ಅಲ್ಪ ಸಂಖ್ಯಾತರ ಗೆಲುವಿಗೆ ಮುಸ್ಲಿಂ ಮುಖಂಡರ ನಿರ್ಧಾರ
Team Udayavani, Apr 10, 2019, 3:00 AM IST
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಅಲ್ಪ ಸಂಖ್ಯಾತರಿಗೆ ನಿರೀಕ್ಷಿಸಿದಷ್ಟು ಸ್ಥಾನ ನೀಡಿಲ್ಲ ಎಂಬ ಕಾರಣಕ್ಕೆ ಮುನಿಸಿಕೊಂಡಿದ್ದ ಅಲ್ಪ ಸಂಖ್ಯಾತ ಮುಖಂಡರು ಸೋಮವಾರ ಸಭೆ ಸೇರಿ ಅಲ್ಪ ಸಂಖ್ಯಾತರಿಗೆ ನೀಡಿರುವ ಒಂದು ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರಲು ಒಗ್ಗಟ್ಟಿನಿಂದ ಶ್ರಮಿಸಲು ತೀರ್ಮಾನಿಸಿದ್ದಾರೆ.
ನಾಲ್ಕು ಕ್ಷೇತ್ರಗಳಲ್ಲಿ ಟಿಕೆಟ್ ಕೇಳಿದ್ದ ಮುಸ್ಲಿಂ ಸಮುದಾಯಕ್ಕೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರವನ್ನು ಮಾತ್ರ ನೀಡಲಾಗಿತ್ತು. ಇದರಿಂದ ಮುನಿಸಿಕೊಂಡಿದ್ದ ಅಲ್ಪ ಸಂಖ್ಯಾತ ಸಮುದಾಯದ ಮುಖಂಡರು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು.
ಆ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್‌ಗೆ ಎಚ್ಚರಿಕೆ ಸಂದೇಶ ರವಾನಿಸಲು ಸೋಮವಾರ ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್, ಸಚಿವ ಜಮೀರ್ ಅಹಮದ್, ಮಾಜಿ ಸಚಿವ ರೋಷನ್ ಬೇಗ್, ನಜೀರ್ ಅಹಮದ್, ಅಬ್ದುಲ್ ವಹಾಬ್ ಸೇರಿದಂತೆ ಮುಸ್ಲಿಂ ಸಮುದಾಯದ ಮೌಲ್ವಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ ಮಾಡಿರುವ ಅನ್ಯಾಯಕ್ಕೆ ಎಚ್ಚರಿಕೆ ನೀಡಬೇಕೆಂದು ಕೆಲವು ನಾಯಕರು ಸಭೆಯಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದ್ದು, ಆದರೆ, ಈಗ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ರಿಜ್ವಾನ್ ಅರ್ಷದ್ ಗೆಲ್ಲುವ ಭರವಸೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿದೆ.
ಅಲ್ಪ ಸಂಖ್ಯಾತರ ಒಬ್ಬ ಅಭ್ಯರ್ಥಿಯನ್ನಾದರೂ ಗೆಲ್ಲಿಸಿಕೊಂಡು ಬಂದರೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಸ್ಥಾನ ಕೇಳಲು ಅವಕಾಶ ದೊರೆಯುತ್ತದೆ. ಅದಕ್ಕಾಗಿ ಸಮುದಾಯದಲ್ಲಿನ ಭಿನ್ನಾಭಿಪ್ರಾಯ ಮರೆತು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಗೆಲ್ಲಿಸಿಕೊಂಡು ಬರುವ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಅಪಘಾತ : ಇಬ್ಬರು ಸಾವು, ಓರ್ವ ಗಂಭೀರ
ವಿಜಯಪುರ ಜಿಲ್ಲೆಯಲ್ಲಿ ಮಳೆ ಅವಾಂತರ : 25 ಮನೆಗಳಿಗೆ ಹಾನಿ, 3 ಜಾನುವಾರು ಬಲಿ
ಅಕ್ಬರ್,ಟಿಪ್ಪು,ಅಲೆಗ್ಸಾಂಡರನ್ನು ಮಾತ್ರ ಮಹಾನ್ ಎಂದು ಚಿತ್ರಿಸಿದ್ದೇಕೆ?:ಬಿಜೆಪಿ ಪ್ರಶ್ನೆ
ಎಂಟು ವಾರದಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಗಿಸಲು ಸುಪ್ರೀಂ ನಿರ್ದೇಶನ
ಬೆಂಗಳೂರು; ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶವಿಲ್ಲ : ಸಿಎಂ ಬೊಮ್ಮಾಯಿ