ಜನಪರ ಹೋರಾಟ ಮಾಡಿರುವುದಕ್ಕೆನನ್ನ ಮೇಲೆ ಕೇಸು ದಾಖಲು: ನಳಿನ್‌

Team Udayavani, Apr 9, 2019, 6:00 AM IST

Nalin-Kumar-Urwa-Speech-1

ಮಂಗಳೂರು: “ಜನಪರ ಹೋರಾಟ ನಡೆಸಿರುವ ಕಾರಣಕ್ಕೆ ನನ್ನ ಮೇಲೆ ಕೇಸುಗಳನ್ನು ಹಾಕಲಾಗಿದೆಯೇ ವಿನಾ ಪಬ್‌, ಬಾರ್‌ನಲ್ಲಿ ಗಲಾಟೆ ಮಾಡಿರುವುದಕ್ಕೆ ಅಥವಾ ಗುಂಡು ಹಾರಿಸಿರುವುದಕ್ಕೆ ಅಲ್ಲ. ಹಾಗಾಗಿ ಯಾರು ಹೇಗೆ ಎಂಬುದನ್ನು ಮತದಾರರಿಗೆ ಮನವರಿಕೆ ಮಾಡುವ ಅಗತ್ಯವಿಲ್ಲ’ ಎಂದು ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಮಂಗಳೂರಿನ ಉರ್ವಸ್ಟೋರ್‌ನಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ 5 ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ಯಾವುದೇ ಕಳಂಕ ಇಲ್ಲದೆ ಆಡಳಿತ ನಡೆಸಿದೆ. ಅದೇ ರೀತಿಯಲ್ಲಿ ನಾನು ಸಂಸದನಾಗಿ ಕಳೆದ 10 ವರ್ಷಗಳಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಈ ಕ್ಷೇತ್ರದ ಮತದಾರರ ಸೇವೆ ಮಾಡಲು ಪ್ರಯತ್ನಿಸಿದ್ದೇನೆ. ಆದರೆ ಅನ್ಯ ಪಕ್ಷದ ರಾಜಕೀಯ ವಿರೋಧಿಗಳು ನನ್ನ ಮೇಲೆ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರಿಗೆ ಬೇರೆ ಯಾವುದೇ ವಿಷಯ ಸಿಗುತ್ತಿಲ್ಲ. ಹಾಗಾಗಿ ಸುಳ್ಳು ಹೇಳುವುದೇ ಅವರಿಗೆ ಉಳಿದಿರುವ ದಾರಿ ಎಂದರು.

ಜನಪರ ಹೋರಾಟಕ್ಕೆ ಸಿಕ್ಕ ಕೊಡುಗೆ
“ನಾನು ಇಂದಿನವರೆಗೆ ಯಾವುದೇ ಗೂಂಡಾ ರಾಜಕೀಯ ಮಾಡಿಲ್ಲ. ಈ ಕೇಸುಗಳು ಜಾಸ್ತಿಯಾಗಿರುವುದು ಕೂಡ ಜನಪರ ಹೋರಾಟಕ್ಕೆ ಸಿಕ್ಕ ಕೊಡುಗೆಗಳು. ಜನರಪರ ನಿಂತಾಗ ಇದೆಲ್ಲ ಸಹಜ’ ಎಂದು ಅಭಿಪ್ರಾಯಪಟ್ಟರು.

ನೇತ್ರಾವತಿ-ಎತ್ತಿನಹೊಳೆ ಯೋಜನೆ ತಿರುವು ವಿರುದ್ಧದ ಹೋರಾಟ, ಕಂಬಳ ಉಳಿಸಿ ಹೋರಾಟ, ಜಿಲ್ಲೆಯಲ್ಲಿ ನಡೆದ ಅಮಾಯಕರ ಕೊಲೆಗಳ ವಿರುದ್ಧ ಕುಶಾಲನಗರದಿಂದ ಮಂಗಳೂರಿಗೆ ಪಾದಯಾತ್ರೆ ಮಾಡಿದಾಗ, ಶಬರಿಮಲೆ ಹೋರಾಟದಲ್ಲಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ಅನ್ಯಾಯವಾಗಿ ಬಂಧಿಸಿದಾಗ ಪ್ರಶ್ನಿಸಿದಕ್ಕೆ ನನ್ನ ಮೇಲೆ ಕೇಸುಬಿದ್ದಿವೆ. ಈ ಬಗ್ಗೆ ಎಂದೂ ಪಶ್ಚಾತ್ತಾಪ ಪಟ್ಟಿಲ್ಲ. ಯಾಕೆಂದರೆ ಅವೆಲ್ಲವೂ ಜನರಿಗಾಗಿ ಮಾಡಿದ ಹೋರಾಟಗಳು ಎಂದರು.

ನಮ್ಮದು ಏನಿದ್ದರೂ ಅಭಿವೃದ್ಧಿ ಕುರಿತ ಯೋಚನೆ -ಯೋಜನೆಗಳು. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಕ್ಷೇತ್ರಗಳಲ್ಲೂ ನಾವು ತೊಡಗಿಕೊಂಡಿಲ್ಲ. ಕಳೆದ 5 ವರ್ಷ ಗಳಲ್ಲಿ 16,505 ಕೋ.ರೂ.ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ಕ್ಷೇತ್ರದಲ್ಲಿ ವಿನಿಯೋಗಿಸಲಾಗಿದೆ. ಮುಂದಿನ ಬಾರಿಯೂ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಹೇಳಿದರು.

ಮೋದಿ ನೇತೃತ್ವದಲ್ಲಿ ನಮ್ಮ ದೇಶವು ವಿದೇಶಗಳ ಮುಂದೆ ಅತ್ಯುನ್ನತ ಸ್ಥಾನ-ಮಾನ ಪಡೆದುಕೊಂಡಿದೆ ಎಂದರು.

ಶಾಸಕ ಡಿ ವೇದವ್ಯಾಸ ಕಾಮತ್‌, ಮಾಜಿ ಶಾಸಕರಾದ ಎನ್‌.ಯೋಗೀಶ್‌ ಭಟ್‌, ರುಕ್ಮಯ ಪೂಜಾರಿ, ನಾಗರಾಜ್‌ ಶೆಟ್ಟಿ, ನಿತಿನ್‌ ಕುಮಾರ್‌, ಹರಿಕೃಷ್ಣ ಬಂಟ್ವಾಳ, ರವಿಶಂಕರ್‌ ಮಿಜಾರ್‌, ಮೋನಪ್ಪ ಭಂಡಾರಿ, ರಮೇಶ್‌ ಕಂಡೇಟು, ಸಂಜಯ್‌ ಪ್ರಭು, ಜಿತೇಂದ್ರ ಕೊಟ್ಟಾರಿ, ಪ್ರೇಮಾನಂದ ಶೆಟ್ಟಿ, ಭಾಸ್ಕರ್‌ ಚಂದ್ರ ಶೆಟ್ಟಿ, ರಾಜಗೋಪಾಲ್‌ ರೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.