ಅಶೋಕ್‌ ಜತೆ ತೇಜಸ್ವಿ ಸೂರ್ಯ ಪ್ರಚಾರ

Team Udayavani, Apr 16, 2019, 3:00 AM IST

ಬೆಂಗಳೂರು: ಮತದಾನಕ್ಕೆ ಮೂರು ದಿನ ಬಾಕಿ ಇರುವಂತೆ ಕಣದಲ್ಲಿರುವ ಸ್ಪರ್ಧಾಳುಗಳು ನಾನಾ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಎಂದಿನಂತೆ ಸೋಮವಾರ ಬೆಳ್ಳಂ ಬೆಳಗ್ಗೆಯೇ ಪಾರ್ಕ್‌ ರನ್‌ ಆರಂಭಿಸಿದ್ದರು.

ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ರವರ ಜೊತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯರವರು ಉದ್ಯಾನವನಗಳಿಗೆ ಬೇಟಿ ನೀಡಿದ್ದರು.

ಪದ್ಮನಾಭನಗರ ಕ್ಷೇತ್ರದ ಪ್ರಮುಖ ಉದ್ಯಾನವನಗಳಾದ ಬನಶಂಕರಿ ಬೃಂದಾವನ (ಬಿ.ಡಿ.ಎ ಕಾಂಪ್ಲೆಕ್ಸ್‌ ಹತ್ತಿರ) ಹಾಗೂ ಪದ್ಮನಾಭನಗರದ ಲಕ್ಷ್ಮೀಕಾಂತ ಉದ್ಯಾನವನಗಳಲ್ಲಿ ಬೆಳಗ್ಗೆ 6:30ಯಿಂದ ಜನಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿದ್ದರು.

ಉದ್ಯಾನವನದಲ್ಲಿ ವಾಕಿಂಕ್‌, ಜಾಗಿಂಗ್‌,ಯೋಗ ತರಗತಿಗೆ ಆಗಮಿಸಿದ್ದವರ ಬಳಿ ಮತ ಯಾಚಿಸಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು. ಆರ್‌. ಅಶೋಕ್‌ ಅವರು, ತೇಜಸ್ವಿ ಸೂರ್ಯ ನಿಮ್ಮ ಮನೆ ಮಗನಂತೆ ನಿಮ್ಮನ್ನು ಪ್ರತಿನಿಧಿಸುತ್ತಾನೆ ಅದಕ್ಕಾಗಿ ತಾವು ಬಿಜೆಪಿಗೆ ಬೆಂಬಲ ಸೂಚಿಸಬೇಕಾಗಿ ಮನವಿ ಮಾಡಿಕೊಂಡರು.

ವಾಯುವಿಹಾರಿಗಳು ಒಳ್ಳೆಯದಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಈ ವೇಳೆ ಆರ್‌. ಅಶೋಕ್‌ ಜೊತೆ ತೇಜಸ್ವಿ ಸೂರ್ಯ ಶೆಟಲ್ ಕಾಕ್‌ ಆಡಿದರು, ನಂತರ ಕಾರ್ಯಕರ್ತರ ಜತೆ ಚಹಾ ಸೇವಿಸಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹೊಸದಿಲ್ಲಿ : ಭಾರತದ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ರಂಜನ್‌ ಗೊಗೊಯ್‌ ಅವರಿಂದು ಶನಿವಾರ ಸುಪ್ರೀಂ ಕೋರ್ಟಿನ ವಿಶೇಷ ಪೀಠದಲ್ಲಿದ್ದುಕೊಂಡು ತನ್ನ ವಿರುದ್ಧ...

  • ಇಂದು ನಿತ್ಯ ಹರಿದ್ವರ್ಣ ಕಾಡುಗಳಲ್ಲಷ್ಟೇ ಬೃಹತ್‌ ಗಾತ್ರದ ದೇವದಾರು, ತೇಗ, ಬೀಟೆ ಮೊದಲಾದ ಮರಗಳನ್ನು ಕಾಣಬಹುದು. ಆದರೆ ಸವಣೂರಿನ ಕಲ್ಮಠದಲ್ಲಿ ಸಾವಿರಾರು ವರ್ಷಗಳ...

  • Gadwall (Anas strepera) M -Duck + ಗದ್ವಾಲ್‌ ಬಾತನ್ನು ಚರ್ಲೆ ಅಥವಾ ಸರಳೆ ಬಾತು ಎಂದು ಕರೆಯಲಾಗುತ್ತದೆ. ಈ ಹಕ್ಕಿ, ನೀರಿನಲ್ಲಿ ಮುಳುಗಿ ಅಲ್ಲಿರುವ ಕ್ರಿಮಿ ಕೀಟಗಳನ್ನು ಬೇಟೆಯಾಡುತ್ತದೆ....

  • ವೃತ್ತಿಯಲ್ಲಿ ಶಿಕ್ಷಕರಾದ ಕಲ್ಯಾಣ್‌ ಕುಮಾರ್‌ ಅವರಿಗೆ ಪತ್ರಿಕೆ ಸಂಗ್ರಹಿಸುವ ಹವ್ಯಾಸ. ಇದು ಹುಟ್ಟಿದ್ದು ಪರ ಊರಿಗೆ ಪ್ರಯಾಣಿಸುವಾಗ . ಬೇಜಾರು ಕಳೆಯಲಿಕ್ಕೆ...

  • ಉದ್ದಾನ ವೀರಭದ್ರಸ್ವಾಮಿಗಳು ಈ ಆಂಜನೇಯನಿಗೆ ಲಿಂಗಧಾರಣೆ ಮಾಡಿದ್ದು, ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಇರುವುದು ಒಂದು ವಿಶೇಷ. ಸೊಂಟದಲ್ಲಿ ಕತ್ತಿ ಇರುವುದು...

  • ಅರಳಿಮರದ ಬುಡದಲ್ಲಿ ಕುಳಿತು ಸರ್ವಾಂತರ್ಯಾಮಿಯಾದ ಭಗವಂತನ ಸ್ವರೂಪವನ್ನು ಯೋಗಿಗಳಿಂದ ಕೇಳಿ ತಿಳಿದ ರೀತಿಯಲ್ಲೇ ಧ್ಯಾನ ಮಾಡತೊಡಗಿದ್ದರು. ಏಕಾಗ್ರಚಿತ್ತದಿಂದ...