ವಿದ್ಯಾರ್ಥಿಗಳು ಹೊಸತನಕ್ಕೆ ತೆರೆದುಕೊಳ್ಳಿ: ಕೇರಳ ರಾಜ್ಯಪಾಲ

Team Udayavani, Mar 3, 2020, 12:30 AM IST

students

ಕಾಸರಗೋಡು: ಎಲ್ಲರಿಗೂ ಶಿಕ್ಷಣ ಲಭಿಸಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಗರಿಷ್ಠ ಯತ್ನ ನಡೆಸುತ್ತಿದೆ. ಬದಲಾಗುತ್ತಿರುವ ಕಾಲಮಾನಕ್ಕೆ ತಕ್ಕಂತೆ ಶಿಕ್ಷಣವನ್ನು ಒದಗಿಸುವಲ್ಲಿ ಭಾರತೀಯ ಶಿಕ್ಷಣ ಕ್ರಮ ಪರ್ಯಾಪ್ತವಾಗಿದೆ. ನಾಳೆಯ ಸಮಾಜಕ್ಕಾಗಿ ಸ್ವಯಂ ನವೀಕರಣಕ್ಕೆ ಪ್ರತಿ ವಿದ್ಯಾರ್ಥಿ ಸಿದ್ಧನಾಗಬೇಕು ಎಂದುಎಂದು ಕೇರಳ ರಾಜ್ಯಪಾಲ ಆರೀಫ್‌ ಮಹಮ್ಮದ್‌ ಖಾನ್‌ ಹೇಳಿದರು.ಪೆರಿಯ ಕೇಂದ್ರೀಯ ವಿಶ್ವವಿದ್ಯಾ ನಿಲಯದಲ್ಲಿ ಸೋಮವಾರ ನಡೆದ 4ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಸಾಮಾಜಿಕ ಕಾಳಜಿ ಅಗತ್ಯ
ಸಮಾಜದ ಬಗ್ಗೆ ವಿದ್ಯಾರ್ಥಿಗಳಿಗೆ ಬದ್ಧತೆ ಇರಬೇಕು. ಸಮಾಜದ ಒಗ್ಗಟ್ಟಿನ ಫಲವಾಗಿ ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿದ ಕೇಂದ್ರೀಯ ವಿ.ವಿ. ವಿದ್ಯಾರ್ಥಿಗಳಿಗೆ ದೊರೆತಿದೆ. ಈ ಹಿನ್ನೆಲೆಯನ್ನು ಜಾಗೃತಿಯಿಂದ ಸದಾ ನೆನಪಿಸಿ ಕೊಳ್ಳಬೇಕು ಎಂದವರು ಹೇಳಿದರು.

ಗಮನಾರ್ಹ ಮುನ್ನಡೆ
ಕೇಂದ್ರೀಯ ವಿ.ವಿ.ಯಲ್ಲಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣ ಹೊಂದಿದರಲ್ಲಿ ಶೇ. 65ರಷ್ಟು ಮಂದಿ ವಿದ್ಯಾರ್ಥಿನಿಯರಾಗಿದ್ದಾರೆ. ತೃಶ್ಶೂರ್‌ ಕೃಷಿ ವಿ.ವಿ.ಯಲ್ಲೂ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣ ಹೊಂದಿರುವವರಲ್ಲಿ ಶೇ. 90 ಮಂದಿ ಮತ್ತು ಕೊಚ್ಚಿ ಮೀನುಗಾರಿಕೆ ವಿ.ವಿ.ಯಲ್ಲಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣರಾಗಿರುವರಲ್ಲಿ ಶೇ. 100 ಮಂದಿ ವಿದ್ಯಾರ್ಥಿನಿಯರೇ ಆಗಿದ್ದಾರೆ. ಇದು ಶಿಕ್ಷಣ ರಂಗದ ಗಮನಾರ್ಹ ಮುನ್ನಡೆ. ಕೇವಲ 11 ವರ್ಷದ ವಯೋಮಾನ ಹೊಂದಿರುವ ಪೆರಿಯ ಕೇಂದ್ರೀಯ ವಿ.ವಿ.ಯಲ್ಲಿ ಇನ್ನೂ ಹೆಚ್ಚಿನ ಔನ್ನತ್ಯ ಗಳಿಕೆ ಸಾಧ್ಯವಿದೆ. ವಿದ್ಯಾರ್ಥಿಗಳ, ಹೆತ್ತವರ ಜೊತೆಗೆ ಸಾರ್ವಜನಿಕ ಬೆಂಬಲವೂ ಈ ನಿಟ್ಟಿನಲ್ಲಿ ಅಗತ್ಯ ಎಂದು ರಾಜ್ಯಪಾಲರು ಹೇಳಿದರು.

ಸಂಶೋಧನೆ ಪೂರ್ಣಗೊಳಿಸಿದ ಪಿಎಚ್‌.ಡಿ.ಯ, ಸ್ನಾತಕೋತ್ತರ ಪದವಿ, ಪದವಿಯ 610 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಿತು. ವಿ.ವಿ. ಕುಲಪತಿ ಪ್ರೊ| ಎಸ್‌.ವಿ. ಶೇಷಗಿರಿ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಉಪಕುಲಪತಿ ಡಾ| ಕೆ. ಜಯಪ್ರಸಾದ್‌, ರಿಜಿಸ್ಟ್ರಾರ್‌ ಡಾ| ಎ. ರಾಧಾಕೃಷ್ಣನ್‌ ನಾಯರ್‌, ಹಣಕಾಸು ಅಧಿಕಾರಿ ಡಾ| ಬಿ.ಆರ್‌. ಪ್ರಸನ್ನ ಕುಮಾರ್‌ ಉಪಸ್ಥಿತರಿ ದ್ದರು. ಡಾ| ಜಿ. ಗೋಪಕುಮಾರ್‌ ಸ್ವಾಗತಿ ಸಿದರು. ಪರೀಕ್ಷೆ ನಿಯಂತ್ರಣ ಅಧಿಕಾರಿ ಡಾ| ಎಂ. ಮುರಳೀಧರನ್‌ ನಂಬ್ಯಾರ್‌ ವಂದಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.