ಸುಳ್ಯದ ವಿವಿಧೆಡೆ ಸಂಸದ ನಳಿನ್‌ ಕುಮಾರ್‌ ಪ್ರಚಾರ

Team Udayavani, Apr 2, 2019, 2:01 PM IST

0104SLKP3a

ಸುಳ್ಯ : ಚುನಾವಣ ಫಲಿತಾಂಶದ ಬಳಿಕ ರಿಕ್ಷಾ ಚಾಲಕರ ಬೇಡಿಕೆಗಳಿಗೆ ಸ್ಪಂದಿಸಬೇಕು. ಬಿಎಂಎಸ್‌ ಸಂಘಕ್ಕೆ ಸೇರಿದ 99ರಷ್ಟು ರಿಕ್ಷಾ ಚಾಲಕರು ಬಿಜೆಪಿಗೆ ಮತ ಚಲಾಯಿಸುತ್ತಾರೆ ಎಂದು ಬಿಎಂಎಸ್‌ ಮುಖಂಡ ಗೋಪಾಲಕೃಷ್ಣ ಭಟ್‌ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸೋಮವಾರ ಲೋಕಸಭಾ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಬಿಎಂಎಸ್‌ ರಿಕ್ಷಾ ಚಾಲಕರೊಂದಿಗೆ ಸಂವಾದ ನಡೆಸಿದರು.  ನಳಿನ್‌ ಕುಮಾರ್‌ ಕಟೀಲು ಅವರು ಮೋದಿ ಸರಕಾರದ ಸಾಧನೆಗಳ ಕುರಿತು ಮತ್ತು ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡಿದರು. ಬಳಿಕ ರಿಕ್ಷಾ ಚಾಲಕರು ಅಭಿಪ್ರಾಯ ವ್ಯಕ್ತಪಡಿಸಿದರು. ಬಿಎಂಎಸ್‌ಗೆ ಒಂದು ಕಟ್ಟಡ ಆಗಬೇಕು. ಅದಕ್ಕಾಗಿ ನಕ್ಷೆ ತಯಾರಿಸಲಾಗಿದೆ. ನಮ್ಮಲ್ಲಿ ಹಲವರಿಗೆ ಬ್ಯಾಡ್ಜ್ ಸಮಸ್ಯೆ ಇದ್ದು ಇದನ್ನು ನಿವಾರಿಸಬೇಕು. ಪೆಟ್ರೋಲ್‌ ಸಬ್ಸಿಡಿಯಲ್ಲಿ ಸಿಗಬೇಕು ಎಂದು ಗೋಪಾಲಕೃಷ್ಣ ಹೇಳಿದರು.

ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ಮಾತನಾಡಿ, ಗಾಂಧಿನಗರ ಸೇರಿ ಕೆಲವೆಡೆ ರಿಕ್ಷಾ ಪಾರ್ಕಿಂಗ್‌ ಸಮಸ್ಯೆ ಇದೆ. ಈ ಬಗ್ಗೆ ನ.ಪಂ.ಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಇದನ್ನು ಸರಿಪಡಿಸಲು ಸಹಕಾರ ನೀಡಬೇಕು ಮತ್ತು ರಿಕ್ಷಾ ಚಾಲಕರಿಗೆ ಇಎಸ್‌ಐ ಮಾಡುವಲ್ಲಿ ಸಹಕರಿಸಬೇಕು ಎಂದರು. 50 ರಿಕ್ಷಾ ಚಾಲಕರು ಭಾಗವಹಿಸಿದ್ದರು. ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌, ಶಾಸಕ ಎಸ್‌. ಅಂಗಾರ, ಜಿ.ಪಂ. ಸದಸ್ಯ ಹರೀಶ್‌ ಕಂಜಿಪಿಲಿ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ ವಳಲಂಬೆ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸುರೇಶ್‌ ಕಣೆಮರಡ್ಕ, ಸುಬೋಧ್‌ ಶೆಟ್ಟಿ ಮೇನಾಲ, ಮಹೇಶ್‌ ರೈ ಮೇನಾಲ, ಶೀನಪ್ಪ ಬಯಂಬು, ಶೈಲೇಶ್‌ ಅಂಬೆಕಲ್ಲು ಉಪಸ್ಥಿತರಿದ್ದರು.

ಕ್ಯಾಂಪಸ್‌ ಭೇಟಿ, ಸಭೆಯಲ್ಲಿ ಭಾಗಿ
ನಳಿನ್‌ ಕುಮಾರ್‌ ಕಟೀಲು ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಗೆ ಭೇಟಿ ನೀಡಿ ಮತಯಾಚಿಸಿದರು. ಆಲೆಟ್ಟಿ ಬಾರ್ಪಣೆ ಯುವಕ ಮಂಡಲದ ವಠಾರ ದಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿದರು. ಅರಂತೋಡು-ತೊಡಿಕಾನದಲ್ಲಿ ಕಾರ್ಯಕರ್ತರ ಸಭೆ, ಮರ್ಕಂಜ, ನೆಲ್ಲೂರು ಕೆಮ್ರಾಜೆ, ಐವರ್ನಾಡು, ಅಜ್ಜಾವರ ಮಂಡೆಕೋಲು, ಜಾಲ್ಸೂರು- ಕನಕಮಜಲಿನ ಸಭೆಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.