ತಲಪಾಡಿ: ವಿಜಯೋತ್ಸವ ವೇಳೆ ಕಲ್ಲುತೂರಾಟ, ಲಾಠಿಚಾರ್ಜ್‌

Team Udayavani, May 26, 2019, 6:20 AM IST

talapady

ಉಳ್ಳಾಲ: ವಿಜಯಿ ಅಭ್ಯರ್ಥಿ ರಾಜ ಮೋಹನ್‌ ಉಣ್ಣಿತ್ತಾನ್‌ ಪರ ಮಂಜೇಶ್ವರದ ಮುಸ್ಲಿಂ ಲೀಗ್‌ ಕಾರ್ಯಕರ್ತರು ತಲಪಾಡಿಯಲ್ಲಿ ವಿಜಯೋತ್ಸವ ಆಚರಿಸುವುದನ್ನು ತಡೆದ ಉಳ್ಳಾಲ ಪೊಲೀಸರ ವಿರುದ್ಧ ಯುಡಿಎಫ್‌ ಕಾರ್ಯಕರ್ತರು ಕಲ್ಲುತೂರಾಟ ನಡೆಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್‌ ನಡೆಸಿ ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಉಣ್ಣಿತ್ತಾನ್‌ ಜಯ ಗಳಿಸಿದ ಹಿನ್ನೆಲೆಯಲ್ಲಿ ಮುಸ್ಲಿಂ ಲೀಗ್‌ ಧ್ವಜವನ್ನು ಹಿಡಿದ ನಾಲ್ವರು ಎರಡು ಬೈಕ್‌ಗಳಲ್ಲಿ ತಲಪಾಡಿ ಟೋಲ್‌ಗೇಟ್‌ ಬಳಿ ಬಂದಾಗ ಸ್ಥಳೀಯರು ವಿರೋಧಿಸಿದ್ದು, ಮಾತಿನ ಚಕಮಕಿ ನಡೆಯಿತು. ಸ್ಥಳೀಯರ ವಿರೋಧದಿಂದ ಮರಳಿದ ತಂಡ ಮಂಜೇಶ್ವರದಲ್ಲಿದ್ದ ಇತರ ಕಾರ್ಯಕರ್ತರಿಗೆ ಮಾಹಿತಿ ನೀಡಿತು. ಆ ಬಳಿಕ ಅವರೆಲ್ಲ ಸುಮಾರು 50 ದ್ವಿಚಕ್ರ ವಾಹನಗಳಲ್ಲಿ ಮುಸ್ಲಿಂ ಲೀಗ್‌ ಧ್ವಜ ಹಿಡಿದು ತಲಪಾಡಿಗೆ ಆಗಮಿಸಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭ ಪೊಲೀಸರು ಕಾರ್ಯಕರ್ತರನ್ನು ಹಿಂದಕ್ಕೆ ಹೋಗುವಂತೆ ತಿಳಿಸಿದರೂ ಕೇಳಲಿಲ್ಲ. ಬದಲಾಗಿ ಪೊಲೀಸರು ಮತ್ತು ಪೊಲೀಸ್‌ ವಾಹನದ ಮೇಲೆ ಕಲ್ಲು ತೂರಾಟ ನಡೆಸಲು ಮುಂದಾದರು. ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿ ಹಲವು ವಾಹನಗಳನ್ನು ವಶಕ್ಕೆ ತೆಗೆದುಕೊಂಡರು.

ಬಸ್‌ಗೆ ಕಲ್ಲು ತೂರಾಟ
ಈ ಘಟನೆಯ ಬಳಿಕ ಕಾರ್ಯಕರ್ತರು ಕೇರಳ ಗಡಿಪ್ರದೇಶದಲ್ಲಿ ಮೂಡಿಗೆರೆಯಿಂದ ತ್ರಿಕ್ಕರಿಪುರ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್ಸಿಗೆ ಕಲ್ಲೆಸೆದು ಗಾಜು ಪುಡಿ ಮಾಡಿದರು. ಕೇರಳ ಪೊಲೀಸರು ಬಸ್‌ಗೆ ರಕ್ಷಣೆ ನೀಡಿ ಕಾರ್ಯಕರ್ತರನ್ನು ಚದುರಿಸಿದರು.
ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಮಂಗಳೂರು ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ಅವರು ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮಾರ್ಗದರ್ಶನ ನೀಡಿದರು. ಈ ನಿಟ್ಟಿನಲ್ಲಿ ಕೇರಳ ಪೊಲೀಸರೊಂದಿಗೆ ಚರ್ಚೆ ನಡೆಸಿದರು. ಡಿಸಿಪಿ ಹನುಮಂತರಾಯ, ಎಸಿಪಿ ರಾಮರಾವ್‌, ಇನ್‌ಸ್ಪೆಕ್ಟರ್‌ ಗೋಪಿಕೃಷ್ಣ ಟಿ.ಆರ್‌., ಎಸ್‌.ಐ. ಗುರುವಪ್ಪ ಕಾಂತಿ ಸ್ಥಳದಲ್ಲಿದ್ದು, ಕೆಎಸ್‌ಆರ್‌ಪಿ ಪೊಲೀಸ್‌ ಪಡೆಯನ್ನು ತಲಪಾಡಿ ಗಡಿಪ್ರದೇಶದಲ್ಲಿ ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.