ಸಜ್ಜುಗೊಂಡಿವೆ ರಬಕವಿಯ ಚವಾಣ ಮನೆತನ ತಯಾರಿಸಿದ ಪರಿಸರ ಸ್ನೇಹಿ ಗಣೇಶ ವಿಗ್ರಹಗಳು

Team Udayavani, Aug 30, 2022, 2:21 PM IST

ಸಜ್ಜುಗೊಂಡಿವೆ ರಬಕವಿಯ ಚವಾಣ ಮನೆತನ ತಯಾರಿಸಿದ ಪರಿಸರ ಸ್ನೇಹಿ ಗಣೇಶ ವಿಗ್ರಹಗಳು

ರಬಕವಿ-ಬನಹಟ್ಟಿ: ರಬಕವಿಯ ಈಶ್ವರ ಸಣಕಲ್ ರಸ್ತೆಗೆ ಹೊಂದಿಕೊಂಡಂತೆ ಚವ್ಹಾಣ ಎಂಬುವವರ ಕುಟುಂಬ ಇದ್ದು, ಇವರ ಮುಖ್ಯ ಉದ್ಯೋಗ ಗಣೇಶ ವಿಗ್ರಹಗಳನ್ನು ಮಾಡುವುದು. ಒಂದು ಶತಮಾನಗಳಿಗಿಂತಲೂ ಹೆಚ್ಚು ಕಾಲ ಗಣೇಶ ವಿಗ್ರಹಗಳನ್ನು ಮಾಡುತ್ತಾ ಉಪ ಜೀವನ ನಡೆಸಿಕೊಂಡು ಬರುತ್ತಿದ್ದಾರೆ.

ಮುತ್ತಜ್ಜ ರಾಮಚಂದ್ರ, ಅವರ ಮಗ ಜ್ಞಾನೇಶ್ವರ ಮತ್ತು ಅವರ ಹೆಂಡತಿ ಕಮಲವ್ವ ಹಾಗೂ ಅವರ ನಂತರ ಅವರ ಮಗ ವಿಠ್ಠಲ ಗಣೇಶನ ವಿಗ್ರಹಗಳನ್ನು ಮಾಡುತ್ತಿದ್ದರು. ವಿಠ್ಠಲ ನಿಧನದ ನಂತರ ಅವರ ಪತ್ನಿ ವೀಣಾ ತಮ್ಮಿಬ್ಬರು ಮಕ್ಕಳಾದ ಅಮರ ಮತ್ತು ಸಾಗರ ಅವರನ್ನು ಕರೆದುಕೊಂಡು ತಲೆ ತಲಾಂತರದಿಂದ ಬಳುವಳಿಯಾಗಿ ಬಂದ  ವೃತ್ತಿಯನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.

ಅದರಲ್ಲೂ ಈ ಮನೆತನದವರು ಮಣ್ಣಿನ ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಮಾಡುತ್ತ ಬಂದಿರುವುದು ವಿಶೇಷ ಸಂಗತಿಯಾಗಿದೆ. ಇವರು ಒಂದು ಶತಮಾನದಿಂದ ವಿಗ್ರಹಗಳ ಕಾಯಕದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ವೀಣಾ ಚವಾಣ ಎರಡೂವರೆ ದಶಕಗಳಿಂದ ಗಣೇಶ ವಿಗ್ರಹಗಳನ್ನು ಮಾಡುತ್ತ ಬಂದಿದ್ದಾರೆ.  ಎರಡು ವರ್ಷ ಕೋವಿಡ್ ಕಾರಣದಿಂದಾಗಿ ಗಣೇಶ ವಿಗ್ರಹಗಳಿಗೆ ಅಷ್ಟಾಗಿ ಬೇಡಿಕೆ ಇದ್ದಿರಲಿಲ್ಲ. ಈ ಬಾರಿ ಅಂದಾಜು 300 ಕ್ಕೂ ಹೆಚ್ಚಿನ ವಿಗ್ರಹಗಳನ್ನು ತಯಾರು ಮಾಡಿದ್ದೇವೆ. ಎಲ್ಲವೂಗಳು ಕೂಡಾ ಮಣ್ಣಿನ ವಿಗ್ರಹಗಳೆ ಆಗಿವೆ. ಅರ್ಧ ಅಡಿಯಿಂದ ನಾಲ್ಕು ಅಡಿಯವರೆಗಿನ ಗಣೇಶ ವಿಗ್ರಹಗಳನ್ನು ಮಾಡಲಾಗಿದೆ. ಒಂದು ಅಡಿಯ ಗಣೇಶನ ವಿಗ್ರಹದ ದರ ರೂ. 1500 ರಿಂದ 1800 ಮಾರಾಟ ಮಾಡಿದ್ದೇವೆ. ಎಲ್ಲಕ್ಕಿಂತ ಮುಖ್ಯವಾಗಿ ಶಾಸ್ತ್ರ ಬದ್ಧವಾಗಿ ಮೂರ್ತಿಗಳನ್ನು ತಯಾರಿಸುತ್ತೇವೆ ಎನ್ನುತ್ತಾರೆ ರಾಹುಲ ಮತ್ತು ಸಾಗರ ಚವಾಣ.

ಇನ್ನೂ ಗಣೇಶನ ಮೂರ್ತಿಗಳ ಜೊತೆಗೆ  ಹೋಳಿ ಹುಣ್ಣಿಮೆಯ ಸಂದರ್ಭದಲ್ಲಿ ಕಾಮಣ್ಣನ ವಿಗ್ರಹಗಳು ಮಾಡುತ್ತಾರೆ. ಅದೇ ರೀತಿಯಾಗಿ ದೇವಸ್ಥಾನದ ಮುಂಭಾಗದಲ್ಲಿ ವಿಗ್ರಹಗಳನ್ನು ಮಾಡುವ ಕಲೆಯನ್ನು ಹೊಂದಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ಗಣೇಶ ವಿಗ್ರಹಗಳನ್ನು ಮಾಡುವುದು ಸುಲಭ. ಆದರೆ ಮಣ್ಣಿನ ವಿಗ್ರಹಗಳನ್ನು ಮಾಡುವುದು ಸ್ವಲ್ಪ ಕಷ್ಟ. ಅದರಲ್ಲಿ ತಾಳ್ಮೆ ಮುಖ್ಯವಾಗಿದೆ. ಇನ್ನೂ ಯಾವುದೆ ರಾಸಾಯನಿಕ ಬಣ್ಣಗಳನ್ನು ಬಳಸದೆ ಪರಿಸರ ಸ್ನೇಹಿ ಬಣ್ಣಗಳನ್ನು ಬಳಸುತ್ತಿದ್ದಾರೆ.

ಈ ಭಾಗದ ಗಣೇಶ ವಿಗ್ರಹಗಳ ಮಾರಾಟಗಾರರು ಗೋಕಾಕದ ಕೊಣ್ಣೂರು, ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಹಾಗೂ ಇನ್ನೀತರ ಪ್ರದೇಶಗಳಿಂದ ವಿಗ್ರಹಗಳನ್ನು ಕೊಂಡು ತಂದು ಮಾರಾಟ ಮಾಡಿದರೆ ಇವರು ರಬಕವಿಯಲ್ಲಿದ್ದುಕೊಂಡು ತಾವೇ ತಯಾರಿಸಿ ಮಾರಾಟ ಮಾಡುತ್ತಿರುವುದು ವಿಶೇಷವಾಗಿದೆ.

ತಾಯಿ ವೀಣಾ ತಮ್ಮಿಬ್ಬರು ಮಕ್ಕಳ ಜೊತೆಗೂಡಿ ಸಂಸಾರವನ್ನು ನಡೆಸುತ್ತ, ವಿಗ್ರಹಗಳನ್ನು ತಯಾರು ಮಾಡುವುದರ ಮೂಲಕ ತಮ್ಮ ಉಪ ಜೀವನ ನಡೆಸುತ್ತಿದ್ದಾರೆ.  ಜೂನ್ ಅಂತ್ಯಕ್ಕೆ ಗಣೇಶ ವಿಗ್ರಹಗಳನ್ನು ಮಾಡಿದ ನಂತರ ಗಣೇಶೋತ್ಸವ ಸಮೀಪಿಸುತ್ತಿದ್ದಂತೆ ಅವುಗಳಿಗ ಬಣ್ಣಗಳನ್ನು ನೀಡುತ್ತೇವೆ ಎನ್ನುತ್ತಾರೆ ಅಮರ ಚವಾಣ.

ಐವತ್ತು ವರ್ಷಗಳಗಿಂತೆ ಹೆಚ್ಚು ಕಾಲ ನಾವು ಚವಾಣ ಮನೆತನದವರು ನಿರ್ಮಾಣ ಮಾಡಿದ ಗಣೇಶ ವಿಗ್ರಹಗಳನ್ನು ತೆಗೆದುಕೊಂಡು ಹೋಗಿ ಪೂಜಿಸುತ್ತಿದ್ದೇವೆ ಎನ್ನುತ್ತಾರೆ ರಬಕವಿಯ ಸಂಜಯ ತೆಗ್ಗಿ.

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.