ವಿಧಾನಸಭೆ ವಿಸರ್ಜಿಸಿ!

ಮೈತ್ರಿಗೆ ದಿನಕ್ಕೊಂದು ಸಂಕಟ

Team Udayavani, May 19, 2019, 8:05 AM IST

ಹುಬ್ಬಳ್ಳಿ/ಬಾಗಲಕೋಟೆ: ಗೊಂದಲದಲ್ಲಿ ಮುಂದುವರಿಯುವ ಬದಲು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವುದು ಉತ್ತಮ ಎಂಬ ಜೆಡಿಎಸ್‌ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಹೇಳಿಕೆ ಸಂಚಲನ ಸೃಷ್ಟಿಸಿದೆ. ಸಮ್ಮಿಶ್ರ ಸರಕಾರದ ಪಾಲುದಾರ ಕಾಂಗ್ರೆಸ್‌-ಜೆಡಿಎಸ್‌ ಮುಖಂಡರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವ ಸಂದರ್ಭ ಈ ಹೇಳಿಕೆ ಬೆಂಕಿಗೆ ತುಪ್ಪ ಸುರಿದಿದೆ. ಇದನ್ನೇ ಅಸ್ತ್ರವಾಗಿಸಿ ಬಿಜೆಪಿ ಕೂಡ ಮೈತ್ರಿಕೂಟದ ವಿರುದ್ಧ ಮುಗಿಬಿದ್ದಿದೆ.

ಕುಮಾರಸ್ವಾಮಿಯವರಿಗೆ ಮುಕ್ತ ಆಡಳಿತಕ್ಕೆ ಅವಕಾಶ ನೀಡಬೇಕಿದೆ. ಸಮ್ಮಿಶ್ರ ಸರಕಾರ ಸಮರ್ಪಕವಾಗಿ ನಡೆಯಬೇಕು. ನಿತ್ಯವೂ ಗೊಂದಲಮಯ ವಾತಾವರಣ ಸೃಷ್ಟಿ ಮಾಡಿದರೆ ಆಡಳಿತ ಕಷ್ಟಕರ. ಅನಗತ್ಯ ಗೊಂದಲ ಸೃಷ್ಟಿಯ ಬದಲು ಹೊಸ ಜನಾದೇಶಕ್ಕೆ ಹೋಗುವುದು ಉತ್ತಮ ಎಂದು ಸುದ್ದಿ ಸಂಸ್ಥೆಯೊಂದಕ್ಕೆ ಹೊರಟ್ಟಿ ಹೇಳಿಕೆ ನೀಡಿದ್ದರು. ಇದು ವಿವಾದದ ರೂಪ ಪಡೆಯುತ್ತಿದ್ದಂತೆ ‘ಸಿದ್ದು ಸಿಎಂ’ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆ ಮೆತ್ತಗಾಗಿಸಲು ಈ ಹೇಳಿಕೆ ನೀಡಿದ್ದೇನೆ ಎಂದು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದ್ದಾರೆ.

ವಿಸರ್ಜನೆ ಸ್ಥಿತಿ ನಿರ್ಮಾಣವಾಗಿಲ್ಲ

ಬಸವರಾಜ ಹೊರಟ್ಟಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎಚ್.ಡಿ. ದೇವೇಗೌಡ, ಗೊಂದಲ ಸರಿಹೋಗಲಿದ್ದು, ವಿಧಾನಸಭೆ ವಿಸರ್ಜನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದಿದ್ದಾರೆ. ಹೊರಟ್ಟಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್‌, ವಿಧಾನಸಭೆ ವಿಸರ್ಜನೆ ಬಗ್ಗೆ ದೊಡ್ಡವರು ತೀರ್ಮಾನ ಕೈಗೊಳ್ಳಬೇಕು. ಚುನಾವಣೆಗೆ ಹೋಗುವುದು ಸುಲಭದ ಮಾತಲ್ಲ. ಹೊರಟ್ಟಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.

ಬಿಜೆಪಿಗೆ ಲಾಭ ಇಲ್ಲ
ಬಾಗಲಕೋಟೆ:
ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಮುಧೋಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹೊರಟ್ಟಿ, ಸರಕಾರ ವಿಸರ್ಜನೆಯಾಗಬೇಕು ಎಂಬ ನನ್ನ ಹೇಳಿಕೆ ಯಿಂದ ಬಿಜೆಪಿಗೆ ಲಾಭವಾಗುವ ಪ್ರಶ್ನೆಯೇ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬರಲು 8ರಿಂದ 10 ಜನ ಶಾಸಕರು ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ಚುನಾವಣೆಗೆ ಹೋಗಲು ಯಾರೂ ತಯಾರಿಲ್ಲ, ಧೈರ್ಯವೂ ಇಲ್ಲ. ಮಧ್ಯಂತರ ಚುನಾವಣೆಗೂ ನನ್ನ ಹೇಳಿಕೆಗೂ ಸಂಬಂಧವಿಲ್ಲ ಎಂದಿದ್ದಾರೆ.

‘ಕೈ’ಕಮಾಂಡ್‌ ಬುಲಾವ್‌
ಬೆಂಗಳೂರು:
ಇತ್ತೀಚೆಗಿನ ಬೆಳವಣಿಗೆ ಗಳ ಕುರಿತು ಚರ್ಚಿಸಲು ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಬುಲಾವ್‌ ನೀಡಿದ್ದಾರೆ. ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌ ಶನಿವಾರ ದಿಲ್ಲಿಗೆ ತೆರಳಿದರು. ಮಲ್ಲಿಕಾರ್ಜುನ ಖರ್ಗೆ, ಡಾ| ಜಿ. ಪರಮೇಶ್ವರ್‌, ಡಿಕೆಶಿ ರವಿವಾರ ಬೆಳಗ್ಗೆ ದಿಲ್ಲಿ ತಲುಪಲಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಚುನಾವಣೆ ಫ‌ಲಿತಾಂಶ, ಆಪರೇಷನ್‌ ಕಮಲ ಪ್ರಯತ್ನ, ಸಿಎಂ ಬದಲಾವಣೆ ವಿಚಾರ, ಮೈತ್ರಿಯ ಅನುಕೂಲ, ಅನಾನುಕೂಲಗಳ ಜತೆಗೆ ಫ‌ಲಿತಾಂಶದ ಬಳಿಕ ಜೆಡಿಎಸ್‌ ನಡೆ ಮತ್ತಿತರ ವಿಚಾರಗಳು ಚರ್ಚೆಯಾಗಬಹುದು ಎನ್ನಲಾಗಿದೆ.

ಎಚ್‌ಡಿಕೆ ಟ್ವೀಟ್ ಮನವಿ
ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ರಚನೆಯ ಆಶಯ ಸಾಕಾರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮುಖಂಡರು ವ್ಯತಿರಿಕ್ತ ಹೇಳಿಕೆ ನೀಡುವುದರಿಂದ ಈ ಪ್ರಯತ್ನಗಳಿಗೆ ಹಿನ್ನಡೆಯಾಗಬಹುದು. ಆದ್ದರಿಂದ ಉಭಯ ಪಕ್ಷಗಳ ಮುಖಂಡರು ಇಂಥ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ವಿವಾದಾತ್ಮಕ ಹೇಳಿಕೆ ನೀಡಬಾರದು ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಪೊಲೀಸ್‌ ಇಲಾಖೆಯ ಅಧಿಕಾರಿ ಹಾಗೂ ಸಿಬಂದಿ ವರ್ಗದ ವೇತನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರಕಾರ ಭರ್ಜರಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸ್‌ ಅಧಿಕಾರಿ,...

  • ಗಂಗಾವತಿ: ಪ್ರವಾಹದಿಂದಾಗಿ ವಿರೂಪಾಪುರ ಗಡ್ಡಿಯಲ್ಲಿ ಸಿಲುಕಿಕೊಂಡಿದ್ದ 350ಕ್ಕೂ ಹೆಚ್ಚು ಟೆಕ್ಕಿಗಳನ್ನು ರಕ್ಷಿಸಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ...

  • ಬೆಂಗಳೂರು: ಮಹದಾಯಿ, ಕಳಸಾ-ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಕರ್ನಾಟಕ ರೈತ...

  • ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯವಾದಿ ವೀರ ಸಾವರ್ಕರ್‌ ಹೆಸರನ್ನು "ಭಾರತರತ್ನ'ಕ್ಕೆ ಶಿಫಾರಸು ಮಾಡಲಾಗುವುದು ಎಂಬ ಬಿಜೆಪಿ ಪ್ರಣಾಳಿಕೆಯಲ್ಲಿನ...

  • ಕುಂದಾಪುರ: ವಿಶ್ವದಲ್ಲಿಯೇ ಅತಿ ಹೆಚ್ಚು ಕಾಳಿಂಗ ಸರ್ಪಗಳ ವಾಸಸ್ಥಾನ ಪಶ್ಚಿಮಘಟ್ಟ. ಆಗುಂಬೆಯಲ್ಲಿ ಅವುಗಳ ಸಮಗ್ರ ಅಧ್ಯಯನಕ್ಕಾಗಿ 2 ಗಂಡು ಕಾಳಿಂಗ ಸರ್ಪಗಳಿಗೆ...

ಹೊಸ ಸೇರ್ಪಡೆ

  • ಹೊಸದಿಲ್ಲಿ/ಮುಂಬಯಿ: ಲೋಕಸಭೆ ಚುನಾವಣೆ ಬಳಿಕ ನಡೆಯುತ್ತಿರುವ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಸೋಮವಾರ...

  • ಬೆಂಗಳೂರು: ಪೊಲೀಸ್‌ ಇಲಾಖೆಯ ಅಧಿಕಾರಿ ಹಾಗೂ ಸಿಬಂದಿ ವರ್ಗದ ವೇತನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರಕಾರ ಭರ್ಜರಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸ್‌ ಅಧಿಕಾರಿ,...

  • ಗಂಗಾವತಿ: ಪ್ರವಾಹದಿಂದಾಗಿ ವಿರೂಪಾಪುರ ಗಡ್ಡಿಯಲ್ಲಿ ಸಿಲುಕಿಕೊಂಡಿದ್ದ 350ಕ್ಕೂ ಹೆಚ್ಚು ಟೆಕ್ಕಿಗಳನ್ನು ರಕ್ಷಿಸಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ...

  • ಇನ್ನೇನು, ಗಂಟೆ 8 ಹೊಡೆ ಯುವ ಮೊದಲೇ ನಾನು ನನ್ನ ಸಂಶೋಧನಾಲಯದ ಬಾಗಿಲಲ್ಲಿ ಇರುತ್ತೇನೆ. ಮತ್ತಿನ್ನೇನು ಮಾಡಲಿ? ನನ್ನ ಮನೆಯಲ್ಲಿಯೇ ಇದ್ದು, ನನ್ನ ಮೃತ್ಯುವಿಗೆ ಕಾಯುತ್ತಾ...

  • ಕೊಲ್ಲೂರು: ಮಹಾತ್ಮಾ ಗಾಂಧಿ ಜಯಂತಿಯ 150ನೇ ವರ್ಷದ ಅಂಗವಾಗಿ ಸ್ವದೇಶಿ, ಸ್ವರಾಜ್‌, ಸ್ವಾವಲಂಬಿ ಮತ್ತು ಸ್ವಚ್ಛ ಭಾರತ ಸಾಕಾರಕ್ಕಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ...