ಕಿಫ್‌ ಬಿ ಮೂಲಕ ಕೇರಳ ಅಭಿವೃದ್ಧಿ: ಪಿಣರಾಯಿ

3 ದಿನಗಳ ಅಭಿವೃದ್ಧಿ ಪ್ರದರ್ಶನಕ್ಕೆ ಚಾಲನೆ

Team Udayavani, Jan 29, 2020, 1:43 AM IST

ಕಾಸರಗೋಡು: ಮೂಲಸೌಕರ್ಯ ಮತ್ತು ಅಭಿವೃದ್ಧಿಯನ್ನು ಕೆಲವೇ ಸ್ಥಳಗಳಲ್ಲಿ ಮಾತ್ರ ಕೇಂದ್ರೀಕರಿಸದೆ ಅರ್ಹವಾದ ಪರಿಗಣನೆಯ ಮೂಲಕ ರಾಜ್ಯದೆಲ್ಲೆಡೆ ಜಾರಿಗೊಳಿಸಲು ಸಾಧ್ಯ ವಾಯಿತು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದರು.

ಕೇರಳ ಇನ್ಫ್ರಾಸ್ಟ್ರಕ್ಚರ್‌ ಇನ್ವೆಸ್ಟ್‌ಮೆಂಟ್‌ ಫಂಡ್‌ ಬೋರ್ಡ್‌ (ಕಿಫ್‌ ಬಿ) ನುಳ್ಳಿಪ್ಪಾಡಿಯ ಮೈದಾನದಲ್ಲಿ ಆಯೋಜಿಸಿದ ಮೂರು ದಿನಗಳ ಅಭಿವೃದ್ಧಿ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ “ಕೇರಳ ನಿರ್ಮಿತಿ’ಗೆ ಚಾಲನೆ ನೀಡಿ ಅವರು ಮಾತನಾಡಿದರು. ಅಭಿವೃದ್ಧಿಯ ಪ್ರಯೋಜನ ಮಲಬಾರು ಪ್ರದೇಶಕ್ಕೆ ಲಭಿಸುತ್ತಿಲ್ಲ ಎಂಬ ಬಗ್ಗೆ ಹಿಂದೆ ಆರೋಪಗಳಿತ್ತು. ಆದರೆ ಕಿಫ್‌ ಬಿ ಮೂಲಕ ಈ ಆರೋಪಗಳಿಂದ ಮುಕ್ತವಾಗಲು ಸಾಧ್ಯವಾಯಿತು. ಕೋಟ್ಯಂತರ ರೂ. ಯೋಜನೆಗಳನ್ನು ಮಲಬಾರು ಪ್ರದೇಶದಲ್ಲಿ ಜಾರಿಗೊಳಿಸಲಾಗಿದ್ದು, ಕೇರಳ ನಿರ್ಮಿತಿ ಎಂಬ ನಾಮಧೇಯದಲ್ಲಿ ಮೂಲಸೌಕರ್ಯ ಕಲ್ಪಿಸುವುದು ಇದರ ಉದ್ದೇಶವಾಗಿದೆ ಎಂದರು.

ಸಮಗ್ರ ಅಭಿವೃದ್ಧಿ
ಈ ಹಿಂದೆ ಎಂದೂ ಕಾಣದ ಅಭಿವೃದ್ಧಿ ಕೇರಳದಲ್ಲಿ ಸಾಧ್ಯವಾಗಿದೆ. ಎಲ್ಲ ಕ್ಷೇತ್ರಗಳನ್ನು ಸೇರ್ಪಡೆಗೊಳಿಸಿ ಸಮಗ್ರ ಸಾಮೂಹಿಕ ಅಭಿವೃದ್ಧಿಗೆ ಸರಕಾರ ಆದ್ಯತೆ ನೀಡಿದೆ. 10ರಿಂದ 15 ವರ್ಷಗಳ ದೀರ್ಘ‌ ವರ್ಷಗಳಲ್ಲಿ ಸಾಧ್ಯವಾಗಲಿದ್ದ ಯೋಜನೆಗಳನ್ನು ಈ ಸರಕಾರ ಪೂರ್ತಿಗೊಳಿಸಿದೆ ಎಂದ ಅವರು ಅಭಿವೃದ್ಧಿ ಎಂದರೆ ಕೇವಲ ಯೋಜನೆಗಳು ಮಾತ್ರವಲ್ಲ, ಪ್ರತಿಯೊಬ್ಬರ ಜೀವನ ಮಟ್ಟ ಸುಧಾರಿಸುವ ಪ್ರಕ್ರಿಯೆಯಾಗಿದೆ ಎಂದರು.

ಕಂದಾಯ ಸಚಿವ ಇ. ಚಂದ್ರಶೇಖರನ್‌ ಅಧ್ಯಕ್ಷತೆ ವಹಿಸಿದರು. ಸಂಸದ ರಾಜ್‌ಮೋಹನ್‌ ಉಣ್ಣಿತ್ತಾನ್‌, ಶಾಸಕರಾದ ಎನ್‌.ಎ. ನೆಲ್ಲಿಕುನ್ನು, ಕೆ. ಕುಂಞಿ ರಾಮನ್‌, ಎಂ. ರಾಜಗೋಪಾಲನ್‌, ಎಂ.ಸಿ. ಕಮರುದ್ದೀನ್‌, ಜಿ.ಪಂ. ಅಧ್ಯಕ್ಷ ಎ.ಜಿ.ಸಿ. ಬಶೀರ್‌, ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ಬಾಬು, ನಗರಸಭಾ ಅಧ್ಯಕ್ಷೆ ಬಿಫಾತಿಮಾ ಇಬ್ರಾಹಿಂ, ಪ್ರೊ| ಕೆ.ವಿ. ಜಯರಾಜನ್‌ ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...

  • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...

  • ಮನೋ ಚಿಕಿತ್ಸಾ ಕೇಂದ್ರಗಳ ಕುರಿತಾಗಿ ನಮ್ಮ ನಡುವೆ ಅನೇಕ ತಪ್ಪು ಕಲ್ಪನೆಗಳಿವೆ. "ಹುಚ್ಚಾಸ್ಪತ್ರೆ' ಎಂಬ ಪದಪ್ರಯೋಗವೇ ನಮ್ಮ ನಡುವೆ ಕೆಟ್ಟ ಭಾವವನ್ನು ಹೊಮ್ಮಿಸುತ್ತದೆ....