಿಸಿದ್ದಾರೆ.

ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಮೂರು, ಕಾಂಗ್ರೆಸ್‌ ನಾಲ್ಕು ಹಾಗೂ ಒಂದು ಕ್ಷೇತ್ರದಲ್ಲಿ ಜೆಡಿಎಸ್‌ ಇದೆ. ಶಾಸಕರು ಶಕ್ತಿ ಮೀರಿ ಲೀಡ್‌ ತಂದು ಕೊಟ್ಟಲ್ಲಿ ಜತೆಗೆ ಸೋತ ಕ್ಷೇತ್ರಗಳಲ್ಲಿ ಮೋದಿ ಹವಾ ಹಾಗೂ ಪಕ್ಷದ ಸಂಘಟನೆ ಆಧಾರದ ಮೇಲೆ ಲೀಡ್‌ ತಂದಲ್ಲಿ ಗೆಲುವು ಸಾಧ್ಯ ಎಂದು ಪಕ್ಷದ ವರಿಷ್ಠರು ನಿರ್ದೇಶನ ನೀಡಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ ಒಂದೂವರೆ
ತಿಂಗಳಿನಿಂದ ಕ್ಷೇತ್ರದಲ್ಲಿಯೇ ಠಿಕಾಣಿ ಹೂಡಿದ್ದು, ಎಲ್ಲ ಆಗು ಹೋಗುಗಳ ಮೇಲೆ ತೀವ್ರ ನಿಗಾ ವಹಿಸಿ, ಸ್ವತಃ ತಂತ್ರಗಾರಿಕೆ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ
ಎನ್ನುವುದು ಕುತೂಹಲ ಮೂಡಿಸಿದೆ.

ಪಕ್ಷದ ಶಾಸಕರೇ ಒಳಗೊಳಗೆ ಕಾಂಗ್ರೆಸ್‌ ಪರ ಕೆಲಸ ಮಾಡುತ್ತಾರೆಯೇ ಎನ್ನುವ ಗುಮಾನಿ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್‌ ಈ ನಿರ್ದೇಶನ ನೀಡಿದೆ ಎನ್ನಲಾಗಿದೆ. ಇದರಿಂದ ಕಲಬುರಗಿ ಲೋಕಸಭಾ ಕ್ಷೇತ್ರದ ಚುನಾವಣೆ ಹೈವೊಲ್ಟೆàಜ್‌ ಕ್ಷೇತ್ರ ಆಗುವಂತೆ ಮಾಡಿದೆ. ಈಗಾಗಲೇ
ಪ್ರಧಾನಿ ಮೋದಿ ಕಲಬುರಗಿಗೆ ಬಂದು ಚುನಾವಣಾ ಪ್ರಚಾರ ಮಾಡಿ ಪಕ್ಷದ ಅಭ್ಯರ್ಥಿ ಗೆಲ್ಲಲೇಬೇಕೆಂಬ ಸ್ಪಷ್ಟ ಸಂದೇಶ ನೀಡಿ ಹೋಗಿದ್ದಾರೆ.

ಇತ್ತ ಕಾಂಗ್ರೆಸ್‌ ಪಕ್ಷವೂ ಗೆಲ್ಲಲು ತಂತ್ರಗಾರಿಕೆ ರೂಪಿಸಿದೆ. ಪಕ್ಷ ಗೆದ್ದರೆ ತಮಗೆಲ್ಲ ಅನುಕೂಲವಾಗುತ್ತದೆ. ಅಲ್ಲದೇ ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ದೊರೆತಿರುವ ಲೀಡ್‌ ಗಳನ್ನು ಉಳಿಸುವತ್ತ ನೋಟ ಬೀರಿ ಎಂದು ಪಕ್ಷದ ಹೈಕಮಾಂಡ್‌ ತನ್ನ ಶಾಸಕರಿಗೆ ಸ್ಪಷ್ಟ ಸಂದೇಶ ರವಾನಿಸಿದೆ. ಇನ್ನು ಬಿಜೆಪಿ ನೆಚ್ಚಿಕೊಂಡಿರುವ ಮತಗಳ ವಿಭಜನೆ ಮಾಡಲು ಕಾರ್ಯಗಳನ್ನು ರೂಪಿಸುತ್ತಿದೆ ಎನ್ನಲಾಗಿದೆ. ಇದೇ ನಿಟ್ಟಿನಲ್ಲಿ ಮುಖಂಡರನ್ನು ಸೆಳೆಯಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯಲ್ಲೂ ಪರಿಣಾಮಕಾರಿ ಕೆಲಸ ಮಾಡಲಿ ಎನ್ನುವ ಉದ್ದೇಶದಿಂದ ಹಾಗೂ ಪರಿಣಾಮ ಬೀರುತ್ತದೆ ಎನ್ನುವ ದೃಷ್ಟಿಯಿಂದ ಆಂತರಿಕವಾಗಿ ಸೂಚಿಸಲಾಗಿದೆ. ಒಟ್ಟಾರೆ ಚುನಾವಣೆಯಲ್ಲಿ ಗೆಲ್ಲುವಲ್ಲಿ ಇದೊಂದು ತಂತ್ರಗಾರಿಕೆ.
ಎನ್‌.ರವಿ ಕುಮಾರ್ ಬಿಜಪಿ ರಾಜ್ಯ ಪ್ರ. ಕಾರ್ಯದರ್ಶಿ, ಉಸ್ತುವಾರಿ ಕಲಬುರಗಿ ಕ್ಷೇತ್ರ

ಹನುಮಂತರಾವ ಬೈರಾಮಡಗಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.