ಚುನಾವಣೆ ಬಂದಾಗ ಬಿಜೆಪಿಗೆ ರಾಮನ ನೆನಪು
Team Udayavani, Mar 14, 2019, 12:30 AM IST
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಯವರಿಗೆ ರಾಮ ನೆನಪಾಗುತ್ತಾನೆ. ಐದು ವರ್ಷ ಅಧಿಕಾರದಲ್ಲಿದ್ದಾಗ ಏಕೆರಾಮ ಮಂದಿರ ಕಟ್ಟಲಿಲ್ಲ ಎಂದು ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಪ್ರಶ್ನಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೆಪಿಸಿಸಿ ಮಹಿಳಾ ಘಟಕ ಏರ್ಪಡಿಸಿದ್ದ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯವರು ಅಧಿಕಾರದಲ್ಲಿದ್ದರೆ, ಧರ್ಮ, ರಾಜಕೀಯ, ಭಾಷೆಯನ್ನು ಕೆಡಿಸುತ್ತಾರೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೇ ಹಾಳು ಮಾಡುತ್ತಾರೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಸೋಲಿಸಲು ಎಲ್ಲರೂ ಒಂದಾಗಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಹಿಳೆಯರು ಅಂಗೈಗೆ ಪಿಂಕ್ ಬಣ್ಣ ಬಳಿದುಕೊಂಡು ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಕೊಡಬೇಕೆಂದು ಆಗ್ರಹಿಸಿದರು. ಲೋಕಸಭೆ ಚುನಾವಣೆ ದೃಷ್ಠಿಯಿಂದ ಮಹಿಳಾ ಘಟಕದಲ್ಲಿ ವಿವಿಧ ವಿಭಾಗಗಳನ್ನು ರಚಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ