ಪೈವಳಿಕೆ: ಕಂಬಳದ ಬಂಗಾರದ ಮನುಷ್ಯ ಶ್ರೀನಿವಾಸ ಗೌಡರಿಗೆ ನಾಲ್ಕು ಪದಕ

Team Udayavani, Feb 23, 2020, 4:30 PM IST

ಕಾಸರಗೋಡು: ತನ್ನ ವೇಗದ ಓಟದಿಂದ ವಿಶ್ವಪ್ರಸಿದ್ದಿ ಪಡೆದ ಕಂಬಳದ ಬಂಗಾರದ ಮನುಷ್ಯ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡರು ರವಿವಾರ ಅಂತ್ಯವಾದ ಬೋಳಂಗಳ ಪೈವಳಿಕೆ ‘ಅಣ್ಣ-ತಮ್ಮ” ಜೋಡುಕರೆ ಕಂಬಳದಲ್ಲಿ ನಾಲ್ಕು ಪದಕಗಳಿಗೆ ಕೊರೊಳೊಡ್ಡಿದ್ದಾರೆ.

ನಾಲ್ಕು ವಿಭಾಗದಲ್ಲಿ ತಾನು ಓಡಿಸಿದ ನಾಲ್ಕು ಜೊತೆ ಕೋಣಗಳನ್ನು ಫೈನಲ್ ಗೆ ತಲುಪಿಸಿದ ಶ್ರೀನಿವಾಸ ಗೌಡರು ಎರಡು ಪ್ರಥಮ ಮತ್ತು ಎರಡು ದ್ವಿತೀಯ ಪ್ರಶಸ್ತಿ ಗೆದ್ದರು. ಹಗ್ಗ ಕಿರಿಯ ಮತ್ತು ನೆಗಿಲು ಕಿರಿಯ ವಿಭಾಗದಲ್ಲಿ ಚಿನ್ನದ ಪದಕ ಪಡೆದರೆ, ಹಗ್ಗ ಹಿರಿಯ ಮತ್ತು ನೇಗಿಲು ಹಿರಿಯ ವಿಭಾಗದಲ್ಲಿ ದ್ವಿತೀಯ ಪ್ರಶಸ್ತಿ ಪಡೆದರು. ಇದರೊಂದಿಗೆ ಈ ಋತುವಿನ ಕಂಬಳಗಳಲ್ಲಿ 39 ಪದಕ ಪಡೆದು ದಾಖಲೆ ಬರೆದರು.

ನೇಗಿಲು ಹಿರಿಯ ವಿಭಾಗದಲ್ಲಿ ಸ್ಪರ್ಧೆ ಮಾಡಿದ್ದ ಬೋಳದ ಗುತ್ತು ಸತೀಶ್ ಶೆಟ್ಟಿಯವರ “ಕಾಲೆ ಮತ್ತು ಧೋನಿ’’ ಎಂಬ ಹೆಸರಿನ ಕೋಣಗಳು ಫೈನಲ್ ಕದನದಲ್ಲಿ 12.45 ಸೆಕಂಡ್ ನಲ್ಲಿ ಓಡಿ ದಾಖಲೆ ಬರೆದವು. ಇವುಗಳನ್ನು ಓಡಿಸಿದ ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿಯವರು ಈ ಸಾಲಿನ ಅತೀ ವೇಗದ ಓಟಗಾರನೆಂಬ ದಾಖಲೆ ಬರೆದರು. (100 ಮೀ. 9.47ಸೆ)

ಪೈವಳಿಕೆ ಕಂಬಳದಲ್ಲಿ ಒಟ್ಟು 95 ಜೊತೆ ಕೋಣಗಳು ಭಾಗವಹಿಸಿದ್ದು, ಅಂತಿಮ ಫಲಿತಾಂಶ ಪಟ್ಟಿ ಇಲ್ಲಿದೆ.

ಕನೆಹಲಗೆ:

ಬೇಲಾಡಿ ಬಾವ ಅಶೋಕ್ ಶೆಟ್ಟಿ (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಹಲಗೆ ಮುಟ್ಟಿದವರು: ನಾರಾವಿ ಯುವರಾಜ ಜೈನ್

ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ “ಎ”
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ “ಬಿ”
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ

ಹಗ್ಗ ಹಿರಿಯ:
ಪ್ರಥಮ: ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ “ಎ”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಎ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ಹಗ್ಗ ಕಿರಿಯ:
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ”ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಸೂಡ ಹಳೆಮನೆ ಅಜಿತ್ ರಾಜ್ ಶೆಟ್ಟಿ
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ:
ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಎ”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ ‘ಎ’
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಕಿರಿಯ:
ಪ್ರಥಮ: ಪೆರುವಾಯಿ ಕುಂಬಳೆಕೋಡಿ ರಂಜಿತ್ ಮಾರ್ಲ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಉಡುಪಿ ಹಿರೇಬೆಟ್ಟು ಶಂಕರ ದೇವಾಡಿಗ
ಓಡಿಸಿದವರು: ಹಿರೇಬೆಟ್ಟು ಆಕಾಶ್

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಕೋವಿಡ್‌ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು...

  • ಕುಂದಾಪುರ: ಉಡುಪಿ ಜಿಲ್ಲೆಯ ಶಿರೂರು, ಹೊಸಂಗಡಿ, ಕುಂದಾಪುರ ನಗರ ಭಾಗದಲ್ಲಿ ಮಾತ್ರವಲ್ಲದೆ ಅಂಪಾರು ಮತ್ತಿತರ ಕೆಲವೆಡೆಗಳಲ್ಲಿಯೂ ಶನಿವಾರದಿಂದ ಚೆಕ್‌ಪೋಸ್ಟ್‌ಗಳನ್ನು...

  • ಬೆಂಗಳೂರು: ಕೋವಿಡ್‌ 19 ಭೀತಿ ಹಿನ್ನೆಲೆಯಲ್ಲಿ ಎ. 15ರ ತನಕ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ಪಾವತಿ ಮಾಡಿಸಿಕೊಳ್ಳದಂತೆ...

  • ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ಸೋಂಕು ಹೆಚ್ಚುತ್ತಿದ್ದು, ಶನಿವಾರ 18 ಮಂದಿಗೆ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 82ಕ್ಕೆ ಏರಿದೆ. ಶನಿವಾರ...

  • ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮಾ. 27ರಂದು ಒಂದೇ ದಿನ ಎರಡು ಕೋವಿಡ್‌ 19 ಸೋಂಕು ದೃಢ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದ್‌ಗೆ ನಿರ್ಧರಿಸಿದ್ದು,...