ಇದು ಫೇರ್‌ ಆ್ಯಂಡ್‌ ಫ್ರೀ ಚುನಾವಣೆ ಅಲ್ಲ: ದಿನೇಶ್‌

Team Udayavani, Apr 12, 2019, 6:25 AM IST

ಬೆಳಗಾವಿ: ಸೋಲುವ ಭೀತಿಯಿಂದ ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರ ಚುನಾವಣೆ ವೇಳೆ ದಾಳಿ ನಡೆಸುತ್ತಿದೆ. ಇದು ಫೇರ್‌ ಆ್ಯಂಡ್‌ ಫ್ರೀ ಚುನಾವಣೆ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಬಿಜೆಪಿಯವರು ಸತ್ಯ ಹರಿಶ್ಚಂದ್ರರೇ, ಐಟಿ ಇಲಾಖೆ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ನವರ ಮೇಲೆ ಏಕೆ ದಾಳಿ ನಡೆಸುತ್ತಿದ್ದಾರೆ. ದೇಶದಲ್ಲಿ ಮೋದಿ,ಶಾ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ. ಮುಂದೆ ಯಾವ ರೀತಿ ಹೋರಾಟ ಮಾಡಬೇಕು ಎಂದು ಸಭೆ ನಡೆಸಲಾಗುವುದು ಎಂದರು. ಕೆಲ ಮಾಧ್ಯಮಗಳು ಮೋದಿ ಹಾಗೂ ಬಿಜೆಪಿಯನ್ನು ಹೊಗಳುವುದರಲ್ಲಿ ನಿರತವಾಗಿವೆ.

ಬೆಂಗಳೂರಿನಲ್ಲಿ ತೇಜಸ್ವಿನಿ ಅನಂತಕುಮಾರ ಟಿಕೆಟ್‌ ಕೈ ತಪ್ಪಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಡಿಯೂರಪ್ಪ, ಉದಾಸಿ ಮಕ್ಕಳ ಡಿಎನ್‌ಎ ಪರೀಕ್ಷೆ ಮಾಡದೇ ಏಕೆ ಟಿಕೆಟ್‌ ನೀಡಲಾಗಿದೆ ಎಂದು ಕುಟುಕಿದರು. ಮಾಜಿ ಸಚಿವ ರಮೇಶಜಾರಕಿಹೊಳಿ ವಿಷಯಕ್ಕೆ ಪ್ರತಿಕ್ರಿಯಿಸಿ, ಅವರು ನಮ್ಮ ಸಂಪರ್ಕದಲ್ಲಿಲ್ಲ. ಯಾರ ಪರ ಕೆಲಸ ಮಾಡುತ್ತಾರೆಂಬ ಬಗ್ಗೆ ಚುನಾವಣೆ ಬಳಿಕ ತಿಳಿಯಲಿದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ