ತೇಜಸ್ವಿನಿ ಅನಂತ್‌ ಕುಮಾರ್‌ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನ

Team Udayavani, Apr 2, 2019, 3:02 PM IST

ಬೆಂಗಳೂರು : ಲೋಕಸಭಾ ಟಿಕೇಟ್‌ ಕೊನೇ ಕ್ಷಣದಲ್ಲಿ ಕೈ ತಪ್ಪಿ ಹೋದ ಬಳಿಕ ತೀವ್ರವಾಗಿ ನೊಂದಿರುವ ತೇಜಸ್ವಿನಿ ಅನಂತ್‌ಕುಮಾರ್‌ ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಸಮಧಾನ ಪಡಿಸುವ ಯತ್ನ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಟ್ವೀಟ್‌ ಮಾಡಿ ತೇಜಸ್ವಿನಿ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕಮಾಡಲು ಸಂತೋಷವಾಗುತ್ತಿದೆ ಎಂದು ಬರೆದಿದ್ದಾರೆ.

ತೇಜಸ್ವಿ ಸೂರ್ಯ ಅವರನ್ನು ಕೊನೇ ಕ್ಷಣದಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹಿನ್ನಲೆಯಲ್ಲಿ ತೇಜಸ್ವಿನಿ ಟಿಕೆಟ್‌ ವಂಚಿತರಾಗಿ ತೀವ್ರವಾಗಿ ನೊಂದಿದ್ದರು.

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ