Udayavni Special

ಮೋದಿಯಿಂದ ದೇಶದಲ್ಲಿ ಭಯದ ವಾತಾವರಣ

Team Udayavani, Apr 9, 2019, 3:00 AM IST

modi-bhaya

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ. ಸರ್ಕಾರದ ಸ್ವಾಯತ್ತ ಸಂಸ್ಥೆಗಳೆಲ್ಲವೂ ಮೋದಿ ಪರ ಕೆಲಸ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಅಭ್ಯರ್ಥಿ ಪರ ಸೋಮವಾರ ಪ್ರಚಾರ ನಡೆಸಿದ ಅವರು, ಈ ದೇಶದಲ್ಲಿ ಯಾರಾದರೂ ನೀಚ ರಾಜಕಾರಣ ಮಾಡುತ್ತಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಭದ್ರತೆ ಹಾಗೂ ದೇಶದ ನಾಯಕತ್ವ, ಈ ಎರಡೇ ವಿಚಾರಗಳು ಬಿಜೆಪಿಗೆ ಇರುವ ವಿಷಯಗಳು. ಸೈನಿಕರ ಸಾವನ್ನೂ ಪ್ರಧಾನಿಯವರು ಬಂಡವಾಳ ಮಾಡಿಕೊಂಡಿದ್ದಾರೆ. ಪುಲ್ವಾಮಾ ಪ್ರಕರಣವನ್ನು ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ.

ಚುನಾವಣೆ ಹತ್ತಿರ ಬಂದಾಗ ದೇಶದ ಅಭದ್ರತೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ನನಗೆ ಎರಡು ವರ್ಷದ ಹಿಂದೆಯೇ ಹೇಳಿದ್ದರು. ಅದೇ ರೀತಿ ಮೋದಿ ನಡೆದುಕೊಂಡಿದ್ದಾರೆ ಎಂದು ಪುನರುತ್ಛರಿಸಿದರು.

ಮೋದಿ ಸರ್ಕಾರ ಮತ್ತೆ ದೇಶದಲ್ಲಿ ಬರುವುದಿಲ್ಲ. ಒಂದು ವೇಳೆ ಅವರು ಅಧಿಕಾರಕ್ಕೆ ಬಂದರೆ ನಾಲ್ಕೂವರೆ ಟ್ರಿಲಿಯನ್‌ ಕೋಟಿ ಸಾಲ ಮಾಡಿ ಸರ್ಕಾರ ನಡೆಸಲು ಹೊರಟಿದ್ದಾರೆ. ಮೋದಿಯವರದು ದಿವಾಳಿ ಸರ್ಕಾರ ಎಂದು ದೂರಿದರು.

ಮೋದಿ ಇಲ್ಲೇನು ಕಿಸಿದಿರೋದು?: ಮೋದಿ ಪರ ಘೋಷಣೆ ಹಾಕುತ್ತಾರೆ. ಆದರೆ, ನರೇಂದ್ರ ಮೋದಿ ಇಲ್ಲಿ ಕಿಸಿದಿರೋದು ಏನು ಎಂದು ವಾಗ್ಧಾಳಿ ನಡೆಸಿದರು. ಕರಾವಳಿ ಭಾಗದಲ್ಲಿ 500 ಜನ ನಮ್ಮನ್ನು ನೋಡಿ ಅಣ್ಣಾ, ಅಣ್ಣಾ ಎಂದು ಕರೆಯುತ್ತಾರೆ. ಆದರೆ, ನಾಲ್ಕು ಜನ ಯುವಕರ ಗುಂಪು ಮೋದಿ, ಮೋದಿ ಎಂದು ಕರೆಯುತ್ತದೆ. ಈ ಯುವಕರಿಗೆ ಬುದ್ದಿ ಇದೆಯಾ?. ಇವರಿಗೆ ಮೋದಿ ಕೆಲಸ ಕೊಡಿಸಿದ್ದಾರಾ?. ಸುಮ್ಮನೆ ಮೋದಿ, ಮೋದಿ ಎಂದು ಕಿರುಚುತ್ತಿದ್ದಾರೆ ಎಂದು ಹೇಳಿದರು.

“ಲೋಕಸಭೆ ಚುನಾವಣೆ ನಂತರ ನಾನು ನೆಗೆದು ಬೀಳುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಆದರೆ, ದೈವ ನಂಬಿ ಬಂದ ಕುಟುಂಬ ನಮ್ಮದು. ಅಷ್ಟು ಸುಲಭವಾಗಿ ನಾನು ಸಾಯುವುದಿಲ್ಲ. ನನಗೆ ಆಯಸ್ಸು ಗಟ್ಟಿಯಾಗಿದೆ ಎಂದು ನಂಬಿದ್ದೇನೆ’ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸದಾನಂದಗೌಡರು ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅವರನ್ನು ಕ್ಷೇತ್ರದ ಜನರೂ ನೋಡಿಲ್ಲ. ತಮ್ಮ ಕೆಲಸ ನೋಡಿ ಮತ ಕೊಡಿ ಎನ್ನುವ ಬದಲು ಮೋದಿ ಅವರನ್ನು ನೋಡಿ ಮತ ಕೊಡಿ ಎಂದು ಕೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ದೇವೇಗೌಡರನ್ನು ಸಂಸತ್‌ಗೆ ಕೈ ಹಿಡಿದು ಕರೆದುಕೊಂಡು ಹೋಗಬೇಕು ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ದೇವೇಗೌಡರಿಗೆ ಇರುವ ಬ್ರೈನ್‌ 24 ವರ್ಷದ ಹುಡುಗನಿಗೂ ಇಲ್ಲ. ಅವರಿಗೆ ವಯಸ್ಸಾಗಿರಬಹುದು, ಆದರೆ, ಅವರ ಜ್ಞಾಪಕ ಶಕ್ತಿ, ಚಿಂತನೆ ಯಾವುದಕ್ಕೂ ಕಡಿಮೆ ಇಲ್ಲ. ಅವರು ಸಮಯ, ದಿನಾಂಕ, ದಿನ ಸೇರಿದಂತೆ ಪ್ರತಿದಿನದ ವಿಷಯಗಳನ್ನು ಕರೆಕ್ಟಾಗಿ ಹೇಳ್ತಾರೆ. ದೇವೇಗೌಡರ ಮೇಲೆ ಇಲ್ಲಿವರೆಗೆ ಒಂದು ಕಪ್ಪು ಚುಕ್ಕೆಯೂ ಇಲ್ಲ.
-ಎಚ್‌.ಡಿ.ಕುಮಾರಸ್ವಾಮಿ, ಸಿಎಂ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶ ಕಟ್ಟಿದವರು ಮಾಡದ ತಪ್ಪಿಗೆ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ: HDK

ದೇಶ ಕಟ್ಟಿದವರು ಮಾಡದ ತಪ್ಪಿಗೆ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ: HDK

ಕೋವಿಡ್-19 ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿದ ರಾಜ್ಯಪಾಲ ವಜುಭಾಯಿ ವಾಲಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿದ ರಾಜ್ಯಪಾಲ ವಜುಭಾಯಿ ವಾಲಾ

ಸಿದ್ದರಾಮಯ್ಯ ರಿಯಾಲಿಟಿ ಚೆಕ್: ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ

ಸಿದ್ದರಾಮಯ್ಯ ರಿಯಾಲಿಟಿ ಚೆಕ್: ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ

ಏ.26ರಂದು ನಡೆಯಬೇಕಿದ್ದ ಸಪ್ತಪದಿ ಯೋಜನೆ ಮುಂದೂಡಿಕೆ: ಸಚಿವ ಕೋಟ ಮಾಹಿತಿ

ಏ.26ರಂದು ನಡೆಯಬೇಕಿದ್ದ ಸಪ್ತಪದಿ ಯೋಜನೆ ಮುಂದೂಡಿಕೆ: ಸಚಿವ ಕೋಟ ಮಾಹಿತಿ

ಮತ್ತೆ 12 ಹೊಸ ಸೋಂಕಿತರು: ರಾಜ್ಯದಲ್ಲಿ 175ಕ್ಕೇರಿದ ಕೋವಿಡ್ 19 ಸೋಂಕಿತರ ಸಂಖ್ಯೆ

ಮತ್ತೆ 12 ಹೊಸ ಸೋಂಕಿತರು: ರಾಜ್ಯದಲ್ಲಿ 175ಕ್ಕೇರಿದ ಕೋವಿಡ್ 19 ಸೋಂಕಿತರ ಸಂಖ್ಯೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?

ಕೋವಿಡ್ ವೈರಸ್ ಸೋಂಕು ಪತ್ತೆಯಲ್ಲಿ PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?