ಏ.20ಕ್ಕೆ ಖರ್ಗೆ ಪರ ಪ್ರಿಯಾಂಕಾ ಪ್ರಚಾರ?

Team Udayavani, Apr 16, 2019, 3:00 AM IST

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾರನ್ನು ಕರೆ ತರಲು ರಾಜ್ಯ ಕಾಂಗ್ರೆಸ್‌ ನಾಯಕರು ಕೊನೆಯ ಹಂತದ ಕಸರತ್ತು ನಡೆಸಿದ್ದು, ಏಪ್ರಿಲ್‌ 20ರಂದು ಖರ್ಗೆ ಪರ ಪ್ರಿಯಾಂಕಾ ಪ್ರಚಾರ ಕೈಗೊಳ್ಳುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿರುವ ಉತ್ತರ ಕರ್ನಾಟಕದ ಕಲಬುರಗಿ ಕ್ಷೇತ್ರದಲ್ಲಿ ಏಪ್ರಿಲ್‌ 20ರಂದು ಪ್ರಿಯಾಂಕಾ ವಾದ್ರಾರನ್ನು ಪ್ರಚಾರಕ್ಕೆ ಕರೆ ತರಲು ಪ್ರಯತ್ನ ಮುಂದುವರಿದಿದ್ದು, ಅಂದು ಪ್ರಿಯಾಂಕಾ ವಾದ್ರಾ ಕಲಬುರಗಿಗೆ ಆಗಮಿಸಿ, ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪರವಾಗಿ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಏಪ್ರಿಲ್‌ 20ರಂದು ಪ್ರಿಯಾಂಕಾ ವಾದ್ರಾ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವುದರಿಂದ ಅದೇ ದಿನ ಮುಂಜಾನೆ ರಾಜ್ಯದಲ್ಲಿ ಪ್ರಚಾರ ಕೈಗೊಳ್ಳುವಂತೆ ರಾಜ್ಯ ನಾಯಕರು ಪ್ರಿಯಾಂಕಾ ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ