ಕಾರು, ಟೆಂಪೋಗೆ ಟಿಪ್ಪರ್‌ ಢಿಕ್ಕಿ

Team Udayavani, Apr 20, 2019, 9:36 AM IST

ಗುರುಪುರ: ಅತಿವೇಗದಿಂದ ಬಂದ ಟಿಪ್ಪರ್‌ ಲಾರಿಯೊಂದು ಟೆಂಪೋ ಹಾಗೂ ಕಾರಿಗೆ ಗುದ್ದಿ ಬಳಿಕ ಮಗುಚಿಬಿದ್ದ ಘಟನೆ ಗುರುಪುರ ಕುಕ್ಕುದಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದೆ.

ಗುರುಪುರದಿಂದ ಜಲ್ಲಿಹುಡಿಯನ್ನು ತುಂಬಿಸಿಕೊಂಡು ವಾಮಂಜೂರಿನತ್ತ ಸಾಗುತ್ತಿದ್ದ ಟಿಪ್ಪರ್‌, ಇಂಟರ್‌ಲಾಕ್‌ ಹೇರಿಕೊಂಡು ಎದುರಿನಿಂದ ಬರುತ್ತಿದ್ದ ಟೆಂಪೋಗೆ ಗುದ್ದಿದೆ. ಬಳಿಕ ಮುಂದೆ ಸಾಗಿ ಕಾರಿಗೆ ಢಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಟಿಪ್ಪರ್‌ನ ಟಯರ್‌ ಎಂಡ್‌ ತುಂಡಾಗಿ ಮಗುಚಿಬಿದ್ದಿತು. ಟೆಂಪೋ ಹಾಗೂ ಕಾರು ಜಖಂಗೊಂಡಿದೆ. ಕಾರಿನ ಚಾಲಕ ಗಂಜಿಮಠದ ಬಾಲಕೃಷ್ಣ ಶೆಟ್ಟಿ ಅವರಿಗೆ ತರಚು ಗಾಯಗಳಾಗಿವೆ.

ಟಿಪ್ಪರ್‌ನಲ್ಲಿದ್ದ ವಾಮಂಜೂರಿನ ವ್ಯಕ್ತಿ ಹೊರಗೆ ಜಿಗಿದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸುಮಾರು ಅರ್ಧಗಂಟೆ ಟ್ರಾಫಿಕ್‌ ಜಾಂ ಉಂಟಾಗಿತ್ತು. ಬಜಪೆ ಪೊಲೀಸರು ಧಾವಿಸಿ ಕ್ರೇನ್‌ ಮೂಲಕ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಚಿಕ್ಕಮಗಳೂರು: ವಿಶಾಲ ದೃಷ್ಟಿಕೋನದೊಂದಿಗೆ ಭಾರತದ ಸಾರ್ವಭೌಮತ್ವದ ಮಹತ್ವವನ್ನು ಜಗತ್ತಿಗೆ ಸಾರಿ ಹೇಳುವ ಉದ್ದೇಶದೊಂದಿಗೆ ಸಂವಿಧಾನ ರಚನೆ ಮೂಲಕ ಎಲ್ಲಾ ವರ್ಗದ...

  • ಚಿಕ್ಕಮಗಳೂರು: ಅಡುಗೆ ಅನಿಲವನ್ನು ಸರಿಯಾಗಿ ಪೂರೈಕೆ ಮಾಡದಿರುವುದನ್ನು ಖಂಡಿಸಿ ಮಂಗಳವಾರ ಬೆಳಗ್ಗೆ ಗ್ರಾಹಕರು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಜಿಲ್ಲಾಧಿಕಾರಿ...

  • ಚಿಕ್ಕಬಳ್ಳಾಪುರ: ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣಾ ಅಖಾಡದ ಮತ ಎಣಿಕೆಗೆ ಇನ್ನೂ ಕೇವಲ 24 ಗಂಟೆ ಮಾತ್ರ ಬಾಕಿ ಇದೆ. ಆದರೆ ಜಿಲ್ಲೆಯಲ್ಲಿ...

  • ಚಿಕ್ಕಬಳ್ಳಾಪುರ: ಕಳೆದ ಏ.18 ರಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಒಟ್ಟು 2,284 ಮತಗಟ್ಟೆಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮೇ.23 ರಂದು ನಗರದ ಹೊರ ವಲಯದ...

  • ಸಂತೆಮರಹಳ್ಳಿ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿರುವ ಪಡಸಾಲೆಯಲ್ಲಿ ಆಧಾರ್‌ ನೋಂದಣಿಯನ್ನು ಪುನಾರಂಭ ಮಾಡಲಾಗಿದೆ. ಈ ಬಗ್ಗೆ ಉದಯವಾಣಿ ಮೇ. 15 ರಂದು ಆಧಾರ್‌...

  • ಚಾಮರಾಜನಗರ: ಬಸವಾದಿ ಶರಣರು ಸ್ಥಾಪನೆ ಮಾಡಿರುವ ವೀರಶೈವ ಲಿಂಗಾಯತ ಧರ್ಮ ಸಂವಿಧಾನ ಕಲಂನಲ್ಲಿ ಪ್ರತ್ಯೇಕ ಧರ್ಮವಾಗುವ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಸಮಾಜದ ಬಂಧುಗಳು...