ಮಾತು ಪಾಲಿಸದ ಸರಕಾರ: ಜ. 30ರಂದು ಎಂಡೋ ಸಂತ್ರಸ್ತರಿಂದ ಸೆಕ್ರೆಟರಿಯೇಟ್‌ ಮುತ್ತಿಗೆ

Team Udayavani, Jan 27, 2020, 10:04 PM IST

ಕಾಸರಗೋಡು: ಹೆಲಿಕಾಪ್ಟರ್‌ನಲ್ಲಿ ಜಿಲ್ಲೆಯ 11 ಗ್ರಾ.ಪಂ.ಗಳಲ್ಲಿರುವ ತೋಟಗಾರಿಕಾ ನಿಗಮದ ಗೇರು ತೋಟ ಗಳಿಗೆ ಸಿಂಪಡಿಸಿದ ಎಂಡೋಸಲ್ಫಾನ್‌ ದುಷ್ಪರಿಣಾಮದಿಂದ ಕಂಗೆಟ್ಟ ಸಂತ್ರಸ್ತರ ವಿವಿಧ ಬೇಡಿಕೆಗಳ ಹೋರಾಟದ ಫಲವಾಗಿ ವಿವಿಧ ಸವಲತ್ತುಗಳ ಭರವಸೆ ಲಭಿಸಿದ್ದರೂ, ಅವುಗಳಲ್ಲಿ ಹೆಚ್ಚಿನವು ಈಡೇರದಿರುವುದರಿಂದ ಸಂತ್ರಸ್ತರು ಮತ್ತೆ ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದಾರೆ. ಇದರಂತೆ ಜ. 30 ರಂದು ತಿರುವನಂತಪುರದಲ್ಲಿರುವ ಸೆಕ್ರೆಟರಿ ಯೇಟ್‌ಗೆ ಮುತ್ತಿಗೆ ಚಳವಳಿ ನಡೆಯಲಿದೆ.

2017 ರಲ್ಲಿ ನಡೆಸಲಾದ ವೈದ್ಯಕೀಯ ಶಿಬಿರದಲ್ಲಿ ಪತ್ತೆಹಚ್ಚಲಾದ 1905 ಮಂದಿಯಲ್ಲಿ 18 ವರ್ಷಕ್ಕಿಂತ ಕೆಳಗಿನ ಪ್ರಾಯದ ಮಕ್ಕಳನ್ನು ಸೇರಿಸುವಂತೆ ಎಂಡೋ ಸೆಲ್‌ ಸಭೆಯಲ್ಲಿ ತೀರ್ಮಾನವಾಗಿದ್ದರೂ ಈ ಮಕ್ಕಳಿಗೆ ಇದುವರೆಗೆ ಚಿಕಿತ್ಸಾ ಸೌಲಭ್ಯ ಸಹಿತ ಯಾವುದೇ ಸವಲತ್ತು ಲಭಿಸಿಲ್ಲ. 2017ರ ಸುಪ್ರೀಂ ಕೋರ್ಟ್‌ ತೀರ್ಪಿನನ್ವಯ ವಿಶೇಷ ವೈದ್ಯಕೀಯ ಶಿಬಿರದಲ್ಲಿ ಗುರುತಿಸಲ್ಪಟ್ಟ ಎಂಡೋ ಪೀಡಿತರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಬೇಕೆಂಬ ಆದೇಶವನ್ನೂ ಪಾಲಿಸಿಲ್ಲ. ಎಂಡೋಸಲ್ಫಾನ್‌ ದುಷ್ಪರಿಣಾಮದಿಂದ ಬಳಲುತ್ತಿರುವವರಿಗೆ ಪುನರ್ವಸತಿ ಕಲ್ಪಿಸಲು ಟ್ರಿಬ್ಯೂನಲ್‌ ಸ್ಥಾಪಿಸುವಂತೆ ಮಾಡಿಕೊಂಡ ಮನವಿಗೂ ಸರಕಾರದ ಸ್ಪಂದನೆಯಿಲ್ಲ.
ಎಂಡೋಸಲ್ಫಾನ್‌ ದುಷ್ಪರಿಣಾಮ ಪೀಡಿತರು ಮತ್ತೆ ಬೀದಿಗಿಳಿದು ಹೋರಾಡಲು ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಜಾರಿಗೆ ಸರಕಾರ ಮುಂದಾಗುತ್ತಿಲ್ಲ ಎಂಬುದು ಸಂತ್ರಸ್ತರ ಪರ ಹೋರಾಟ ನಡೆಸುವ ಸಂಘಟನೆಗಳ ಪದಾಧಿಕಾರಿಗಳ ಆರೋಪವಾಗಿದೆ.

ಎಂಡೋ ಸಂತ್ರಸ್ತರಿಗೆ ಲಭಿಸುತ್ತಿದ್ದ ಮಾಸಿಕ ಪಿಂಚಣಿಯೂ ಸಕಾಲಕ್ಕೆ ಕೈ ಸೇರುತ್ತಿಲ್ಲ. ಸಂತ್ರಸ್ತರ ಪಿಂಚಣಿ ಮೊತ್ತ ಹೆಚ್ಚಿಸಬೇಕೆಂಬ ಬೇಡಿಕೆ ಹಲವು ತಿಂಗಳಿಂದ ಕೇಳಿ ಬರುತ್ತಿದ್ದು, ಇದೀಗ ಪಿಂಚಣಿ ಮೊತ್ತವೇ ಸ್ಥಗಿತಗೊಂಡಿದೆ. ಇದರಿಂದ ಸಂತ್ರಸ್ತರು ಮತ್ತಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಎಂಡೋ ಸಂತ್ರಸ್ತರ ಚಿಕಿತ್ಸೆಗಾಗಿ ನ್ಯೂರೋಲೊಜಿಸ್ಟ್‌ ನೇಮಕಾತಿಯೂ ನಡೆದಿಲ್ಲ. ಜಿಲ್ಲೆಯಲ್ಲಿ ದಾಸ್ತಾನಿರುವ ಎಂಡೋಸಲ್ಫಾನ್‌ ಕೀಟನಾಶಕವನ್ನು ವೈಜ್ಞಾನಿಕವಾಗಿ ನಿಷ್ಕಿೃಯಗೊಳಿಸುವ ಬಗ್ಗೆಯೂ ಇದುವರೆಗೆ ಕ್ರಮ ಕೈಗೊಂಡಿಲ್ಲ. ಇನ್ನು ಎಂಡೋ ಸಂತ್ರಸ್ತರ ಕುಟುಂಬದ ಸದಸ್ಯರಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡಬೇಕೆಂಬ ಆಯಿಷಾ ಪೋತ್ತಿ ಅಧ್ಯಕ್ಷರಾಗಿರುವ ವಿಧಾನಸಭಾ ಸಮಿತಿ ಶಿಫಾರಸಿಗೂ ಬೆಲೆಯಿಲ್ಲದಾಗಿದೆ ಎಂದು ಸಮಿತಿ ಆರೋಪಿಸುತ್ತಿದೆ.

ಜ.30ರಂದು
ಸೆಕ್ರೆಟರಿಯೇಟ್‌ ಮುತ್ತಿಗೆ
ಎಂಡೋ ದುಷ್ಪರಿಣಾಮದಿಂದ ಸಂಕಷ್ಟ ಅನುಭವಿಸುತ್ತಿರುವ ಎಂಡೋ ಸಂತ್ರಸ್ತರ ತಾಯಂದಿರು ಜ. 30ರಂದು ತಿರುವನಂತಪುರ ಸೆಕ್ರೆಟರಿಯೇಟ್‌ ಮುಂಭಾಗದಲ್ಲಿ ಧರಣಿ ನಡೆಸುವರು. 2019 ಜನವರಿ 30ರಂದು ತಿರುವನಂತಪುರ ಸೆಕ್ರೆಟರಿಯೇಟ್‌ ಮುಂಭಾಗ ನಡೆಸಿದ ನಿರಾಹಾರ ಸತ್ಯಾಗ್ರಹದ ಸಂದರ್ಭದಲ್ಲಿ ಸರಕಾರ ಮಧ್ಯ ಪ್ರವೇಶಿಸಿ ಕೈಗೊಂಡ ತೀರ್ಮಾನ ಇದುವರೆಗೂ ಜಾರಿಯಾಗಿಲ್ಲ. ಸರಕಾರ ಎಂಡೋ ಸಂತ್ರಸ್ತರ ಪುನರ್ವಸತಿ ಬಗ್ಗೆ ತೋರುತ್ತಿರುವ ನಿರ್ಲಕ್ಷ್ಯ ಪ್ರತಿಭಟಿಸಿ ಹಾಗೂ ಪಿಂಚಣಿ ಸಹಿತ ವಿವಿಧ ಸವಲತ್ತುಗಳನ್ನು ಶೀಘ್ರವೇ ಮಂಜೂರು ಗೊಳಿಸುವಂತೆ ಒತ್ತಾಯಿಸಿ ಸೆಕ್ರೆಟರಿಯೇಟ್‌ಗೆ ಮುತ್ತಿಗೆ ಚಳವಳಿ ನಡೆಯುವುದು. ಇದರ ಪೂರ್ವಭಾವಿಯಾಗಿ ಜ. 19ರಂದು ಕಾಸರಗೋಡು ಹೊಸ ಬಸ್‌ ನಿಲ್ದಾಣ ಪರಿಸರದಲ್ಲಿ ಸಂತ್ರಸ್ತರು “ಹೋರಾಟ ಜ್ಯೋತಿ’ ಬೆಳಗಿಸುವ ಮೂಲಕ ಸೆಕ್ರೆಟರಿಯೇಟ್‌ ಎದುರು ನಡೆಯುವ ಧರಣಿಗೆ ಬೆಂಬಲ ಸೂಚಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ