ನಿರೀಕ್ಷೆಗಳ ಬಲೆ ಹೆಣೆಯುತ್ತಿರುವ ಬೆಸ್ತರು

Team Udayavani, Jul 7, 2017, 3:45 AM IST

bale.jpg

ಕಾಸರಗೋಡು: ಟ್ರಾಲಿಂಗ್‌ ನಿಷೇಧದ ಹಿನ್ನೆಲೆಯಲ್ಲಿ ಜೂ.14 ರ ಮಧ್ಯ ರಾತ್ರಿಯಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸದೆ ಕರಾವಳಿ ತೀರದಲ್ಲಿ ತಂದು ನಿಲ್ಲಿಸಿದ ದೋಣಿಗಳು ಮುಂದಿನ ಮೀನುಗಾರಿಕಾ ಸೀಸನ್‌ಗಳಿಗೆ ಸಿದ್ಧಗೊಳ್ಳುತ್ತಿದೆ. ಕಾಸರ ಗೋಡು ಸಹಿತ ವಿವಿಧೆೆಡೆಗಳಲ್ಲಿ ಬೆಸ್ತರು ಮೀನುಗಾರಿಕಾ ಬಲೆಗಳನ್ನು ಹೆಣೆವ ಮತ್ತು ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. 

ಮೀನುಗಾರಿಕೆ ಸಾಧ್ಯವಿಲ್ಲದ ಕಾರಣ ದಿಂದ ಬಲೆ ನೇಯುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಮುಂದಿನ ಮೀನುಗಾರಿಕಾ ಸೀಸನ್‌ ನಿರೀಕ್ಷೆಯೊಂದಿಗೆ.

ಮೀನಿನ ಸಂಪತ್ತು ರಕ್ಷಿಸುವ ಹಿನ್ನೆಲೆ ಯಲ್ಲಿ ಕೇರಳ ಸರಕಾರ ಒಂದೂವರೆ ತಿಂಗಳ ಕಾಲ ಸಮುದ್ರದಲ್ಲಿ ಮೀನುಗಾರಿಕೆ ನಡೆಸದಿರಲು ಟ್ರಾಲಿಂಗ್‌ ನಿಷೇಧಿಸಿದೆ. ಇದರ ಪರಿಣಾಮವಾಗಿ ಮೀನುಗಾರಿಕೆ ದೋಣಿ (ಯಾಂತ್ರೀಕೃತ ದೋಣಿ)ಗಳು ದಡದಲ್ಲಿ ಲಂಗರು ಹಾಕಬೇಕಾದ ಅನಿವಾರ್ಯತೆ ಎದುರಾಗಿದೆ. 

ಈ ದಿನಗಳಲ್ಲಿ ದುಡಿಮೆಯಿಲ್ಲದೆ ಜೀವನ ಸಾಗಿಸುವ ಸವಾಲು ಬೆಸ್ತರನ್ನು ಕಾಡುತ್ತಿದೆ. ಜೀವ ಪಣವಿಟ್ಟು ಅಥವಾ ಜೀವದ ಹಂಗು ತೊರೆದು ಸಾಹಸದಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ಜೀವನ ಸಾಗಿಸುತ್ತಿದ್ದ ಬೆಸ್ತರಿಗೆ ಇದೀಗ ಕೆಲಸವಿಲ್ಲದ ದಿನಗಳು. ಜೂ.14 ಮಧ್ಯರಾತ್ರಿಯಿಂದ ಜುಲೈ 31 ರ ವರೆಗೆ ಅಂದರೆ 47 ದಿನಗಳ ಕಾಲ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ಕೇರಳ ಸರಕಾರ ನಿಷೇಧ ಹೇರಿದ್ದು, ಈ ಸಂದರ್ಭದಲ್ಲಿ ದುಡಿಮೆಯಿಲ್ಲದೆ ಜೀವನ ಸಾಗಿಸುವುದು ಸವಾಲಿನದ್ದಾಗಿದೆ.

ಸಮುದ್ರದಲ್ಲಿ ಮೀನಿನ ಸಂತಾನೋತ್ಪತ್ತಿ ಋತು ಆರಂಭಗೊಂಡ ಹಿನ್ನೆಲೆಯಲ್ಲಿ ಮತ್ಸÂ ಸಂರಕ್ಷಿಸುವ ಹಿನ್ನೆಲೆಯಲ್ಲಿ ಕೆ.ಎಂ.ಎಫ್‌.ಆರ್‌. ಕಾಯ್ದೆಯಂತೆ ಕೇರಳದ ಆಳ ಸಮುದ್ರದಲ್ಲಿ ಜುಲೈ 31 ರ ವರೆಗೆ ಮೀನುಗಾರಿಕೆ ನಿಷೇಧ ಹೇರಿದ್ದು, ಪರಂಪರಾಗತ ಮೀನುಗಾರಿಕೆಗೆ ಯಾವುದೇ ನಿಯಂತ್ರಣವಿಲ್ಲದೆ ಮೀನು ಗಾರಿಕೆ ನಡೆಸಬಹುದಾಗಿದೆ. ಈ ಕಾರಣದಿಂದ ಪರಂಪರಾಗತ ಮೀನು ಗಾರಿಕೆ ನಡೆಸುವ ಬೆಸ್ತರು ಸ್ವಲ್ಪಮಟ್ಟಿಗೆ ಉಸಿರಾಡುವಂತಾಗಿದೆ.

ಟ್ರಾಲಿಂಗ್‌ ನಿಷೇಧ ಕೊನೆಗೊಳ್ಳುವ ಜುಲೈ 31 ರ ವರೆಗೆ ಕಾಯುತ್ತಿರುವ ಬೆಸ್ತರು ಈ ಕಾಲಾವಧಿಯಲ್ಲಿ ಬಲೆಯನ್ನು ಸಿದ್ಧಪಡಿಸುವ ಕೆಲಸದಲ್ಲಿ ತೊಡಗಿದ್ದಾರೆ. ದಡದಲ್ಲಿ ಲಂಗರು ಹಾಕಿರುವ ದೋಣಿಗಳ ದುರಸ್ತಿಯ ಜೊತೆಯಲ್ಲಿ ಬಲೆಯನ್ನು ನೇಯುವ ಕೆಲಸ ದಡದಲ್ಲಿ ನಡೆಯುತ್ತಿದೆ. ಇದೀಗ ಹೊಳೆಗಳಲ್ಲಿ ಸಣ್ಣ ದೋಣಿಗಳನ್ನು ಬಳಸಿ ಹೊಳೆಗಳಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾರೆ. ದೋಣಿ, ಬಲೆ ಮೊದಲಾದವುಗಳ ದುರಸ್ತಿಯ ಜೊತೆಯಲ್ಲಿ ಬೋಟ್‌ಗೆ ಅಳವಡಿಸುವ ಮೋಟಾರ್‌ ಗಳನ್ನು ದುರಸ್ತಿಗೊಳಿಸುವ ಕೆಲಸವೂ ಈಗ ನಡೆಯುತ್ತಿದೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.