ಹೊಸಮನೆಯಲ್ಲಿ ಸೋದರಿಗಾಗಿ ಕಾದಿರುವ ಶರ್ಮಿಳಾ

Team Udayavani, Feb 24, 2020, 5:46 AM IST

ಕಾಸರಗೋಡು: ಕಾದಿರುವರು ಹೊಸಮನೆಯಲ್ಲಿ ಶರ್ಮಿಳಾ ಸಹೋದರಿಯ ಬರೋಣಕ್ಕಾಗಿ… ರಾಜ್ಯ ಸರಕಾರದ ಜನಪರ ಯೋಜನೆಗಳಲ್ಲಿ ಒಂದಾಗಿರುವ ಲೈಫ್‌ ಮಿಷನ್‌ ಮೂಲಕ ನೂತನ ನಿವಾಸ ನಿರ್ಮಿಸಿಕೊಂಡಿರುವ ಶರ್ಮಿಳಾ ಅವರು ನೂತನ ಮನೆಗೆ ತಮ್ಮ ಸಹೋದರಿಯ ಆಗಮನಕ್ಕಾಗಿ ಕಾದು ಕುಳಿತಿದ್ದಾರೆ. ಕಲ್ಲಿಕೋಟೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಯಲ್ಲಿರುವ ಸೋದರಿ ಶೀಘ್ರದಲ್ಲಿ ನೂತನ ಮನೆಗೆ ಬರುವ ನಿರೀಕ್ಷೆಯಲ್ಲಿ ಶರ್ಮಿಳಾ ಇದ್ದಾರೆ. ಕಾರಡ್ಕ ನೀರೋಳಿಪ್ಪಾರೆ ಪರಿಶಿಷ್ಟ ಪಂಗಡ ಕಾಲನಿಯಲ್ಲಿ ಇವರಿಗೆ ನೂತನ ಮನೆ ನಿರ್ಮಾಣವಾಗಿದೆ.

ಕೆಲವು ವರ್ಷಗಳ ಹಿಂದೆಯೇ ಹೆತ್ತವರನ್ನು ಕಳೆದುಕೊಂಡಿದ್ದ ಇವರು ತಮ್ಮ ಸೋದರಿ ಶೋಭಾ ಅವರೊಂದಿಗೆ ಹಳೆಯ ಶಿಥಿಲ ಮನೆಯಲ್ಲಿ ವಾಸವಾಗಿದ್ದರು. ಮನೆಯ ದುಸ್ಥಿತಿಯ ಹಿನ್ನೆಲೆಯಲ್ಲಿ ಅವರನ್ನು ಗ್ರಾಮ ಪಂಚಾಯತ್‌ ಅಧಿಕಾರಿಗಳು ಸ್ಥಳೀಯ ಟಿ.ವಿ. ಶೆಡ್‌ಗೆ ಸ್ಥಳಾಂತರಿಸಿದ್ದರು. ಮಾನಸಿಕ ಅಸ್ವಸ್ಥತೆ ಹೊಂದಿದ್ದ ಸೋದರಿ ಶೋಭಾ ಅವರು ಶರ್ಮಿಳಾ ಅವರಿಗೆ ದೈಹಿಕ ಹಿಂಸೆಯನ್ನು ನೀಡುತ್ತಿದ್ದ ಹಿನ್ನೆಲೆಯಲ್ಲಿ, ಅವರನ್ನು ಕಲ್ಲಿಕೋಟೆಯ ಮಾನಸಿಕ ಆರೋಗ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಒಡಹುಟ್ಟಿದವಳು ಆಸ್ಪತ್ರೆಗೆ ದಾಖಲಾದ ಮೇಲೆ ಶರ್ಮಿಳಾ ಏಕಾಂಗಿ ಬದುಕನ್ನು ಸವೆಸಬೇಕಾಗಿ ಬಂದಿತ್ತು.

ಹಲವು ಸಮಸ್ಯೆಗಳ ನಡುವೆಯೂ ಲೈಫ್‌ ಮಿಷನ್‌ ಮೂಲಕ ನೂತನ ಸುರಕ್ಷಿತ ನಿವಾಸವೊಂದು ಲಭಿಸಿರುವುದು ಶರ್ಮಿಳಾರ ಬದುಕಿಗೆ ಹೊಸ ಆಶಾಕಿರಣವಾಗಿದೆ. ಲೈಫ್‌ ಮಿಷನ್‌ ಯೋಜನೆ ಮೂಲಕ 4 ಲಕ್ಷ ರೂ., ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆಯಿಂದ 2 ಲಕ್ಷ ರೂ. ಲಭಿಸಿದ ಹಿನ್ನೆಲೆಯಲ್ಲಿ ಒಟ್ಟು 6 ಲಕ್ಷ ರೂ.ನಲ್ಲಿ ಸುಭದ್ರ ನಿವಾಸ ನಿರ್ಮಾಣವಾಗಿದೆ. ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕತನ ನಡೆಸುವ ಮೂಲಕ ಇವರು ಜೀವನ ನಡೆಸುತ್ತಿದ್ದಾರೆ.

ಸೋದರಿಯೂ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ ಮರಳಿದರೆ ಈ ಮನೆಯಲ್ಲಿ ನೆಮ್ಮದಿಯಿಂದ ಬಾಳಬಹುದು ಎಂಬ ನಿರೀಕ್ಷೆಯಲ್ಲಿ ಶರ್ಮಿಳಾ ಅವರಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಕೋವಿಡ್‌ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು...

  • ಕುಂದಾಪುರ: ಉಡುಪಿ ಜಿಲ್ಲೆಯ ಶಿರೂರು, ಹೊಸಂಗಡಿ, ಕುಂದಾಪುರ ನಗರ ಭಾಗದಲ್ಲಿ ಮಾತ್ರವಲ್ಲದೆ ಅಂಪಾರು ಮತ್ತಿತರ ಕೆಲವೆಡೆಗಳಲ್ಲಿಯೂ ಶನಿವಾರದಿಂದ ಚೆಕ್‌ಪೋಸ್ಟ್‌ಗಳನ್ನು...

  • ಬೆಂಗಳೂರು: ಕೋವಿಡ್‌ 19 ಭೀತಿ ಹಿನ್ನೆಲೆಯಲ್ಲಿ ಎ. 15ರ ತನಕ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ಪಾವತಿ ಮಾಡಿಸಿಕೊಳ್ಳದಂತೆ...

  • ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ಸೋಂಕು ಹೆಚ್ಚುತ್ತಿದ್ದು, ಶನಿವಾರ 18 ಮಂದಿಗೆ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 82ಕ್ಕೆ ಏರಿದೆ. ಶನಿವಾರ...

  • ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮಾ. 27ರಂದು ಒಂದೇ ದಿನ ಎರಡು ಕೋವಿಡ್‌ 19 ಸೋಂಕು ದೃಢ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದ್‌ಗೆ ನಿರ್ಧರಿಸಿದ್ದು,...