ಸತೀಶ್‌ ಜಾರಕಿಹೊಳಿಗೆ ತಲೆ ಕೆಟ್ಟಿದೆ : ರಮೇಶ್‌ ಜಾರಕಿಹೊಳಿ ಕಿಡಿ

ರಾಜೀನಾಮೆ ನೀಡಿದ ಬಳಿಕ ಮುಂದಿನ ನಿರ್ಧಾರ

Team Udayavani, Apr 23, 2019, 11:56 AM IST

ಗೋಕಾಕ್‌ : ಸಚಿವ ಸತೀಶ್‌ ಜಾರಕಿಹೊಳಿಗೆ ತಲೆ ಕೆಟ್ಟಿದೆ ಎಂದು ಮಾಜಿ ಸಚಿವ ಕಾಂಗ್ರೆಸ್‌ ಬಂಡಾಯ ಶಾಸಕ ರಮೇಶ್‌ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್‌ ಜಾರಕಿಹೊಳಿ,  ನಾನೀಗ ತಾಂತ್ರಿಕವಾಗಿ ಕಾಂಗ್ರೆಸ್‌ ಪಕ್ಷದಲ್ಲಿದ್ದೇನೆ. ರಾಜೀನಾಮೆ ನೀಡಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

ಸಹೋದರ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಕಿಡಿ ಕಾರಿದ ರಮೇಶ್‌ ಜಾರಕಿಹೊಳಿ, ಈಗಾಗಲೆ ಒಬ್ಬ ಸಹೋದರನನ್ನು ಹಾಳು ಮಾಡಿದ್ದಾನೆ. ಅವನ ತಲೆ ಕೆಟ್ಟಿದೆ ಎಂದರು.

ಗೋಕಾಕ್‌ನಲ್ಲಿ ಲಖನ್‌ ಸ್ಪರ್ಧಿಸಿದರೆ ನನ್ನಷ್ಟು ಖುಷಿ ಪಡುವ ವ್ಯಕ್ತಿ ಬೇರೆಯವರಿಲ್ಲ ಎಂದರು.

ನಾನೇನೂ ಹಾಳಾಗಿಲ್ಲ, ಕಾಂಗ್ರೆಸ್‌ನಲ್ಲೇ ಇದ್ದೇನೆ
ರಮೇಶ್‌ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ ಸಹೋದರ ಲಖನ್‌ ಜಾರಕಿಹೊಳಿ ನಾನು ಎಲ್ಲೋ ಹೋಗಿ ಹಾಳಾಗಿ ಹೋಗಿಲ್ಲ. ಕಾಂಗ್ರೆಸ್‌ನಲ್ಲೇ ಇದ್ದೇನೆ.ಸಿದ್ದರಾಮಯ್ಯ ನಮ್ಮ ನಾಯಕ. ಗೋಕಾಕ್‌ ಕಾಂಗ್ರೆಸ್‌ನ ಭದ್ರ ಕೋಟೆ ಎಂದರು.

ನನಗೆ ಗೊತ್ತಿಲ್ಲ !

ರಾಜೀನಾಮೆ ವಿಷಯ ನನಗೆ ಗೊತ್ತಿಲ್ಲ .ಜಾರಕಿಹೊಳಿ ಸಹೋದರರು , ಮಹೇಶ್‌ ಕುಮಟಳ್ಳಿ ಅವರು ನನ್ನ ಸ್ನೇಹಿತರು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್‌ ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ. ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿದ್ದೇವೆ ಎಂದು ಪಾಟೀಲ್‌ ಹೇಳಿದರು.

ತೀವ್ರ ಅಸಮಾಧಾನ

ಕಾಂಗ್ರೆಸ್‌ ಪರ ಪ್ರಚಾರದಿಂದ ದೂರ ಉಳಿದಿದ್ದ ರಮೇಶ್‌ ಜಾರಕಿಹೊಳಿ ವಿರುದ್ಧ ಸತೀಶ್‌ ಜಾರಕಿಹೊಳಿ ತೀವ್ರ ಅಸಮಾಧಾನ ಹೊರ ಹಾಕಿ ಲಖನ್‌ನನ್ನು ವಿರುದ್ಧವಾಗಿ ಉಪಚುನಾವಣೆಯಲ್ಲಿ ಕಣಕ್ಕಿಳಿಸುವುದಾಗಿ ಘೋಷಿಸಿದ್ದರು. ಗೋಕಾಕ್‌ ಕ್ಷೇತ್ರದಲ್ಲಿ ಸತೀಶ್‌ ಜಾರಕಿಹೊಳಿ ಮತ್ತು ಲಖನ್‌ ಜಾರಕಿಹೊಳಿ ಕಾಂಗ್ರೆಸ್‌ ಪರ ಪ್ರಚಾರ ನಡೆಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ