ಕರ್ತವ್ಯದ ಮಧ್ಯೆಯೂ ಪೊಲೀಸರಿಂದ ಮತದಾನ

Team Udayavani, Apr 24, 2019, 6:25 AM IST

ಕುಂದಾಪುರ: ಧಾರವಾಡಕ್ಕೆ ಚುನಾವಣಾ ಕರ್ತವ್ಯ ನಿರತರಾದ 40 ಪೊಲೀಸರಿಗೆ ಬೈಂದೂರು ಕ್ಷೇತ್ರದಲ್ಲಿ ಮತದಾನಕ್ಕೆ ಜಿಲ್ಲಾ ಎಸ್‌ಪಿ ಅವರು ವ್ಯವಸ್ಥೆ ಮಾಡಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಠಾಣೆಗಳ 40 ಪೊಲೀಸರಿಗೆ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿತ್ತು. ಆದರೆ ಹಾಗಾದಾಗ ಅವರಿಗೆ ಶಿವಮೊಗ್ಗ ಕ್ಷೇತ್ರದ ಮತದಾನದಲ್ಲಿ ಭಾಗವಹಿಸಲು ಅವಕಾಶ ದೊರೆಯುವುದಿಲ್ಲ ಎಂದು ಪೊಲೀಸರು ಜಿಲ್ಲಾ ಎಸ್‌ಪಿ ನಿಶಾ ಜೇಮ್ಸ್‌ ಅವರಿಗೆ ಮನವಿ ಮಾಡಿದರು.

ತತ್‌ಕ್ಷಣ ಎಸ್‌ಪಿ ಅವರು ಅಷ್ಟೂ ಮಂದಿಯನ್ನು ಉಡುಪಿಯಲ್ಲಿ ಮತಪೆಟ್ಟಿಗೆಗಳನ್ನು ಇಟ್ಟ ಸ್ಟ್ರಾಂಗ್‌ ರೂಮ್‌ಗೆ ಭದ್ರತೆಗೆ ನಿಯೋಜಿಸಿದರು. ಚುನಾವಣೆ ದಿನ ಇಡಿಸಿ (ಎಲೆಕ್ಷನ್‌ ಡ್ನೂಟಿ ಸರ್ಟಿಫಿಕೇಟ್‌) ಆಧಾರದಲ್ಲಿ ಮತ ಚಲಾವಣೆಗೆ ಅವಕಾಶ ಒದಗಿಸಿದ್ದಾರೆ. ಪೊಲೀಸರು ಹಿರಿಯ ಅಧಿಕಾರಿಗಳ ಈ ಕ್ರಮಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

  • ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ...

  • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

  • ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ...

  • 2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ....

  • ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ...