ಚಾಮರಾಜ ನಗರ ಕ್ಷೇತ್ರದಿಂದ ವಿ.ಶ್ರೀನಿವಾಸ ಪ್ರಸಾದ್‌ ಸ್ಪರ್ಧೆ

Team Udayavani, Mar 16, 2019, 1:17 AM IST

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್‌ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಶ್ರೀನಿವಾಸ ಪ್ರಸಾದ್‌ ಅವರು ಬೆಂಬಲಿಗರೊಂದಿಗೆ ಚರ್ಚಿಸಿ ಶನಿವಾರ ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಡಾಲರ್ ಕಾಲೋನಿ ನಿವಾಸಕ್ಕೆ ಶುಕ್ರವಾರ ಶಾಸಕ ಹರ್ಷವರ್ಧನ್‌ ಅವರೊಂದಿಗೆ ತೆರಳಿದ ಶ್ರೀನಿವಾಸ ಪ್ರಸಾದ್‌ ಅವರು ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಯಡಿಯೂರಪ್ಪ ಅವರು ಮನವೊಲಿಸಿದರು ಎನ್ನಲಾಗಿದೆ.

ಭೇಟಿ ಬಳಿಕ ಮಾತನಾಡಿದ ವಿ.ಶ್ರೀನಿವಾಸ ಪ್ರಸಾದ್‌, ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು 17 ಮಂದಿ ಆಕಾಂಕ್ಷಿಗಳಿದ್ದರು. ಹಾಗಾಗಿ ನಾನು ಚುನಾವಣಾ ರಾಜಕಾರಣ ಬೇಡವೆಂಬ ನಿರ್ಧಾರಕ್ಕೆ ಬಂದಿದ್ದೆ. ಆದರೆ ಎಲ್ಲ ಆಕಾಂಕ್ಷಿಗಳು ನನ್ನನ್ನು ಸ್ಪರ್ಧಿಸುವಂತೆ ಒತ್ತಾಯಿಸಿದ್ದು, ಅವರು ಸ್ಪರ್ಧೆಯಿಂದ ಹಿಂದೆಸರಿದಿದ್ದಾರೆ. ಬೆಂಬಲಿಗರ ಒತ್ತಾಯಕ್ಕೆ ಮಣಿದು ಸ್ಪರ್ಧೆಗೆ ಒಪ್ಪಿದ್ದೇನೆ ಎಂದು ಹೇಳಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ