4 ನೇ ಹಂತ: ಬರೋಬ್ಬರಿ 3,274 ಕೋಟಿ ರೂ.ಮೌಲ್ಯದ ಹಣ, ಹೆಂಡ ಜಪ್ತಿ !

ಹಣ, ಹೆಂಡದ ಹೊಳೆ, 785.26 ಕೋಟಿ ರೂ ನಗದು ಜಪ್ತಿ

Team Udayavani, Apr 30, 2019, 11:43 AM IST

ಹೊಸದಿಲ್ಲಿ: ಚುನಾವಣಾ ಆಯೋಗಸೋಮವಾರ ನಾಲ್ಕನೇ ಹಂತದ ಮತದಾನದ ವೇಳೆ ಬರೋಬ್ಬರಿ 3,274 ಕೋಟಿ ರೂಪಾಯಿ ಮೌಲ್ಯದ ಲೆಕ್ಕವಿಲ್ಲದ ಹಣ, ಆಕ್ರಮ ಮದ್ಯ, ಮಾದಕ ವಸ್ತುಗಳು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

72 ಲೋಕಸಭಾ ಕ್ಷೇತ್ರಗಳು ಮತ್ತು 42 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 97 ಮಂದಿ ವೆಚ್ಚ ವೀಕ್ಷಕ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.

ಒಂಭತ್ತು ರಾಜ್ಯಗಳ ಒಟ್ಟು 72 ಕ್ಷೇತ್ರಗಳಲ್ಲಿ ಸೋಮವಾರ ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನ ನಡೆದಿದೆ. ಮಹಾರಾಷ್ಟ್ರದ 17, ರಾಜಸ್ಥಾನ ಮತ್ತು ಉತ್ತರಪ್ರದೇಶದ ತಲಾ 13, ಪಶ್ಚಿಮ ಬಂಗಾಳದ 8, ಮಧ್ಯಪ್ರದೇಶಒಡಿಶಾದ ತಲಾ 6, ಬಿಹಾರದಲ್ಲಿ 5, ಜಾರ್ಖಂಡ್‌ನ‌ಲ್ಲಿ 3, ಜಮ್ಮು-ಕಾಶ್ಮೀರದ ಅನಂತ್‌ನಾಗ್‌ ಕ್ಷೇತ್ರದಲ್ಲಿ ಸೋಮವಾರ
ಮತದಾನ ನಡೆದಿದೆ.

ಮೊದಲ ನಾಲ್ಕು ಹಂತಗಳಲ್ಲಿ ಒಟ್ಟು 374 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೇ 19 ರಂದು ಕೊನೆಯ 7 ನೇ ಹಂತದ ಮತದಾನ ನಡೆಯಲಿದ್ದು ಮೇ 23 ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ಚುನಾವಣಾ ಆಯೋಗ ಅಭ್ಯರ್ಥಿಗಳ ವೆಚ್ಚದ ಮೇಲೆ ಹದ್ದಿನಕಣ್ಣಿಟ್ಟಿದ್ದು, ಫ್ಲೈಯಿಂಗ್‌ ಸ್ಕ್ಯಾಡ್‌, ಸ್ಟಾಟಿಕ್‌ ಸರ್‌ವೈಲೆನ್ಸ್‌ ಟೀಮ್ಸ್‌, ವಿಡಿಯೋ ಸರ್‌ವೈಲೆನ್ಸ್‌ ಟೀಮ್ಸ್‌ಗಳ ಮೂಲಕ ಭಾರೀ ಜಾಗೃತೆ ವಹಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದೇಶಾದ್ಯಂತ ಒಂದೊಂದು ಲೋಕಸಭಾ ಕ್ಷೇತ್ರವೂ ಒಂದೊಂದು ರೀತಿಯಲ್ಲಿ ವಿಶೇಷತೆ ಪಡೆದುಕೊಂಡಿದೆ. ದಿಗ್ಗಜ ನಾಯಕರಿಂದ ಹಿಡಿದು, ಇದೇ ಮೊದಲ ಬಾರಿಗೆ ಅಖಾಡಕ್ಕೆ ಇಳಿದಿರುವವರೂ...

  • ಮಥುರಾ (ಉತ್ತರ ಪ್ರದೇಶ) ಹೇಮಮಾಲಿನಿ (ಬಿಜೆಪಿ) Vs ಕುನ್ವರ್‌ ನರೇಂದ್ರ ಸಿಂಗ್‌ (ಆರ್‌ಎಲ್‌ಡಿ) * ಜಾಟ್‌ ಸಮುದಾಯದ ಪ್ರಾಬಲ್ಯದ ಕ್ಷೇತ್ರದಲ್ಲಿ ಕಳೆದ ಬಾರಿ ಕನಸಿನ...

  • ಲೋಕಸಭಾ ಚುನಾವಣೆಯ ಫ‌ಲಿತಾಂಶದ ದಿನ ಹತ್ತಿರವಾಗುತ್ತಿದ್ದು, ಈ ಬಾರಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಷ್ಟೇ ಅಲ್ಲದೆ,...

  • 2019ರ ಲೋಕಸಭೆ ಚುನಾವಣೆ ಕ್ಷಣಕ್ಷಣದಲ್ಲೂ, ಕಣಕಣದಲ್ಲೂ ರೋಮಾಂಚಕಾರಿ ತಿರುವು ಪಡೆಯುತ್ತಾ ಇಡೀ ದೇಶವನ್ನು ಫ‌ಲಿತಾಂಶಕ್ಕಾಗಿ ತುದಿಗಾಲಲ್ಲಿ ನಿಲ್ಲಿಸಿದೆ. ಜಗತ್ತಿನ...

  • ಕಾಂಗ್ರೆಸ್‌ ಹಾಗೂ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಲು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಪ್ರಯತ್ನಿಸುತ್ತಿದ್ದು, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್‌ರನ್ನು...

ಹೊಸ ಸೇರ್ಪಡೆ