ಭಾರತದ ಲೋಕಸಭೆ ಚುನಾವಣೆ ಜಗತ್ತಿನ ಅತೀ ದುಬಾರಿ ಚುನಾವಣೆ ಗೊತ್ತಾ?


Team Udayavani, Mar 12, 2019, 1:32 PM IST

aten.jpg

ನವದೆಹಲಿ: ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ. ಇದೀಗ ಸಾರ್ವತ್ರಿಕ ಚುನಾವಣೆ ಅಧಿಕೃತವಾಗಿ ಘೋಷಣೆಯಾಗಿದ್ದು, ಏಪ್ರಿಲ್ 11ರಿಂದ 7 ಹಂತಗಳಲ್ಲಿ ಮೇ 19ರವರೆಗೆ ಚುನಾವಣೆ ನಡೆಯಲಿದ್ದು, ಇದು ಜಗತ್ತಿನ ಅತ್ಯಂತ ದುಬಾರಿ ಚುನಾವಣೆಯಾಗಿದೆ ಎಂದು ವಿಶ್ಲೇಷಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಹಿಮಾಲಯ ಪ್ರಾಂತ್ಯದ ಉತ್ತರದ ಭಾಗ, ಅರಬ್ಬಿ ಸಮುದ್ರ ಭಾಗದ ದಕ್ಷಿಣ ಭಾಗ, ಥಾರ್ ಮರುಭೂಮಿಯ ಪಶ್ಚಿಮ ಭಾಗ ಹಾಗೂ ಉಷ್ಣವಲಯ ಹೊಂದಿರುವ ಪೂರ್ವ ಭಾಗ ಸೇರಿದಂತೆ ದೇಶಾದ್ಯಂತ ಆರು ವಾರಗಳ ದೀರ್ಘ ಕಾಲದವರೆಗೆ ಮತದಾನ ನಡೆಯಲಿದೆ.

ದೇಶದಲ್ಲಿ ನಡೆಯಲಿರುವ ಚುನಾವಣೆಗೆ ವ್ಯಯಿಸುವ ಹಣ ಬರೋಬ್ಬರಿ 7 ಸಾವಿರ ಬಿಲಿಯನ್ ಡಾಲರ್ ನಷ್ಟು (ಅಂದಾಜು 44ಸಾವಿರ ಕೋಟಿ ರೂಪಾಯಿ) ಎಂಬುದಾಗಿ ನವದೆಹಲಿ ಮೂಲದ ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ತಿಳಿಸಿದೆ.

ವರದಿ ಪ್ರಕಾರ ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ತಗುಲಿದ ವೆಚ್ಚ 6.5 ಬಿಲಿಯನ್ ಡಾಲರ್ ಎಂಬುದಾಗಿ ಓಪನ್ ಸೀಕ್ರೆಟ್ ಡಾಟ್ ಆರ್ಗನೈಜೇಶನ್ ನ ಮಾಹಿತಿಯನ್ನು ಉಲ್ಲೇಖಿಸಿ ಮಾಹಿತಿ ನೀಡಿದೆ. 2014ರಲ್ಲಿ ನಡೆದ ಸಂಸತ್ ಚುನಾವಣೆಯ ಮತದಾನಕ್ಕಿಂತ ಈ ಬಾರಿಯ ವೆಚ್ಚ ಶೇ.40ರಷ್ಟು ಅಧಿಕವಾಗಲಿದೆ ಎಂದು ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ವಿವರಿಸಿದೆ.

ಇದರಲ್ಲಿ ಹೆಚ್ಚಿನ ಹಣವನ್ನು ಸಾಮಾಜಿಕ ಜಾಲತಾಣ, ಸಂಚಾರ ಹಾಗೂ ಜಾಹೀರಾತಿಗೆ ಉಪಯೋಗಿಸುವ ಮೂಲಕ ಹಣದ ಖರ್ಚು ಹೆಚ್ಚಾಗಲು ಕಾರಣವಾಗಲಿದೆ. 2014ರಲ್ಲಿ ಸಾರ್ವತ್ರಿಕ ಚುನಾವಣೆಗೆ ಸಾಮಾಜಿಕ ಜಾಲತಾಣಕ್ಕೆ ವ್ಯಯಿಸಿದ ಹಣದ ಮೊತ್ತ 2.5 ಬಿಲಿಯನ್ ಡಾಲರ್ ಅದು ಈ ಬಾರಿ 50 ಬಿಲಿಯನ್ ಗೆ ಏರಲಿದೆ ಎಂದು ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ಅಧ್ಯಕ್ಷ ಎನ್.ಭಾಸ್ಕರ ರಾವ್ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ತಮ್ಮ ತಂಡ ಸಂದರ್ಶನಗಳ ಮೂಲಕ, ಸರ್ಕಾರಿ ಅಂಕಿ ಅಂಶ, ಹೆಲಿಕಾಪ್ಟರ್ ಗಳ ಬಳಕೆ,  ಬಸ್, ವಿಮಾನ ಬಳಕೆ ಮಾಡುವ ಅಭ್ಯರ್ಥಿಗಳ, ಪಕ್ಷದ ಕಾರ್ಯಕರ್ತರ ಮಾಹಿತಿಯನ್ನು ಕಲೆ ಹಾಕುವ ಮೂಲಕ ಖರ್ಚು-ವೆಚ್ಚದ ಮಾಹಿತಿ ನೀಡಲಾಗಿದೆ ಎಂದು ರಾವ್ ವಿವರಿಸಿದ್ದಾರೆ.

ದೇಶದ 545 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸುಮಾರು 8 ಸಾವಿರಕ್ಕಿಂತಲೂ ಹೆಚ್ಚಿನ ಅಭ್ಯರ್ಥಿಗಳು ಸ್ಪರ್ಧೆಗೆ ಇಳಿಯುತ್ತಾರೆ. ಈ ವೇಳೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅಭ್ಯರ್ಥಿಗಳು ಮತದಾರನ ಒಲೈಕೆಗೆ ವಿವಿಧ ರೀತಿಯಲ್ಲಿ ಮುಂದಾಗುತ್ತಾರೆ. ಹೀಗಾಗಿ ಅಭ್ಯರ್ಥಿಗಳು ಇತ್ತೀಚೆಗೆ ದುಬಾರಿ ಗಿಫ್ಟ್ ಗಳ ಮೂಲಕ ಮತದಾರನ ಮೇಲೆ ಪ್ರಭಾವ ಬೀರಲು ಹೆಚ್ಚು ಮುಂದಾಗುತ್ತಿದ್ದಾರೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.