ಗೋಕಾಕ್‌ನಲ್ಲಿ ಉಪಚುನಾವಣೆ ಸನ್ನಿಹಿತ ? ಸಚಿವ ಜಾರಕಿಹೊಳಿ ಹೇಳಿದ್ದೇನು?

Team Udayavani, Apr 21, 2019, 4:55 PM IST

ಬೆಳಗಾವಿ : ಗೋಕಾಕ್‌ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ಯಾರನ್ನು ಬೆಂಬಲಿಸುತ್ತಾರೆ ಎನ್ನುವುದನ್ನು ನೋಡೋಣ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹೋದರ, ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಸವಾಲೆಸೆದಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್‌ ಜಾರಕಿಹೊಳಿ , ನಾವು ಇದುವರೆಗೆ ಗೋಕಾಕ್‌ನಲ್ಲಿ ರಾಜಕೀಯ ಚಟುವಟಿಗೆ ಮಾಡಿರಲಿಲ್ಲ. ಎಲ್ಲವನ್ನೂ ರಮೇಶ್‌ ಜಾರಕಿಹೊಳಿ ಮಾಡುತ್ತಿದ್ದರು. ಈಗ ಅವರು ನಮ್ಮೊಂದಿಗೆ ಇಲ್ಲದಿರುವ ಕಾರಣ ಹಳ್ಳಿ ಹಳ್ಳಿಯಲ್ಲೂ ಪ್ರಚಾರ ನಡೆಸುತ್ತಿದ್ದೇವೆ ಎಂದರು.

ರಮೇಶ್‌ ಜಾರಕಿಹೊಳಿ ಬೆಂಬಲಿಗರಿಗೆ ಬಿಜೆಪಿ ಬೆಂಬಲಿಸುವಂತೆ ಹೇಳಿರುವುದು ನಿಜ. ಇದು ನಮಗೆ ಮೊದಲೇ ಗೊತ್ತಿತ್ತು. ನಾವು ಲಖನ್‌ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪ್ರಚಾರ ನಡೆಸುತ್ತಿದ್ದೇವೆ. ಮುಂದಿನ ಉಪಚುನಾವಣೆಯಲ್ಲಿ ಲಖನ್‌ ಜಾರಕಿಹೊಳಿ ಅಭ್ಯರ್ಥಿಯಾಗಲಿದ್ದಾರೆ ಎಂದರು.

ರಮೇಶ್‌ ಜಾರಕಿಹೊಳಿ ವಿರುದ್ಧ ಪಕ್ಷ ಕ್ರಮ ಕೈಗೊಂಡರೂ, ಬಿಟ್ಟರೂ ಅಷ್ಟೇ ಎಂದರು.


ಈ ವಿಭಾಗದಿಂದ ಇನ್ನಷ್ಟು

  • ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ವಿವಿಧ ಸುದ್ದಿವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿವೆ. 13 ಸಮೀಕ್ಷೆಗಳ ಪೈಕಿ ಆರರಲ್ಲಿ...

  • ಲೋಕಸಭೆ ಚುನಾವಣೆಯ ಜೊತೆಗೆ ಈ ಬಾರಿ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯೂ ನಡೆದಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂನಲ್ಲಿ ವಿಧಾನಸಭೆ...

  • ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಹಿಂಸಾಚಾರ, ಘರ್ಷಣೆ, ವಾಕ್ಸಮರಗಳನ್ನು ಕಂಡ ಪಶ್ಚಿಮ ಬಂಗಾಳದಲ್ಲಿ ದೀದಿಯ ಭದ್ರಕೋಟೆಯನ್ನು ಒಡೆಯುವಲ್ಲಿ ಪ್ರಧಾನಿ...

  • ದಕ್ಷಿಣ ಭಾರತದಲ್ಲಿ ಕರ್ನಾಟಕ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ನಿರೀಕ್ಷೆಯಂತೆಯೇ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಮತದಾನೋತ್ತರ ಸಮೀಕ್ಷೆಗಳು ಊಹಿಸಿವೆ....

  • ಮತಗಟ್ಟೆಗೆ ಮುಸುಕು (ಪರ್ದಾ) ಹಾಕಿಕೊಂಡು ಬರುವ ಮಹಿಳೆಯರು, ಮುಸುಕು ತೆಗೆದು ಮತದಾನ ಮಾಡಬೇಕು ಎಂದು ಕೇರಳದ ಸಿಪಿಎಂ ನಾಯಕ ಎಂ.ವಿ. ಜಯರಾಜನ್‌ ನೀಡಿರುವ ಹೇಳಿಕೆಯೊಂದು...

ಹೊಸ ಸೇರ್ಪಡೆ