ಇಂದು ಬಿಹಾರದಲ್ಲಿ ಕೊನೇ ಹಂತದ ಮತ

15 ಜಿಲ್ಲೆಗಳ 78 ವಿಧಾನಸಭಾ ಕ್ಷೇತ್ರಗಳಲ್ಲಿ ಹಕ್ಕು ಚಲಾವಣೆ

Team Udayavani, Nov 7, 2020, 6:01 AM IST

Today is the last phase of voting in Bihar

ಸಾಂದರ್ಭಿಕ ಚಿತ್ರ

ಪಾಟ್ನಾ/ರಾಂಚಿ: ಬಿಹಾರ ವಿಧಾನಸಭೆಯ ಮೂರನೇ ಮತ್ತು ಅಂತಿಮ ಹಂತದ ಹಕ್ಕು ಚಲಾವಣೆ ನ.7ರಂದು ನಡೆಯಲಿದೆ. 15 ಜಿಲ್ಲೆಗಳ 78 ಕ್ಷೇತ್ರಗಳಲ್ಲಿನ 2.34 ಕೋಟಿ ಮತದಾರರು 1,204 ಮಂದಿ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ನ.10ರಂದು ಮತ ಎಣಿಕೆ ನಡೆಯಲಿದೆ.

ಸ್ಪೀಕರ್‌ ವಿಜಯ ಕುಮಾರ್‌ ಚೌಧರಿ, ಜೆಡಿಯುನ ಸಚಿವ ರಾದ ಬಿಜೇಂದ್ರ ಪ್ರಸಾದ್‌ ಯಾದವ್‌, ನರೇಂದ್ರ ನಾರಾಯಣ ಯಾದವ್‌, ಮಹೇಶ್ವರ ಹಝಾರಿ, ಬಿಜೆಪಿ ಸಚಿವರಾಗಿರುವ ಪ್ರಮೋದ್‌ ಕುಮಾರ್‌, ಸುರೇಶ್‌ ಶರ್ಮಾ, ವಿನೋದ್‌ ನಾರಾ ಯಣ ಝಾ, ಕೃಷ್ಣ ಕುಮಾರ್‌ ರಿಷಿ ಕಣದಲ್ಲಿರುವ ಪ್ರಮುಖರು. ಕೋಸಿ- ಸೀಮಾಂಚಲ ಪ್ರದೇಶದಲ್ಲಿಯೇ ಹೆಚ್ಚಿನ ಕ್ಷೇತ್ರಗಳು ಇವೆ. ಇಲ್ಲಿ ಮಾಜಿ ಸಂಸದ ಪಪ್ಪು ಯಾದವ್‌ ಅವರ ಜನ ಅಧಿಕಾರ್‌ ಪಾರ್ಟಿಯ ಛಾಯೆ ಹೆಚ್ಚಾಗಿದೆ. ಎನ್‌ಡಿಎ ಮತ್ತು ಕಾಂಗ್ರೆಸ್‌-ಆರ್‌ಜೆಡಿ ಮೈತ್ರಿ ಕೂಟಕ್ಕೆ ಹೈದರಾಬಾದ್‌ ಸಂಸದ ಅಸಾದುದ್ದೀನ್‌ ಒವೈಸಿ ಅವರ ಎಂಐಎಂ ಪಕ್ಷದ ಸವಾಲೂ ಎದುರಿಸಬೇಕಾಗಿದೆ. ಈ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದ ಬಾಹುಳ್ಯ ಇರುವಲ್ಲಿ ಎಂಐಎಂ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2015ರಲ್ಲಿ ನಡೆದ ಚುನಾವಣೆ ಯಲ್ಲಿ ಎನ್‌ಡಿಎ ಆರು, ಕಾಂಗ್ರೆಸ್‌-ಆರ್‌ಜೆಡಿ ಮೈತ್ರಿಕೂಟ 4 ಸ್ಥಾನಗಳನ್ನು ಗೆದ್ದಿದ್ದವು. ಕೊನೆಯ ಹಂತದ ಮತದಾನ ನಡೆಯುವ 78 ಕ್ಷೇತ್ರಗಳಲ್ಲಿ ಜಾತಿ ಲೆಕ್ಕಾಚಾರವೇ ಪ್ರಧಾನವಾಗಿರಲಿದೆ. ಈ ಪ್ರದೇಶ ದಲ್ಲಿ ಯಾದವ ಸಮುದಾಯದ ಮತಗಳೇ ಹೆಚ್ಚಿನ ಸಂಖ್ಯೆಯಲ್ಲಿವೆ.

ಐದು ಟಾಪ್‌ ಜಿಲ್ಲೆಗಳು
ಬಿಹಾರದಲ್ಲಿ ಹೆಚ್ಚು ಪ್ರಮಾಣದ ಸೋಂಕು ಹೊಂದಿರುವ ಐದು ಜಿಲ್ಲೆಗಳಲ್ಲಿಯೂ ಶನಿವಾ ರವೇ ಹಕ್ಕು ಚಲಾವಣೆ ನಡೆಯಲಿದೆ. ಶುಕ್ರವಾರ ಪ್ರಕಟಗೊಂಡ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕೇವಲ 6,356 ಸಕ್ರಿಯ ಪ್ರಕರಣಗಳು ಇವೆ.

ನ. 27ಕ್ಕೆ ಲಾಲೂ ಅರ್ಜಿ ವಿಚಾರಣೆ
ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್‌ ಯಾದವ್‌ರ ಜಾಮೀನು ಅರ್ಜಿಯ ವಿಚಾರಣೆಯನ್ನು ಝಾರ್ಖಂಡ್‌ ಹೈಕೋರ್ಟ್‌ ನ.27ರಂದು ನಡೆಸ ಲಿದೆ. ದುಮ್ಕಾ ಖಜಾನೆಯಿಂದ ಅಕ್ರಮವಾಗಿ ಹಣ ವಿಥ್‌ಡ್ರಾ ಮಾಡಿದ ಪ್ರಕರಣ ಇದಾಗಿದೆ. ಈ ಪ್ರಕರಣ ದಲ್ಲಿ ಜಾಮೀನು ಸಿಕ್ಕಿದರೆ ಆರ್‌ಜೆಡಿ ಸಂಸ್ಥಾಪಕ ಕಾರಾಗೃಹದಿಂದ ಬಿಡುಗಡೆ ಯಾಗಲಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.