ಸ್ಫರ್ಧೆ ಬಗ್ಗೆ ಪ್ರಸಾದ್‌ ಇಂದು ನಿರ್ಧಾರ ಪ್ರಕಟ ಸಾಧ್ಯತೆ

Team Udayavani, Mar 15, 2019, 7:26 AM IST

ಮೈಸೂರು: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್‌ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಡಕ್ಕೆ ಮಣಿದು ಲೋಕಸಭಾ ಚುನಾವಣೆಯಲ್ಲಿ ಚಾಮರಾಜ ನಗರ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸಪ್ರಸಾದ್‌ ಅವರ ನಿವಾಸಕ್ಕೆ ಗುರುವಾರ ಆಗಮಿಸಿದ ಚಾಮರಾಜ ನಗರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಆರ್‌.ಧ್ರುವನಾರಾಯಣ ವಿರುದ್ಧ ಸ್ಪರ್ಧೆ ಮಾಡುವಂತೆ ಒತ್ತಡ ಹೇರಿದರು. ಆದರೆ, ನಂಜನಗೂಡು ಉಪ ಚುನಾವಣೆ ಸಂದರ್ಭದಲ್ಲೇ ನಾನು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಸಕ್ರಿಯ ರಾಜಕಾರಣದಲ್ಲಿದ್ದು ಕಿರಿಯರಿಗೆ ಮಾರ್ಗದರ್ಶನ ಮಾಡುತ್ತೇನೆ.

ಮುಖಂಡರಿಗೆ ಭರವಸೆ: ನಾನು ಚುನಾವಣೆಗೆ ಸ್ಪರ್ಧಿಸುವ ಮನಸ್ಥಿತಿಯಲ್ಲಿಲ್ಲ. ಚಾಮರಾಜ ನಗರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಒಟ್ಟಾಗಿ ದುಡಿದು ಗೆಲ್ಲಿಸಿಕೊಳ್ಳೋಣ ಎಂದು ತಿಳಿ ಹೇಳಿದರೂ ಪಟ್ಟು ಬಿಡದಿದ್ದರಿಂದ, ಈ ಬಗ್ಗೆ ಶುಕ್ರವಾರ ಅಂತಿಮ ನಿರ್ಧಾರ ತಿಳಿಸುವುದಾಗಿ ಶ್ರೀನಿವಾಸಪ್ರಸಾದ್‌, ಕಾರ್ಯಕರ್ತರು-ಮುಖಂಡರಿಗೆ ಭರವಸೆ ನೀಡಿ ಕಳುಹಿಸಿದರು.

ಸ್ವಾಭಿಮಾನದ ಪರೀಕ್ಷೆ: ಮಾಜಿ ಶಾಸಕ ಸಿ.ಗುರುಸ್ವಾಮಿ ಮಾತನಾಡಿ, ನಂಜನಗೂಡು ಉಪ ಚುನಾವಣೆಯ ಸೋಲಿನಿಂದ ಶ್ರೀನಿವಾಸ ಪ್ರಸಾದ್‌ ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಈ ಲೋಕಸಭಾ ಚುನಾವಣೆಯಲ್ಲಿ ಚಾಮರಾಜ ನಗರ ಕ್ಷೇತ್ರದಿಂದಲೇ ಅವರನ್ನು ಗೆಲ್ಲಿಸುವ ಮೂಲಕ ಅವರ ಸ್ವಾಭಿಮಾನದ ಪರೀಕ್ಷೆಯಾಗಬೇಕು ಎಂದು ಹೇಳಿದರು.

ಮೋದಿ ಕೈ ಬಲಪಡಿಸಿ: ಈ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಲ್ಲಿ 17 ಮಂದಿ ಆಕಾಂಕ್ಷಿಗಳಿದ್ದಾರೆ. ಆದರೆ, ನೀವು ಸ್ಪರ್ಧೆ ಮಾಡಲು ಮುಂದಾದರೆ ಅವರೆಲ್ಲಾ ಹಿಂದೆ ಸರಿದು ಒಮ್ಮತದಿಂದ ನಿಮ್ಮನ್ನು ಬೆಂಬಲಿಸಲು ತಿರ್ಮಾನಿಸಿದ್ದು, ಕೇಂದ್ರದಲ್ಲಿ ಮತ್ತೂಮ್ಮೆ ನರೇಂದ್ರ ಮೋದಿ ಅವರ ಸರ್ಕಾರ ತರುವ ನಿಟ್ಟಿನಲ್ಲಿ ಮೋದಿ ಅವರ ಕೈ ಬಲಪಡಿಸಲು, ಚಾಮರಾಜ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಮ್ಮನ್ನು ಗೆಲ್ಲಿಸುವ ಮೂಲಕ ಕೊಡುಗೆ ನೀಡಬೇಕಿದೆ ಎಂದು ಹೇಳಿದರು.

ಒತ್ತಡ ಹೇರಿ, ಜೈಕಾರ: ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಹಾಗೂ ಶ್ರೀನಿವಾಸಪ್ರಸಾದ್‌ ಅಭಿಮಾನಿ ಬಳಗದ ಸದಸ್ಯರು, ಪ್ರಸಾದ್‌ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲೇಬೇಕು ಎಂದು ಒತ್ತಡ ಹೇರಿ, ಜೈಕಾರ ಮೊಳಗಿಸಿದರು. 

ಇಂದು ಬಿಎಸ್‌ವೈ ಜೊತ ಚರ್ಚೆ: ಕಾರ್ಯಕರ್ತರು ಮತ್ತು ಮುಖಂಡರ ಒತ್ತಡಕ್ಕೆ ಮಣಿದ ಶ್ರೀನಿವಾಸಪ್ರಸಾದ್‌ ಅವರು ಶುಕ್ರವಾರ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿ ಬೆಂಗಳೂರಿಗೆ ತೆರಳಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಶುಕ್ರವಾರ ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಚಾಮರಾಜ ನಗರ ಜಿಪಂ ಸದಸ್ಯ  ಕಮಲ್‌, ಎಸ್‌.ಸಿ ಮೋರ್ಚಾ ಅಧ್ಯಕ್ಷ ಮಹಾದೇವ ಸ್ವಾಮಿ, ಶ್ರೀಧರ ಮೂರ್ತಿ, ನಂಜನಗೂಡು ತಾಪಂ  ಸದಸ್ಯ ಬಿ.ಎಸ್‌.ರಾಮು ಸೇರಿದಂತೆ ಹಲವರು ಹಾಜರಿದ್ದರು. 

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಮನಸ್ಥಿತಿಯಲ್ಲಿಲ್ಲ. ಆದರೆ, ನನ್ನ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಒತ್ತಡ ಹೆಚ್ಚಾಗಿದೆ. ಅವರ ಮನವಿಯನ್ನು ಪುರಸ್ಕರಿಸಬೇಕೋ, ತಿರಸ್ಕರಿಸಬೇಕೋ ಎಂಬುದು ತಿಳಿಯುತ್ತಿಲ್ಲ.  ಬಿಜೆಪಿಯ ಹೈಕಮಾಂಡ್‌ ಕೂಡ ನನಗೆ ಟಿಕೆಟ್‌ ನೀಡಲು ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಣಯ ಕೈಗೊಳ್ಳುತ್ತೇನೆ.
-ವಿ.ಶ್ರೀನಿವಾಸಪ್ರಸಾದ, ಮಾಜಿ ಸಚಿವ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ