ಪೋಲಿಯೋ ಲಸಿಕೆ ನೀಡಿಕೆ
Team Udayavani, Mar 13, 2019, 1:00 AM IST
ಶನಿವಾರಸಂತೆ: ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವೊಂದು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗ್ರಾ.ಪಂ. ಅಧ್ಯಕ್ಷೆ ವೀಣಾ ರಮೇಶ್ ಮಗುವಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ಡಾ| ಸುಪರ್ಣಾ ಕೃಷ್ಣಾನಂದ್ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಉದ್ದೇಶದ ಕುರಿತು ಮಾಹಿತಿ ನೀಡಿದರು. ಜ್ಯೋತಿ, ಇಂದಿರಾ, ಶುಭಾ, ಮೀನಾಕ್ಷಿ ಮುಂತಾದವರು ಉಪಸ್ಥಿತರಿದ್ದರು